________________
- ಕನ್ನಡ ಸಾಹಿತ್ಯ ಪರಿಷತ್ತಿನಿಂದ ಮರುಮುದ್ರಣಗೊಳ್ಳುತ್ತಿರುವ ಮತ್ತು ಹೊಸದಾಗಿ - ಮುದ್ರಿತವಾಗುತ್ತಿರುವ ವಿವಿಧ ಪ್ರಕಾರಗಳ ಪುಸ್ತಕಗಳನ್ನು ಸಹೃದಯರು ಮೆಚ್ಚಿ ಸ್ವೀಕರಿಸಲು
ಯೋಗವಾಗುವಂತೆ ಆಕರ್ಷಕ ವಿನ್ಯಾಸಗಳಲ್ಲಿ ಸಿದ್ದಪಡಿಸಿದ ಮೇಲೆ ಅವುಗಳ ಮಾರಾಟದ ಪ್ರಮಾಣ ಹೆಚ್ಚುತ್ತಿರುವುದನ್ನು ಕಂಡು ನನಗೆ ಸಂತೋಷವಾಗಿದೆ. ಓದುಗರು ಬಯಸುವ ಪುಸ್ತಕಗಳನ್ನು ಅವರ ಕೈಗೆ ತಲಪುವಂತೆ ಮಾಡುವುದೇ ಮಸ್ತಕೋದ್ಯಮದ
ಪ್ರಾಥಮಿಕ ಆಶಯ.
ಈ ಉದ್ಯಮವನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಿ, ಕಾಲಕಾಲಕ್ಕೆ ಬದಲಾಗುತ್ತಿರುವ ಓದುಗರ ಅಭಿರುಚಿಗೆ * ಸಂದಿಸುತ್ತ, ಆ ಕ್ಷೇತ್ರದಲ್ಲಿ ಬಹುವೇಗವಾಗಿ ಸಾಗುತ್ತಿರುವ ಪ್ರಕಾಶಕರ ನಡುವೆ ಕನ್ನಡ ಸರಸ್ವತಿಯ
ಆರಾಧನೆ ಮಾಡುತ್ತಿದ್ದೇವೆಂದು ಭಾವಿಸುವುದರ ಜೊತೆಗೆ ಹೊಸಕಾಲದ ಅಗತ್ಯಕ್ಕೆ ಅನುಗುಣವಾಗಿ ಬದಲಾಗುವುದೇ ಜೀವಂತಿಕೆಯ ಲಕ್ಷಣ ಎಂದು * ಕನ್ನಡ ಸಾಹಿತ್ಯ ಪರಿಷತ್ತು ಪರಿಗಣಿಸಿದೆ.
ಪುಂಡಲೀಕ ಹಾಲಂಬಿ ಅಧ್ಯಕ್ಷರು, ಕನ್ನಡ ಸಾಹಿತ್ಯ ಪರಿಷತ್ತು
ಕನ್ನಡ ಸಾಹಿತ್ಯ ಪರಿಷತ್ತು ಪಂಪ ಮಹಾಕವಿ ರಸ್ತೆ, ಚಾಮರಾಜಪೇಟೆ
ಬೆಂಗಳೂರು-೫೬೦೦೧೮
ರೂ. ೫೦/