________________
ಪ್ರಥಮಾಶ್ವಾಸಂ | ೧೦೭ ವll ಬೆನ್ನ ಬೆನ್ನನೆ ಬರೆ ಚಿನ್ನ ಬಿನ್ನನೆ ಪೋಗಿಖಚರಪುತ ತ ತುಂಗ ವನ್ಯ ಮತಂಗಜ ದಂತಾಘಾತ ನಿಪಾತಿತ ಸಲ್ಲಕೀ
ಭಂಗಮಂ ಮಣಿಮೌಕ್ತಿಕ ನೀಳ ಸ್ಕೂಳ ಶಿಲಾ ಪವಿಭಾಷಿತೋ | ತುಂಗಮಂ ಮುನಿಮುಖಮುಖಾಂಭೋಜೋದರ ನಿರ್ಗತಮಂತ್ರ ಪೂ
ತಾಂಗಮಂ ನೃಪನೆಯ್ದಿದನುದ್ಯಚ್ಛಂಗಮನಾ ಶತಶೃಂಗಮಂ || ೧೧೫
ವ|| ಆ ಪರ್ವತದ ವಿಪುಳ ವನೋಪಕಂಠಂಗಳೊಳ್ ತಾಪಸಕನೈಯರ್ ನಡಪಿದಳಲತೆಗಳೊಳೆಗಿ ತುಲುಗಿ ಸಾಮವೇದಧ್ವನಿಯೊಳ್ ಮೊರೆವ ತುಂಬಿಗಳುಮಂ ಪಳಗಿದ ತದಾಶ್ರಮದ ತರುಗಳ ಮೇಗಿರ್ದು ಪುಗಿಲ್ ಪುಗಿಲೆಂದಿತ್ತ ಬನ್ನಿಮಿರಿಮೆಂಬ ಪೊಂಬಣ್ಣದ ಕೋಗಿಲೆಗಳುಮಂ ಮುನಿಕುಮಾರರೋದುವ ವೇದವೇದಾಂಗಂಗಳಂ ತಪುವಿಡಿದು ಜಡಿದು ಬಗ್ಗಿಸುವ ಪದುಮರಾಗದ ಬಣ್ಣದರಗಿಳಿಗಳುಮಂ ಸುರಭಿಗಳ ತೊರೆದ ಮೊಲೆಗಳನುಣ್ಣವು ಮಳೆಗಳಂ ಪೋಗೆ ನೂಂಕಿ ಕೂಂಕಿ ಮೊಲೆಗಳನುಣ್ಣ ಕಿಶೋರ ಕೇಸರಿಗಳುಮಂ ತಮೊಡನೆ ನಲಿದಾಡುವ ಕಿಶೋರಕೇಸರಿಗಳಂ ಪಿಡಿದು ತೆಗೆವ ಕರಿಕಳಭಂಗಳುಮನಾಗಳ ಪಾಯ್ಕ ಪುಲಿಗಳ ಮಳಗಳೊಳ್ ಪರಿದಾಡುವ ತರುಣ ಹರಿಣಂಗಳುಮಂ ಮತ್ತ ಮುತ್ತ ಕುರುಡತವಸಿಗಳ ಕೈಯಂ ಪಿಡಿದುಯ್ದವರ ಗುಹೆಗಳಂ ಪುಗಿಪ ಪೋಲಮಡಿಪ ಚಪಳ ಕಪಿಗಳುಮಂ ಹೂಮಾಗ್ನಿಯನೆಅಂಕೆಯ ಗಾಳಿಯಿಂ ನಂದಲೀಯದುರಿವುವ ರಾಜಹಂಸಗಳುಮಂ
ಗೆ
೧೧೫, ಎತ್ತರವಾದ ಕಾಡಾನೆಯ ದಂತದ ಪೆಟ್ಟಿನಿಂದ ಉರುಳಿಸಲ್ಪಟ್ಟು ಮುರಿದ ಬೇಲದ ಮರಗಳನ್ನುಳ್ಳುದೂ ಮುತ್ತು ಮತ್ತು ರತ್ನಗಳನ್ನೊಳಗೊಂಡ ನೀಲವೂ ಸ್ಫೂಲವೂ ಆದ ಕಲ್ಲುಬಂಡೆಗಳಿಂದ ಪ್ರಕಾಶಮಾನವಾದುದೂ ಬಹಳ ಎತ್ತರವಾದುದೂ ಋಷಿಶ್ರೇಷ್ಠರ ಮುಖಕಮಲಗಳಿಂದ ಹೊರಹೊರಟ ಮಂತ್ರಗಳಿಂದ ಪವಿತ್ರವಾದ ಶರೀರವುಳ್ಳದೂ ಎತ್ತರವಾದ ಲೋಡುಗಳಿಂದ ಕೂಡಿದುದೂ ಆದ ಶತಶೃಂಗ ಪರ್ವತವನ್ನು ಪಾಂಡುರಾಜನು ಬಂದು ಸೇರಿದನು. ವ|| ಆ ಪರ್ವತದ ತಪ್ಪಲು ಪ್ರದೇಶದಲ್ಲಿ ತಾಪಸಕನೈಯರು ಸಾಕಿ ಬೆಳೆಸಿದ ಬಳ್ಳಿಗಳನ್ನು ಮುತ್ತಿ ಗುಂಪುಗೂಡೆ ಸಾಮವೇದಧ್ವನಿಯ ಶಬ್ದಮಾಡುತ್ತಿರುವ ದುಂಬಿಗಳನ್ನೂ ಫಲಭಾರದಿಂದ ಬಾಗಿದ ಆ ಆಶ್ರಮದ ಗಿಡಗಳ ಮೇಲಿದ್ದು 'ಪ್ರವೇಶಿಸಿ, ಬನ್ನಿ, ಇಲ್ಲಿ ವಾಸಿಸಿ' ಎನ್ನುತ್ತಿರುವ ಹೊಂಬಣ್ಣದ ಕೋಗಿಲೆಗಳನ್ನೂ ಋಷಿಕುಮಾರರು ಅಧ್ಯಯನ ಮಾಡುತ್ತಿರುವ ವೇದವೇದಾಂಗಗಳಲ್ಲಿ ತಪ್ಪನ್ನು ಕಂಡುಹಿಡಿದು ಆಕ್ಷೇಪಿಸಿ ಸರಿಪಡಿಸುವ ಪದ್ಧರಾಗವೆಂಬ ರತ್ನದ ಬಣ್ಣದಿಂದ ಕೂಡಿದ ಶ್ರೇಷ್ಠವಾದ ಗಿಳಿಗಳನ್ನೂ ಹಸುಗಳ ಹಾಲು ತುಂಬಿದ ಕೆಚ್ಚಲುಗಳನ್ನು ಉಣ್ಣುತ್ತಿರುವ ಅವುಗಳ ಕರುಗಳನ್ನು ಪಕ್ಕಕ್ಕೆ ತಳ್ಳಿ ಓರೆಯಾಗಿ ಹಾಲುಕುಡಿಯುತ್ತಿರುವ ಸಿಂಹದ ಮರಿಗಳನ್ನೂ ತಮ್ಮೊಡನೆ ನಲಿದಾಡುತ್ತಿರುವ ಸಿಂಹದ ಮರಿಗಳನ್ನು ಹಿಡಿದೆಳೆಯುವ ಆನೆಯ ಮರಿಗಳನ್ನೂ ಆಗಾಗ ಅಲ್ಲಿ ಎಡೆಯಾಡುತ್ತಿರುವ ಹುಲಿಯ ಮರಿಗಳ ಜೊತೆಯಲ್ಲಿ ಹರಿದಾಡುತ್ತಿರುವ ಜಿಂಕೆಯ ಮರಿಗಳನ್ನೂ ಮತ್ತು ಕುರುಡರಾದ ಮುದಿತಪಸ್ವಿಗಳ ಕೈ ಹಿಡಿದು ಅವರ ಗುಹೆಗಳನ್ನು ಪ್ರವೇಶಮಾಡಿಸುವ ಹಾಗೆಯೇ ಅಲ್ಲಿಂದ ಹೊರಡಿಸುವ ಚಪಳವಾದ ಕಪಿಗಳನ್ನೂ ಹೋಮಾಗ್ನಿಯು ನಂದಿಹೋಗದಂತೆ ತಮ್ಮ ರಕ್ಕೆಯ ಗಾಳಿಯಿಂದ ಬೀಸಿ ಉರಿಸುತ್ತಿರುವ