________________
ಪ್ರಥಮಾಶ್ವಾಸಂ | ೧೦೯ ವ|| ಎಂದು ಚಿಂತಾಕ್ರಾಂತಿಯಾಗಿರ್ದ ಕುಂತಿಯಂ ಕಂಡು ಪಾಂಡುರಾಜನೇಕಾಂತ ದೂಳಿಂತೆಂದಂ
ಉ| ಚಿಂತೆಯಿದೇನೊ ಸಂತತಿಗೆ ಮಕ್ಕಳ ನೆಟ್ಟನ ಬಾರ್ತಯಪೊಡಿ
ನಿಂತಿರವೇಡ ದಿವ್ಯ ಮುನಿಪುಂಗವರಂ ಬಗೆದೀರ್ಪಿನಂ ನಿಜಾ | ತ್ಯಂತ ಪತಿವ್ರತಾಗುಣದಿನರ್ಚಿಸಿ ಮಚ್ಚಿಸು ನೀಂ ದಿಗಂತ ವಿ ಶ್ರಾಂತ ಯಶರ್ಕಳಂ ವರ ತನೂಭವರಂ ಪಡೆ ನೀಂ ತಳೋದರೀll ೧೧೮
ವಗಿ ಎಂದೊಡೆ ಕೊಂತಿಯಿಂತೆಂದಳೆನ್ನ ಕನ್ನಿಕೆಯಾ ಕಾಲದೊಳ್ ನಾನೆನ್ನ ಮಾವಂ ಕೊಂತಿಭೋಜನ ಮನೆಯೊಳ್ ಬಳೆವಂದು ದುರ್ವಾಸ ಮಹಾಮುನಿಯರಮ್ಮ ಮನೆಗೆ ನಿಚ್ಚಂ ಬರ್ಪರವರೆನ್ನ ವಿನಯಕ್ಕಂ ಭಕ್ತಿಗಂ ಬೆಸಕೆಯ್ದುದರ್ಕಂ ಮೆಚ್ಚಿ ಮಂತ್ರಾಕ್ಷರಂಗಳನಝಂ ವರವಿತ್ತರೀಯಮ್ಹು ಮಂತ್ರಕಯ್ಯರ್ಮಕ್ಕಳಂ ನಿನ್ನ ಬಗೆಗೆ ಬಂದವರನಾಹ್ವಾನಂ ಗೆಯ್ಯಲವರ ಪೋಲ್ವೆಯ ಮಕ್ಕಳು ಪಡವೆಯೆಂದು ಬೆಸಸಿದೊಡೀಗಳೆನ್ನ ಪುಣ್ಯದಿಂ ದೊರೆಕೊಂಡು ದೊಳ್ಳಿತ್ತೆಂಬುದಂ ದಿವ್ಯಮುನಿಮಾಕ್ಕಮಮೋಘವಾಕ್ಕಮಕ್ಕುಮದರ್ಕೆನುಂ ಚಿಂತಿಸಲ್ವೇಡೆಂದೂಡಂತ ಗೆನೆಂದು ತೀರ್ಥಜಲಂಗಳಂ ಮಿಂದು ದಳಿಂಬವನುಟ್ಟು ಮುತ್ತಿನ ತೊಡಿಗೆಗಳಂ ತೊಟ್ಟು ದರ್ಭಶಯನದೊಳಿರ್ದು
ಹೂವಿನಂತೆ ನಿಷ್ಪಲವಾಯಿತು. ವ|| ಎಂಬ ಚಿಂತೆಯಿಂದ ಕೂಡಿದ್ದ ಕುಂತಿಯನ್ನು ನೋಡಿ ಪಾಂಡುರಾಜನು ರಹಸ್ಯವಾಗಿ ಹೀಗೆಂದು ಹೇಳಿದನು. ೧೧೮. ಕೃಶೋದರಿಯಾದ ಎಲ್ ಕುಂತಿಯೇ ಈ ಚಿಂತೆಯೇಕೆ ನಿನಗೆ? ನಮ್ಮ ವಂಶಕ್ಕೆ ನೇರವಾಗಿ ಪುತ್ರಸಂತಾನದ ಪ್ರಾಪ್ತಿಯಾಗಬೇಕಾದರೆ ಇನ್ನು ಮೇಲೆ ನೀನು ಹೀಗಿರಬೇಡ; ಋಷಿಶ್ರೇಷ್ಠರಿಂದ ನಿನ್ನ ಇಷ್ಟಾರ್ಥಸಿದ್ದಿಯಾಗುವ ಹಾಗೆ ನಿನ್ನ ವಿಶೇಷವಾದ ಪತಿವ್ರತಾಗುಣದಿಂದ ನೀನು ಪೂಜೆಮಾಡಿ ಅವರನ್ನು ಮೆಚ್ಚಿಸು. ದಿಕ್ಕುಗಳ ಕೊನೆಯವರೆಗೆ ವ್ಯಾಪ್ತಿಯಾದ ಯಶಸ್ಸಿನಿಂದ ಕೂಡಿದ ಶ್ರೇಷ್ಠರಾದ ಮಕ್ಕಳನ್ನು ಪಡೆಯುತ್ತೀಯೆ ವರಿ ಎಂದು ಹೇಳಲು ಕುಂತಿಯು ಹೀಗೆಂದಳು - ನಾನು ಕನ್ನಿಕೆಯಾಗಿ ನನ್ನ ಮಾವನಾದ ಕುಂತಿಭೋಜನ ಮನೆಯಲ್ಲಿ ಬೆಳೆಯುತ್ತಿರುವಾಗ ದುರ್ವಾಸ ಮಹರ್ಷಿಗಳು ನಮ್ಮ ಮನೆಗೆ ಪ್ರತಿದಿನವೂ ಬರುತ್ತಿದ್ದವರು ನನ್ನ ವಿನಯಕ್ಕೂ ಭಕ್ತಿಗೂ ಸೇವೆ ಮಾಡಿದುದಕ್ಕೂ ಮೆಚ್ಚಿ ಅಯ್ದು ಮಂತ್ರಾಕ್ಷರಗಳನ್ನು ವರವಾಗಿ ಕೊಟ್ಟರು. ಈ ಅಯ್ತು ಮಂತ್ರಕ್ಕೂ ನಿನ್ನ ಮನಸ್ಸಿಗೆ ಬಂದವರನ್ನು ನೆನೆದು ಆಹ್ವಾನ ಮಾಡಲು ಅವರನ್ನು ಹೋಲುವ ಅಯ್ದು ಮಕ್ಕಳನ್ನು ಪಡೆಯುತ್ತೀಯೆ ಎಂದು ಅಪ್ಪಣೆ ಕೊಡಿಸಿದರು. ಈಗ ಅದು ನನ್ನ ಪುಣ್ಯದಿಂದ ದೊರೆಕೊಂಡುದು ಒಳ್ಳೆಯದಾಯಿತು ಎಂದು ಹೇಳಿದಳು. ಪಾಂಡುವು 'ದಿವ್ಯಋಷಿಗಳ ಮಾತು ಬಹುಬೆಲೆಯುಳ್ಳದ್ದು; ಅದಕ್ಕೇನೂ ಯೋಚಿಸಬೇಡ, ಹಾಗೆಯೇ ಮಾಡು' ಎಂದನು. ಕುಂತಿಯು ಹಾಗೆಯೇ ಮಾಡುತ್ತೇನೆಂದು ಹೇಳಿ ಪವಿತ್ರತೀರ್ಥಗಳಲ್ಲಿ ಸ್ನಾನಮಾಡಿ ಶುಭ್ರವಸ್ತ್ರವನ್ನು ಧರಿಸಿ ಮುತ್ತಿನ ಆಭರಣವನ್ನು ತೊಟ್ಟು ದರ್ಭೆಯಿಂದ ಮಾಡಿದ ಹಾಸಿಗೆ ಮೇಲಿದ್ದು