________________
ದ್ವಿತೀಯಾಶ್ಚಾಸಂ | ೧೪೧ ಜವ್ವನದ ಮುಂಬಣ್ಣದಂತೆ ಕರ್ಪಂ ಕೈಕೊಂಡು ಕತ್ತುರಿಯಲ್ ಬರೆದಂತಪ್ಪ ವಿಕ್ರಾಂತ ತುಂಗನ ಮಾಸಗಳಾತನ ತೀವ್ರ ಪ್ರತಾಪಾನಳ ಧೂಮಲೇಖೆಯಂತಾದುವು ಪುಳಿಯೋಳಲೆದ ಪವಳದ ಬಟ್ಟಿನಂತ ಸೊಗಯಿಸುವ ಸಂಸಾರಸಾರೋದಯನ ಬಿಂಬಾಧರಮನಂಗರಾಗರಸದುರುಳಿ ಯಂತಾದುದು ರಸದಾರಿಮದ ಬಿತ್ತುಮಂ ಪೊಸ ಮುತ್ತುಮಂ ಮುಕ್ಕುಳಿಸಿದಂತಪ್ಪ ವಿಬುಧವನಜವನ ಕಳಹಂಸನ ದಂತಪಟ್ಟಿಗಳಮ್ಮತಕಿರಣನ ಕಾಂತಿಗಳನಿಳಿಸುವಂತಾದುವು ಮಡಿದು ತಂದಿಟ್ಟ ಪೊಸನೆಯ್ದಿಲ ಕಾವನಾವಗಂ ಗಲ್ಲ ರತ್ನಕುಂಡಲಂಗಳ ಪೊಳಪನೊಳಕೊಂಡಂತೆ ನಸುನೇ ಕರ್ಣಾಟೀ ಕರ್ಣಪೂರನ ಪಾಲೆಗಳುಂ ಸರಸ್ವತಿಯಾಡುವ ಲೀಲಾಂದೋಳದಂತಾದುವು ಬಳ್ಳೋಳ ಬೆಳೆದಳಗೌಂಗಿನಂತೆ ಲೋಕದ ಚಿಲ್ವಲ್ಲಮನೊಳಕೊಂಡು ರೇಖೆಗೊಂಡ ಲಾಟೀ ಲಲಾಮನ ಪರಿಣದ ಕಂಧರಂ ಯುವರಾಜ ಕಂಠಿಕಾಭರಣಮಂ ಕಟ್ಟುವುದರ್ಕೆ ನೋಂತು ತನ್ನ ಚೆಲ್ಬನಲ್ಲದೆ ಪರ ಚೆಲ್ಬನಾಸ್‌ವಡದಂತಾದುದು ಕುಲದ ಚಲದ ಮ್ಯಮಯೊಳ್ ತನ್ನನೆ ನೋಡಿದ ಸಂತೋಷದೊಳುತ್ಸಾಹಮಾದಂತ ಸೊಗಯಿಸುವ ಸಮಸ್ಯಕಮರುವಿನ ಭುಜಶಿಖರಂಗಳ್ ಕುಲಶಿಖರಿ ಶಿಖರಂಗಳಂತಾದುವು ವ್ಯಾಳ ಗಜಂಗಳು ಮನಂಕದ ಬರ್ದೆಯರುಮನುಗಿಬಗಿಮಾಡಿದ ಸಂತೋಷದೊಳ್ ಬಳ್ಳಳ ಬಳದ ವಿಕ್ರಾಂತತುಂಗನ ನಿಡುದೋಳ ಗಣಿಕಾಜನಕ್ಕೆ ಕಾಮಪಾಶಂಗಳುಮರಾತಿಜನಕ್ಕೆ ಯಮಪಾಶಂಗಳುಮಾದುವು
ವಾಸನೆಯಲ್ಲದೆ ಇತರರ ವಾಸನೆಗೆ ಆಸೆಪಡದಂತಾಯಿತು! ಹೊಸಪ್ರಾಯದ ಮೊದಲ ಬಣ್ಣದಂತೆ ಕಪ್ಪಾಗಿ ಕಸ್ತೂರಿಯಿಂದ ಬರೆದಂತಿರುವ ವಿಕ್ರಾಂತತುಂಗನ ಮೀಸೆಗಳು ಅವನ ಭಯಂಕರವಾದ ಪ್ರಾತಾಪಗ್ಗಿಯ ಹೊಗೆಯ ರೇಖೆಯಂತಾದುವು; ಹುಳಿಯಿಂದ ತೊಳದ ಹವಳದ ಬಟ್ಟಿನಂತೆ ಸೊಗಯಿಸುವ ಸಂಸಾರಸಾರೋದಯನ ಕೆಂಪಾದ ತುಟಿಯು ಕಾಮರಸದ ಉಂಡೆಯಂತಾಯಿತು; ದಾಳಿಂಬದ ಬೀಜಗಳನ್ನೂ ಹೂಸಮುತ್ತುಗಳನ್ನೂ ಉಗುಳುವಂತಿದ್ದ ವಿಬುಧವನಜವನಕಳಹಂಸನ ಹಲ್ಲಿನ ಸಾಲುಗಳು ಚಂದ್ರನ ಕಾಂತಿಯನ್ನು ತಿರಸ್ಕರಿಸುವಂತಾದುವು; ಮಡಿಸಿ ತಂದಿರಿಸಿದ ಹೊಸನೆಯ್ದಲೆಯ ಕಾವನ್ನು ಯಾವಾಗಲೂ ಗೆದ್ದಿರುವ ರತ್ನದ ಹತ್ತು ಕಡುಕುಗಳ ಹೊಳಪನ್ನೊಳಕೊಂಡು ಹಾಗೆಯೇ ಸ್ವಲ್ಪ ಜೋಲಾಡುತ್ತಿರುವ ಕರ್ಣಾಟೀಕರ್ಣಪೂರನ ಕಿವಿಯ ಹಾಲೆಗಳು ಸರಸ್ವತಿಯು ತೂಗುತ್ತಿರುವ ಆಟದುಯ್ಯಾಲೆಯಂತಾದುವು; ಬಳಬಳನೆ (ಸೊಂಪಾಗಿ) ಬೆಳೆದ ಎಳೆ ಅಡಿಕೆಯಂತೆ ಲೋಕಸೌಂದರ್ಯವನ್ನೆಲ್ಲ ತನ್ನಲ್ಲಿ ಸೇರಿಸಿಕೊಂಡು ಗೆರೆಯನ್ನು ಹೊಂದಿದ ಲಾಟೀಲಲಾಮನ ತುಂಬುಗೊರಳು ಯುವರಾಜಪಟ್ಟಾಭೀಷೇಕಕ್ಕೆ ಯೋಗ್ಯವಾದ ಒಡವೆಯನ್ನು ಧರಿಸುವುದಕ್ಕೆ ವ್ರತಮಾಡಿ ತನ್ನ ಸೌಂದರ್ಯವನ್ನೇ ಅಲ್ಲದೆ ಇತರ ಸೌಂದರ್ಯಕ್ಕೂ ಅಸೆಪಡುವಹಾಗಾಯಿತು. ಕುಲ ಮತ್ತು ಛಲದ ಮಹಿಮೆಯಲ್ಲಿ ತನ್ನನ್ನೇ ನೋಡಿದ ಸಂತೋಷವು ಉತ್ಸಾಹವಾದ ಹಾಗೆ ಸೊಗಯಿಸುವ ಸಮರೈಕಮೇರುವಿನ ಭುಜದ ಮೇಲುಭಾಗಗಳು ಕುಲಪರ್ವತದ ಶಿಖರಗಳ ಹಾಗೆ ಆದುವು; ದುಷ್ಟ ಆನೆಗಳನ್ನೂ ಸುಪ್ರಸಿದ್ದರಾದ ಸುಮಂಗಲಿಯರನ್ನೂ (ಕುಲಸ್ತೀಯರನ್ನೂ) ಹೆದರಿಸಿದ ಸಂತೋಷದಲ್ಲಿ ಸುಪುಷ್ಟವಾಗಿ ಬೆಳೆದ ವಿಕ್ರಾಂತತುಂಗನ ದೀರ್ಘವಾದ ತೋಳುಗಳು ವೇಶ್ಯಾಸ್ತ್ರೀಯರಿಗೆ ಕಾಮಪಾಶವೂ ಶತ್ರುರಾಜರಿಗೆ ಯಮಪಾಶವೂ ಆದುವು; ಕೆಂಪು ಮುಳ್ಳುಮುತ್ತುಗದ ಚಿಗುರಿನ ಹಾಗೆ