________________
ದ್ವಿತೀಯಾಶ್ವಾಸಂ | ೧೬೫ ಪಿದರನ್ನೆಗಮಿತ್ತ ದುರ್ಯೋಧನನವರ ಪೋರನಳದು ಪುರೋಚನನೆಂಬ ತನ್ನ ಮನದನ್ನನಪ್ಪ ಪೆರ್ಗಡೆಯೋಳ್ ಲಾಕ್ಷಾಗೃಹೂಪಾಯಮುಂ ಚರ್ಚಿಸಿವಾರಣಾವತಮನೊಂದೇ ದಿವಸದೊಳೆಯು ವಂತಾಗೆ ರಥಮಂ ಸಮಕಟ್ಟಿ ನಾಲ್ಕುಲಕ್ಕ ಬಲಮಂ ನೆರಂಬೆಟ್ಟು ಕಳಿಸಿದನಾಗಳ್ಕಂll ಉದಿತೋದಿತ ನೀಂ ನಿನ
ಗುದಯದ ಮೇಲುದಯಮಂದು ನೆಗಟ್ಟರಿಗಂಗ | ಭ್ಯುದಯಮನಪುವ ತಳದಿಂ
ದುದಯಾಚಳಚುಂಬಿಬಿಂಬವಿನನುದಯಿಸಿದಂ || ವ|| ಆ ಪ್ರಾವದೊಳ್ - ಮಂಗಳಪಾಠಕರ ಮಂಗಳವೃತೋಚ್ಚಾರಣೆಗಳಿಂದಂ ಪಾಂಡವರಯ್ಯರುಮುಲಿತನಯನರಾಗಿ ನಿತ್ಯನಿಯಮಂಗಳಂ ನಿರ್ವತಿ್ರಸಿ ಮಂಗಳವಸದನಂ ಗೊಂಡು ಮಹಾಬ್ರಾಹ್ಮಣರ್ ಪರಸುವ ಪರಕೆಗಳುಮನಿಕ್ಕುವ ಸೇಸೆಗಳುಮನಾಂತುಕೊಳುತ್ತುಂ ಪಲವುಂ ತಂದ ಪ್ರಯಾಣ ಪಟಹಂಗಳೆಸೆಯ ಶುಭ ಲಕ್ಷಣ ಲಕ್ಷಿತಂಗಳಪ್ಪಾಜಾನೇಯ ಕಾಂಭೋಜ ವಾಜಿರಾಜಿಗಳೊಳ್ ಪೂಡಿದ ದಿವ್ಯರಥಂಗಳನೇ ದಿವಬಾಣಾಸನ ಬಾಣಪಾಣಿಗಳಾಗಿ ನಿಜಪರಿಜನಂ ಬೆರಸು ಗಾಂಗೇಯ ದ್ರೋಣ ಕೃಪ ವಿದುರರ್ ಕಳಿಪುತ್ತುಂ ಬರೆ ಪುರಜನಂಗಳೆಲ್ಲಂ ನೆರೆದವರ ಪೋಗಿಂಗಲ್ಲು ಸೈರಿಸಲಾಟದ
ಕುಂತಿಗೂ ಆ ವಿಷಯವನ್ನು ತಿಳಿಸಿದರು. ಅಷ್ಟರಲ್ಲಿ ಇತ್ತಕಡೆ ದುರ್ಯೊಧನನು ಅವರು ಹೋಗುವುದನ್ನು ತಿಳಿದು ಪುರೋಚನನೆಂಬ ತನ್ನ ಆಪ್ತನಾದ ಹೆಗ್ಗಡೆಯಲ್ಲಿ ಅರಗಿನ ಮನೆಯ ಉಪಾಯವನ್ನು ವಿಚಾರ ಚರ್ಚೆಮಾಡಿ ವಾರಣಾವತವನ್ನು ಒಂದೇ ದಿವಸದಲ್ಲಿ ಹೋಗಿ ಸೇರುವ ಹಾಗೆ ರಥವನ್ನು ಸಿದ್ದಪಡಿಸಿ ನಾಲ್ಕು ಲಕ್ಷ ಸೈನ್ಯವನ್ನೂ ಅವನ ಸಹಾಯಕ್ಕಾಗಿ ಕಳುಹಿಸಿದನು; ಆಗ-೯೩. 'ನೀನು ಅಭಿವೃದ್ದಿಯಾಗುವವನು, ನಿನಗೆ ವೃದ್ದಿಯ ಮೇಲೆ ವೃದ್ಧಿಯಾಗುತ್ತದೆ' ಎಂದು ಪ್ರಸಿದ್ಧನಾದ ಅರಿಕೇಸರಿಗೆ ಅವನ ಅಭಿವೃದ್ಧಿಯನ್ನು ಸೂಚಿಸುವ ರೀತಿಯಿಂದ ಉದಯಪರ್ವತಸ್ಪರ್ಶಿಯಾದ ಸೂರ್ಯನು ಉದಯಿಸಿದನು. ವ|| ಆ ಸಂದರ್ಭದಲ್ಲಿ ಹೊಗಳುಭಟರ ಮಂಗಳಪದ್ಯಪಠನಗಳಿಂದ ಪಾಂಡವರೆದು ಜನರೂ ಅರಳಿದ ಕಣ್ಣುಗಳನ್ನುಳ್ಳವರಾಗಿ ಪ್ರತಿದಿನವೂ ಮಾಡಬೇಕಾದ ನಿತ್ಯಕರ್ಮಗಳನ್ನು ಮುಗಿಸಿ ಮಂಗಳಕರವಾದ ಅಲಂಕಾರವನ್ನು ಮಾಡಿಕೊಂಡು ವೃದ್ದ ಬ್ರಾಹ್ಮಣರುಗಳು ಆಶೀರ್ವದಿಸುವ ಹರಕೆಗಳನ್ನೂ ಚೆಲ್ಲುತ್ತಿರುವ ಮಂತ್ರಾಕ್ಷತೆಗಳನ್ನೂ ತಲೆಯಲ್ಲಿ ಧರಿಸಿಕೊಳ್ಳುತ್ತ ನಾನಾರೀತಿಯ ಪ್ರಯಾಣಭೇರಿಗಳು ಪ್ರಕಾಶಿಸುತ್ತಿರಲು ಶುಭಲಕ್ಷಣಗಳಿಂದ ಗುರುತಿಸಲ್ಪಟ್ಟ ಒಳ್ಳೆಯ ತಳಿಯಿಂದ ಕೂಡಿದ ಕಾಂಭೋಜದೇಶದ ಉತ್ತಮ ಕುದುರೆಗಳ ಸಮೂಹದಿಂದ ಸಿದ್ಧಪಡಿಸಿದ ದಿವ್ಯರಥಗಳನ್ನು ಹತ್ತಿ ದೇವದತ್ತವಾದ ಬಿಲ್ಲುಬಾಣಗಳನ್ನು ಕಯ್ಯಲ್ಲಿ ಹಿಡಿದವರಾಗಿ ತಮ್ಮ ಪರಿವಾರದೊಂದಿಗೆ ಸೇರಿಕೊಂಡು ಹಸ್ತಿನಾಪುರದಿಂದ ಹೊರಟರು. ಭೀಷ್ಮ ದ್ರೋಣ ಕೃಪ ವಿದುರರು ದಾರಿ ಕಳುಹಿಸಲು ಬಂದರು. ಪಟ್ಟಣಿಗರೆಲ್ಲರೂ ಸೇರಿ ಅವರು ಹೊರಟುಹೋಗುವಿಕೆಗಾಗಿ ದುಃಖಪಟ್ಟು ಸಹಿಸಲಾರದೆ ಶೋಕಿಸಿದರು.