________________
ಚತುರ್ಥಾಶ್ವಾಸಂ | ೨೨೧ ಉll ಚಾಗದ ಭೋಗದಕ್ಕರದ ಗೇಯದ ಗೊಟ್ಟಿಯಲಂಪಿನಿಂಪುಗ
ಇಾಗರವಾದ ಮಾನಸರೆ ಮಾನಸರಂತವರಾಗಿ ಪುಟ್ಟಲೇ || ನಾಗಿಯುಮೇನೊ ತೀರ್ದಪುದೆ ತೀರದೊಡಂ ಮಣಿದುಂಬಿಯಾಗಿ ಮೇಣ್ ಕೋಗಿಲೆಯಾಗಿ ಪುಟ್ಟುವುದು ನಂದನದೊಳ್ ವನವಾಸಿ ದೇಶದೊಳ್ || ೨೯
ತೆಂಕಣ ಗಾಳಿ ಸೋಂಕಿದೊಡಮೊಳ್ಳುಡಿಗೇಳ್ಕೊಡಮಿಂಪನಾಳ ಗೇ ಯಂ ಕಿವಿವೊಕ್ಕೊಡಂ ಬಿರಿದ ಮಲ್ಲಿಗೆಗಂಡೊಡಮಾದ ಕೆಂದಲಂ | ಪಂಗಡೆಗೊಂಡೊಡಂ ಮಧುಮಹೋತ್ಸವಮಾದೊಡಮೇನನೆಂಬೆನಾ
ರಂಕುಸವಿಟೊಡಂ ನೆನೆವುದೆನ್ನ ಮನಂ ವನವಾಸಿ ದೇಶಮಂ || ೩೦ ಮll ಅಮರ್ದಂ ಮುಕ್ಕುಳಿಪಂತುಟಪ್ಪ 'ಸುಸಿಲೊಂದಿಪುಂ ತಗುಳೊಂದು ಗೇ
ಯಮುವಾದಕ್ಕರಗೊಟ್ಟಿಯುಂ ಚದುರರೊಳ್ತಾತುಂ ಕುಳಿರ್ ಕೋಟ್ಟಿ ಜೋಂ | ಪಮುಮೇವೇಟ್ಟುದನುಳ್ಳ ಮಯ್ದುಕಮುಮಿಂತನ್ನಂ ಕರಂ ನೋಡಿ ನಾ ಡ ಮನಂಗೊಂಡಿರೆ ತೆಂಕನಾಡ ಮಳಯಲಿನ್ನೇಂ ಮನಂ ಬರ್ಕುಮೇ || ೩೧
ವ|| ಎಂದರಿಕೇಸರಿ ತೆಂಕನಾಡಂ ನಾಡಾಡಿಯಲ್ಲದೆ ಮೆಚ್ಚುತ್ತುಮಾ ನಾಡನೊಂದೆ ಬಿಲ್ಗೊಳುಂಡಿಗೆ ಸಾಧ್ಯಂ ಮಾಡಿ ಪಶ್ಚಿಮ ದಿಗ್ವಿಭಾಗಾಭಿಮುಖನಾಗಿ ಬಂದು
ಉದ್ಯಾನವನಗಳಲ್ಲಿಯೂ ನೋಡುವುದಾದರೆ ಸೊಗಸಾಗಿ ಫಲ ಬಿಟ್ಟಿರುವ ಮಾವಿನ ಮರಗಳೇ; ದಟ್ಟವಾಗಿ ಸೇರಿಕೊಂಡಿರುವ ವಿಳ್ಯದೆಲೆಯ ಬಳ್ಳಿಗಳೇ, ಹೂವನ್ನು ಬಿಟ್ಟಿರುವ ಜಾಜಿ ಮತ್ತು ಸಂಪಗೆ ಗಿಡಗಳೇ; ಸುಸ್ವರವಾಗಿ ಧ್ವನಿಮಾಡುವ ಕೋಗಿಲೆ, ಝೇಂಕರಿಸುವ ದುಂಬಿಗಳೇ, ಪ್ರೇಯಸಿಯರ ಒಳ್ಳೆಯ ಮುಖಗಳೇ, ನಗುಮುಖದಲ್ಲಿ ಪ್ರತಿಭಟಿಸಿ ಕೂಡುವ ನಲ್ಲರೇ. ೨೯. ಆ ಬನವಾಸಿ ದೇಶದಲ್ಲಿ ತ್ಯಾಗ, ಭೋಗ, ವಿದ್ಯೆ, ಸಂಗೀತ-ಗೋಷ್ಠಿಗಳ ಸಂತೋಷ ಸೌಖ್ಯಕ್ಕೆ ಅಧೀನರಾಗಿರುವ ಮನುಷ್ಯರೇ ಮನುಷ್ಯರು. ಅಂತಹ ಅದೃಷ್ಟಶಾಲಿಗಳಾದ ಮನುಷ್ಯರಾಗಿ ಹುಟ್ಟಲು ಏನಾದರೂ . ತಾನೇ ಸಾಧ್ಯವೆ? ಹಾಗೆ ಸಾಧ್ಯವಾಗದಿದ್ದರೂ ಆ ಬನವಾಸಿ ದೇಶದ ನಂದನವನಗಳಲ್ಲಿ , ಮರಿದುಂಬಿಯಾಗಿಯೋ ಅಥವಾ ಕೋಗಿಲೆಯಾಗಿಯೋ ಹುಟ್ಟಬೇಕು. ೩೦. (ಅತಿ ಸುಖಹೇತುಗಳಾದ) ದಕ್ಷಿಣ ದಿಕ್ಕಿನ ತಂಪಾದ ಗಾಳಿಯ ಸ್ಪರ್ಶವಾದರೂ ಒಳ್ಳೆಯ ಮಾತನ್ನು ಕೇಳಿದರೂ ಇಂಪಾದ ಗಾನವು ಕಿವಿಯನ್ನು ಪ್ರವೇಶಿಸಿದರೂ ಅರಳಿದ ಮಲ್ಲಿಗೆಯ ಹೂವನ್ನು ಕಂಡರೂ ನಿದ್ರಾಮುದ್ರಿತವಾದ ರತಿಸೌಖ್ಯಕ್ಕೆ ಪಾತ್ರವಾದರೂ ವಸಂತೋತ್ಸವ ಪ್ರಾಪ್ತವಾದರೂ ಏನು ಹೇಳಲಿ ಯಾರು (ಬೇಡವೆಂದು ತಡೆದು) ಅಂಕುಶದಿಂದ ತಿವಿದರೂ ನನ್ನ ಮನಸ್ಸು ಬನವಾಸಿ ದೇಶವನ್ನು ನೆನೆಯುತ್ತದೆ. ೩೧. ಅಮೃತವನ್ನೂ ಮೀರಿಸುವಷ್ಟು ಹಿತಕರವಾದ ರತಿಕ್ರೀಡೆಯ ಮಾಧುರ್ಯವೂ ಬೆನ್ನಹಿಂದೆಯೇ ಅಟ್ಟಿ ಬರುತ್ತಿರುವ ಸಂಗೀತವೂ ನೆರೆದಿರುವ ವಿದ್ವಾಂಸರ ಗೋಷ್ಠಿಯೂ ಜಾಣರ ಒಳ್ಳೆಯ ಮಾತುಗಳೂ ತಂಪನ್ನುಂಟುಮಾಡುವ ಹೂಗೊಂಚಲುಗಳೂ ಯಾವ ಸುಖವನ್ನುಂಟುಮಾಡುವುವೋ ಆ ಸುಖಗಳು ನನ್ನ ಮನಸ್ಸನ್ನಾಕ್ರಮಿಸಿದ್ದರೂ ದಕ್ಷಿಣ ದೇಶವನ್ನು ಮರೆಯಲು ನನ್ನ ಮನಸ್ಸು ಒಪ್ಪುವುದಿಲ್ಲ. ವ|| ಎಂದು ಅರಿಕೇಸರಿಯು ದಕ್ಷಿಣ ದೇಶವನ್ನು ವಿಶೇಷವಾಗಿ ಮೆಚ್ಚುತ್ತ ಆ ನಾಡನ್ನು ಶ್ರಮ