________________
೨೫೬ | ಪಂಪಭಾರತಂ ಹಂಸ ಧವಳ ಶಯಾತಳದೊಳ್ ಗಂಗಾನದೀ ಪುಳಿನ ಪರಿಸರ ಪ್ರದೇಶದೊಳ್ ಮದೊಆಗುವೈರಾವತದಂತೆ ಪವಡಿಸಿ ಕಿಟೆದಾನುಂ ಬೇಗದೊಳ್ ಸುಭದ್ರೆಯಂ ಕನಸಿನೊಳ ಕಂಡು ನನಸೆಂದು ಬಗೆದು ಮಂಗಳಪಾಠಕರವಂಗಳೊಳ್ ಭೋಂಕನೆಕ್ಕತ್ರನನ್ನೆಗಂ
ಪುದಿದ ತಮಂ ಮದೀಯ ಕಿರಣಾಳಿಯನಾನದವೋಲೆ ನಿನ್ನ ನಾ - ವದಟರುಮಾನರೆನ್ನುದಯಮಭ್ಯುದಯಂ ನಿನಗೆಂದು ಕನ್ನೆಯಂ | ಪದದೊಡಗೊಂಡು ಪೋಗಿರದಿರೆಂದು ಗುಣಾರ್ಣವ ಭೂಭುಜಂಗ ಕ. “ದಿರೊಳೆ ಬಟ್ಟೆದೋಜುವವೊಲಂದೊಗೆದಂ ಕಮಲೈಕಬಾಂಧವಂ 11೧೧೧
ಇದು ವಿವಿಧ ವಿಬುಧಜನವಿನುತ ಜಿನಪದಾಂಭೋಜ ವರ ಪ್ರಸಾದೋತ್ಪನ್ನ ಪ್ರಸನ್ನ ಗಂಭೀರ ವಚನ ರಚನ ಚತುರ ಕವಿತಾಗುಣಾರ್ಣವ ವಿರಚಿತಮಪ್ಪ - ವಿಕ್ರಮಾರ್ಜುನ ವಿಜಯದೊಳ್
.ಚತುರ್ಥಾಶ್ವಾಸಂ
ಉಪ್ಪರಿಗೆಯ ಮನೆಗೆ ಬಂದು ಹಂಸದಷ್ಟು ಬೆಳ್ಳಗಿರುವ ಹಾಸಿಗೆಯಲ್ಲಿ ಗಂಗಾನದಿಯ ಮರಳು ದಿಣ್ಣೆಯ ಪ್ರದೇಶದಲ್ಲಿ ಮರೆತು ಮಲಗಿರುವ ಐರಾವತದ ಹಾಗೆ ಮಲಗಿದ್ದು ಕೆಲವು ಕಾಲದ ಮೇಲೆ ಸುಭದ್ರೆಯನ್ನು ಕನಸಿನಲ್ಲಿ ಕಂಡು ಅದು ಪ್ರತ್ಯಕ್ಷವೇ ಎಂದು ಭಾವಿಸುವಷ್ಟರಲ್ಲಿ ಮಂಗಳವನ್ನು ಹಾಡುವ ಹೊಗಳುಭಟರ ಶಬ್ದಗಳಿಂದ ಇದ್ದಕ್ಕಿದ್ದ ಹಾಗೆ ಎದ್ದನು. ಅಷ್ಟರಲ್ಲಿ ೧೧೧. ವ್ಯಾಪ್ತವಾದ ಕತ್ತಲೆಯು ನನ್ನ ಕಿರಣಸಮೂಹಗಳನ್ನು ಎದುರಿಸಲಾರದು. ಹಾಗೆಯೇ ನಿನ್ನನ್ನು ಯಾವ ಶೂರರೂ ಎದುರಿಸರು. ನನ್ನ ಉದಯವು ನಿನಗೆ ಶ್ರೇಯಸ್ಕರವಾದುದು, ಕನೈಯಾದ ಸುಭದ್ರೆಯನ್ನು ಬಯಸಿ ಜೊತೆಯಲ್ಲಿ ಕರೆದುಕೊಂಡು ಹೋಗು (ಹೋಗದೇ ಇರಬೇಡ) ಇಲ್ಲಿರಬೇಡ ಎಂದು ಅರ್ಜುನ ಮಹಾರಾಜನಿಗೆ ಮುಂದಿನ ದಾರಿ ತೋರಿಸುವ ಹಾಗೆ ಸೂರ್ಯನು ಆ ದಿನ ಉದಯವಾದನು. ವ|| ಇದು ಅನೇಕ ದೇವತೆಗಳಿಂದ ಸ್ತುತಿಸಲ್ಪಟ್ಟ ಜಿನಪಾದ ಕಮಲಗಳ ವರಪ್ರಸಾದದಿಂದ ಹುಟ್ಟಿದುದೂ ತಿಳಿಯೂ ಗಂಭೀರವೂ ಆದ ಮಾತುಗಳ ರಚನೆಯಲ್ಲಿ ಚಾತುರ್ಯವನ್ನುಳ್ಳ ಕವಿತಾ ಗುಣಾರ್ಣವನಿಂದ ರಚಿತವಾದ ವಿಕ್ರಮಾರ್ಜುನ ವಿಜಯದಲ್ಲಿ ನಾಲ್ಕನೆಯ ಆಶ್ವಾಸವು.