________________
ಪಂಚಮಾಶ್ವಾಸಂ | ೨೬೫ ಮll ಕುಡಲಿರ್ದಂ ಬಲದೇವನೆನ್ನನುಜೆಯಂ ದುರ್ಯೋಧನಂಗಾನೊಡಂ
ಬಡೆನೀವಕ್ತಿಯದಾಗಳುಂ ನಿನಗೆ ದಲ್ ಪದ್ಮಾಸನಂ ತಾನೆ ನೇ | ರ್ಪಡಿಸಲ್ ಕೂಡಿದನಿರ್ಪುದಲ್ಕು ನಯಮಿ ಪೊಚ್ ಪೊಟ್ಟಾಗೆ ನೀ ನೊಡಗೊಂಡುಯ್ಯುದು ಕನ್ನೆಯಂ ತಡೆಯದಿರ್ ವಿದ್ವಿಷವಿದ್ರಾವಣಾ || ೨೦
ವ|| ಅಂತು ಪೋಗವೋಗೆ ಬಲದೇವನನುಮತದೊಳ್ ಪೆಂಗಂ ತಗುಳ್ಳ ಯಾದವ ಬಲಮುಂಟಿಡದನಂಬುಗಾಣಿಸಲ್ ನೀನೆ ಸಾಲ್ವೆಯುಟಿದುದಂ ಮಾಣಿಸಲಾರೆ ಸಾನಿದುವೆ ಮುಹೂರ್ತಮಾಗೆ ನಡೆವುದೆಂದು ಶೈಬ್ಯ ಬಳಾಹಕ ಮೇಘವರ್ಣ ಸುಗ್ರೀವಂಗಳೆಂಬ ನಾಲ್ಕು ಕುದುರೆಗಳೊಳ್ ಪೂಡಿದ ದಿವ್ಯರಥಮನೆಸಗಲ್ ದಾರುಕನೆಂಬ ಸಾರಥಿಯನೀವುದುಮಾ ರಥಮಂ ಮನೋರಥಂ ಬೆರಸೇಳೆ ಚೂತಲತಿಕೆವೆರಸು ಸುಭದ್ರೆಯನೇಲಲ್ವೇಚ್ಚುದಾತ್ತನಾರಾಯಣಂ ನಾರಾಯಣನ ಪರಸಿದ ಪರಕೆಗಳುಮಂ ಕೆಯ್ಯೋಂಡು ಬೀಟೆಂಡಿಂದ್ರಪ್ರಸ್ಥದ ಬಟ್ಟೆಯೊಳ್ ಸುಖಪ್ರಯಾಣಂಗೆಯನನ್ನೆಗಮಿತ್ತ ಬಲದೇವಂ ಸುಭದ್ರೆಯಂ ಸಾಮಂತಚೂಡಾಮಣಿಯುಯ್ದ ನೆಂಬುದಂ ಕೇಳುಮ ಉಂದೆನ್ನಂ ಕುಡಲಿರ್ದ ಕೂಸನೊಡಗೊಂಡುಯ್ತಾತನಂ ತಾಗಿ ತ
ಇಳೆಯಲ್ ಕೋಡಗಗಟ್ಟುಗಟ್ಟಿ ತರಲಿನ್ನಾರಾರ್ಪರಂತಪ್ಪ ಪೊ | ಚಜಸಾಮಂತರೆ ಪೋಗಿಯೆಂದು ಪಲರ ಪೇಯ್ದಾಗಳೆಯಂದರಂ ತೋಚಿಕೊಳ್ವಂತಿರೆ ಕೊಂಡುವಂದರಿಗನೆಚ್ಚುಗೋಡು ಧಾರಾಜಳಂ || ೨೧
ಲಜ್ಜೆಯನ್ನೂ ನಡುಕವನ್ನೂ ಹೋಗಲಾಡಿಸಿ ಹೇಳಿದನು. ೨೦. ಬಲರಾಮನು ನನ್ನ ತಂಗಿಯನ್ನು ದುರ್ಯೋಧನನಿಗೆ ದಾನಮಾಡಲಿದ್ದಾನೆ. ನಾನು ಅದಕ್ಕೆ ಒಪ್ಪುವುದಿಲ್ಲ. ನಿನಗೇ ದಾನಮಾಡಬೇಕೆಂಬುದು ನನ್ನ ನಿಶ್ಚಯ. ಇದನ್ನು ಸರಿಪಡಿಸಿ ಕೊಳ್ಳುವುದಕ್ಕಾಗಿಯೇ ಬ್ರಹ್ಮನು ನಿಮ್ಮಿಬ್ಬರನ್ನೂ ಒಟ್ಟಿಗೆ ಸೇರಿಸಿದ್ದಾನೆ. ಇನ್ನು ಮೇಲೆ ಇಲ್ಲಿರುವುದು ನೀತಿಯಲ್ಲ, ಈ ಹೊತ್ತೆ ಹೊತ್ತಾಗಿ ಅಂದರೆ ಈಗಲೇ ಕನೈಯನ್ನು ಜೊತೆಯಲ್ಲಿ ಕರೆದುಕೊಂಡು ಹೊರಟುಹೋಗು, ವಿದ್ವಿಷ್ಟವಿದ್ರಾವಣನಾದ ಅರ್ಜುನನೇ ತಡಮಾಡಬೇಡ. ವಹಾಗೆ ಹೋಗುವಾಗಲೂ ಬಲರಾಮನ ಅಭಿಪ್ರಾಯದಂತೆ ಬೆನ್ನಟ್ಟಿಬರುವ ಯಾದವ ಬಲವುಂಟಾದರೂ ಅದಕ್ಕೆ ಬಾಣಪ್ರಯೋಗಮಾಡಲು ನೀನು ಶಕ್ತನಾಗಿದ್ದೀಯೆ. ಉಳಿದುದನ್ನು ತಪ್ಪಿಸಲು ನಾನು ಬಲ್ಲೆ, ಇದನ್ನೇ ಸುಮುಹೂರ್ತವನ್ನಾಗಿ ಎಣಿಸಿ ಹೊರಡು ಎಂದು ಶೈಬ್ಯ, ಬಳಾಹಕ, ಮೇಘವರ್ಣ, ಸುಗ್ರೀವಗಳೆಂಬ ನಾಲ್ಕು ಕುದುರೆಗಳನ್ನು ಹೂಡಿದ್ದ ದಿವ್ಯರಥವನ್ನೂ ಅದನ್ನು ನಡೆಯಲು ದಾರುಕನೆಂಬ ಸಾರಥಿಯನ್ನೂ ಕೊಟ್ಟನು. ಆ ರಥವನ್ನು ಅರ್ಜುನನು ಸಂತೋಷದಿಂದ ಚೂತಲತಿಕೆಯೊಡಗೂಡಿ ಸುಭದ್ರೆಯನ್ನು ಹತ್ತಲು ಹೇಳಿ ನಾರಾಯಣನು ಹರಸಿದ ಹರಕೆಗಳನ್ನು ಅಂಗೀಕರಿಸಿ ಅವನಿಂದ ಅಪ್ಪಣೆಪಡೆದು ಇಂದ್ರಪ್ರಸ್ಥದ ದಾರಿಯಲ್ಲಿ ಸುಖಪ್ರಯಾಣಮಾಡಿದನು. ಅಷ್ಟರಲ್ಲಿ ಈ ಕಡೆ ಬಲರಾಮನು ಸುಭದ್ರೆಯನ್ನು ಸಾಮಂತಚೂಡಾಮಣಿಯಾದ ಅರ್ಜುನನು ಕರೆದುಕೊಂಡು ಹೋದನೆಂಬುದನ್ನು ಕೇಳಿ-೨೧. “ನನ್ನನ್ನು ಲಕ್ಷ್ಯಮಾಡದೆ ದಾನಮಾಡಲಿದ್ದ ಹೆಣ್ಣನ್ನು ಜೊತೆಯಲ್ಲಿ ಕೊಂಡು ಹೋದವನನ್ನು ಎದುರಿಸಿ ಹೋರಾಡಲೂ ಕಪಿಯನ್ನು ಕಟ್ಟುವ ಹಾಗೆ ಕಟ್ಟಿ ತರಲೂ