________________
ಪಂಚಮಾಶ್ವಾಸಂ | ೨೭೩ ಕಂ|| ಮೃಗದೋಲವರಮುಮನರಸನ
ಬಗೆಯುಮನಳೆದಲಸದೆಳಸಲೊಲಗಿಸಲ್ ನೆ | ಟೈಗೆ ಬಲ್ಕನುಳ್ಕೊಡವನ
ಲೈ ಗುಣಾರ್ಣವ ಬೇಂಟೆಕಾಲಿನೋಲಗಕಾಜಂ || ಪಿರಿಯಕ್ಕರ | ಮೃಗಮಂ ಗಾಳಿಯನಿರ್ಕಯಂ ಪಕ್ಕೆಯಂ ಗಣಿದಮಂ ಕಂಡಿಯಂ
ಮಾರ್ಕಂಡಿಯಂ ಪುಗಿಲಂ ಪೋಗಂ ಬಾರಿಯಂ ಸನ್ನೆಯಂ ನೂಲುವಮರ್ಚುವ ನಿಲ್ವೆಡೆಯಂ | ಬಗೆಯಂ ತಗೆಯನಲ್ಲಾಟಮಂ ಕಾಟಮಂ ನೋವುದಂ ಸಾವುದನೆಲ್ಲಂದದಿಂ 'ಬಗೆದಾಗಳರಸರೊಳಲ್ಲ ಕೇಳ್ ನೀಂ ಬಲ್ಲೆ ಬೇಂಟೆಕಾಯಿರೊಳೆಲ್ಲವನೆ ಬಲ್ಲಂ || ೪೩.
ವರೆಗೆ ಮತ್ತು ನೆಲನುಂ ಗಾಳಿಯುಂ ಕೆಯುಂ ಮೃಗಮುಮನಳೆದು ಕಾಲಾಳೊಳಂ ಕುದುರೆಯೊಳಮಳಗಂ ಬರಲಾನ ಬಲ್ಲೆನಿದು ಪರ್ವಂಟೆಯಂದಂ ದೀವದ ಬೇಂಟೆಯಂ ಬಿನ್ನಪಂಗಯೊಡೆ ಗಾಳಿಯುಂ ಕಚಿವುಮುಟಿವುಂ ಕಾಪುಂ ಮೇಪುಂ ತೋಡುಂ ಬೀಡು ದೆಸೆಯುಂ ಮಚ್ಚು ಚಚುಂ ಪೋಗುಂ ಮೇಗುಂ ಚೆದಳುಂ ಕೆದಕುಂ ಪರ್ಚು೦ ಕುಂದುಮನದು ಕಾಣಲುಂ ಕಾಣಿಸಲುಂ ಕಡಂಗಲುಂ ಕಡಂಗಿಸಲುಮಡಂಗಲುಮಡಂಗಿಸಲುಮೊಡ್ಡಲು ಮೊಡ್ಡಿಸಲುಂ ಪುಗಿಸಲುಂ ಮಿಗಿಸಲುಂ ಕಾಣದುದಂ ಕಾಣಿಸಲುಂ ಮಾಣದುದಂ
ಅರಿಗನೇ ನೀನು ಮೆಚ್ಚುವ ಹಾಗೆ ಮಾಡಲು ನಾನು ಬಲ್ಲೆ, ೪೨. ಪ್ರಾಣಿಗಳ ಮನಸ್ಸಿನ ಪಕ್ಷಪಾತವನ್ನೂ ಅರಸನ ಅಭಿಪ್ರಾಯವನ್ನೂ ತಿಳಿದು ಉದಾಸೀನ ಮಾಡದೆ ನೇರವಾಗಿ ಸೇವೆಮಾಡುವುದನ್ನು ತಿಳಿದಿರುವವನಲ್ಲವೇ ನಿಜವಾದ ಬೇಟೆಗಾರನೂ ಸೇವಾಳುವೂ ಆಗಿರುವವನು! ೪೩. ಪ್ರಾಣಿಗಳ ಸ್ವಭಾವವನ್ನೂ ಗಾಳಿ ಬೀಸುವ ದಿಕ್ಕನ್ನೂ ಪ್ರಾಣಿಗಳಿರುವ ಸ್ಥಳವನ್ನೂ ಅವು ಮಲಗುವ ಎಡೆಯನ್ನೂ ಅವುಗಳ ಸಂಖ್ಯೆಯನ್ನೂ ಅವು ನುಸುಳುವ ಕುಂಡಿ ಪ್ರತಿಕಂಡಿಗಳನ್ನೂ ಅವುಗಳ ಪ್ರವೇಶ ಮತ್ತು ನಿರ್ಗಮನಗಳನ್ನೂ ಅವುಗಳಿಗೆ ಉಪಯೋಗಿಸಬೇಕಾದ ಸಂಜ್ಞೆಗಳನ್ನೂ ಅವುಗಳು ಸೇರುವ ನಿಲ್ಲುವ ಸ್ಥಳವನ್ನೂ ಅವುಗಳ ಆಸಕ್ತಿ ವಿರಕ್ತಿಗಳನ್ನೂ ಅವುಗಳ, ಚಲನೆ, ಹಿಂಸೆ, ಯಾತನೆ ಸಾವುಗಳನ್ನೂ ಎಲ್ಲ ರೀತಿಯಿಂದಲೂ ಯೋಚಿಸಿದಾಗ ರಾಜರುಗಳಲ್ಲೆಲ್ಲ ನೀನೂ ಬೇಟೆಗಾರರಲ್ಲೆಲ್ಲ ನಾನೂ ಸಮರ್ಥರಾದವರೆಂಬುದನ್ನು ನೀನೆ ತಿಳಿದಿದ್ದೀಯೆ. ವli ಅಲ್ಲದೆ ನೆಲದ ಏರು ತಗ್ಗುಗಳನ್ನೂ ಗಾಳಿಯು ಬರುವ ದಿಕ್ಕನ್ನೂ ಹೆಜ್ಜೆಯ ಗುರುತುಗಳನ್ನೂ ಮೃಗಗಳನ್ನೂ ತಿಳಿದು ಪದಾತಿಸೈನ್ಯ ಮತ್ತು ಕುದುರೆಯ ಸೈನ್ಯಗಳ ಮಧ್ಯೆ ನಾನು ಬರಲು ಸಮರ್ಥ, ಇದು ಹೆಬ್ಬೇಟೆಯ ರೀತಿ; ಮೃಗಗಳನ್ನು ಒಡ್ಡಿ ಆಕರ್ಷಿಸುವ ದೀವಕ ಬೇಟೆಯನ್ನು ವಿಜ್ಞಾಪಿಸಿಗೊಳ್ಳುವುದಾದರೆ ಗಾಳಿಯ ದಿಕ್ಕನ್ನೂ ಪ್ರಾಣಿಗಳ ಹೋಗುವಿಕೆ ಮತ್ತು ಉಳಿಯುವಿಕೆಗಳನ್ನೂ ರಕ್ಷಣೆ ಮತ್ತು ಮೇವುಗಳನ್ನೂ ತೊಡುವುದನ್ನೂ ಬಿಡುವುದನ್ನೂ ದಿಕ್ಕುಗಳನ್ನೂ ಸಂಕೇತಸ್ಥಳಗಳನ್ನೂ ಆಸಕ್ತಿ ಭಯಗಳನ್ನೂ ಪೋಗುಮೇಗುಗಳನ್ನೂ (?) ಹೆದರಿಕೆ ಬೆದರಿಕೆಗಳನ್ನೂ ಹೆಚ್ಚು ಕುಂದುಗಳನ್ನೂ ತಿಳಿದು ಅವುಗಳನ್ನು ಕಾಣಲು ಕಾಣಿಸಲು ಅವುಗಳ ಮೇಲೆ ರೇಗಲೂ