________________
ಪಂಚಮಾಶ್ವಾಸಂ | ೨೭೭ ತೆಂಗಿನ ಮರಂಗಳುಮಂ ಪಸ್ವರಸು ನಟ್ಟ ಮೈಂದವಾಮಿಗಳುಮಂ ತೊವಲ್ವೆರಸು ನಟ್ಬಾಲಂಗಳುಮನಮರ ಮಾಡಿದ ಬಟ್ಟುಳಿಯ ಕಕ್ಕುಂಬ ತೊಡಂಬೆಯ ಮೂಡಿಗೆಯ ಕದಳಿಕೆಯ ಕಂಡಪಟಂಗಳುಮಂ ಪಲವುಂ ತೆಜದ ಪಲವುಂ ಪೋಣಿಯಾಗಿ ಕಟ್ಟಿದ ಬಲೆಗಳುಮಂ ಪಡಿಗಳನಮರ್ಚಿ ಬಿಲ್ಲುಂ ಕುದುರೆಯುಂ ಕಾಲಾಳುಂ ನಾಯ್ಕಳುಮಂ ತಿಣಮಿರಿಸಿ ಕೆಯ್ಯಂ ನೇಣುಮನಳವಿಯೊಳ್ ಕೂಡಿ ನಡೆಯಲ್ಲೀಟ್ಟು ಬೇಂಟೆವಸದನಂಗೊಂಡು ಕಂಡಿಯ ಬಾಗಿಲೊಳುದಾತ್ತನಾರಾಯಣನುಂ ನಾರಾಯಣನುಮಿರ್ದು ಪುಗಿಲ ಪುಲ್ಲೆಯ ಮೊದಲುರಮುಮಂ ಪಂಗಣ ಪುಲ್ಲೆಯ ನಡುವುಮನಹಳ್ ಮೂಜುಮಂ ಮೂಳೆರಡು ಮನೆರಡeಳೊಂದುಮನೆಚ್ಚು ಬಿಲ್ಲ ಬಲೆಯಂ ಮಣಿದುಕoll ಮುಂದಣ ಮಿಗಮಂ ಕಟಿಪದೆ
ಸಂದಿಸಿ ಬಟಿಗೊಳ್ತ ಮಿಗಮುಮಂ ಕಟಿಪದೆ ತಾ | ನೋಂದಳವಿದಪ್ಪದಚ್ಚು ಬ ಲಿಂದಮನಿಂ ಬಿಲ್ಲ ಬಲೆಯಂ ಪೊಗಳಿಸಿದಂ ||
೪೮ ವll ಮತ್ತು ಬೆರ್ಚಿ ಪೊಳದು ಪರಿವ ಪೊಳವುಗಳುಮಂ ತಲೆಯಂ ಕುತ್ತಿ ವಿಶಾಲಂಬರಿವ ಕರಡಿಗಳುಮನಡಂಗಿ ಪರಿವ ಪುಲಿಗಳುಮಂ ಸೋಂಕಿ ಪರಿವೆಯ ತುಮಂ ತಡಂವಟಿ ಪರಿವ ಕಡವಿನ ಕಾಡಮಯ ಮರಯು ಪಿಂಡುಗಳು
ಮಾಡಿ ನೆಟ್ಟಿರುವ, ಅಡಕೆ ಮತ್ತು ತೆಂಗಿನ ಮರಗಳು ಹಣ್ಣಿನಿಂದ ಕೂಡಿ ನೆಟ್ಟಿರುವ ಮಹೇಂದ್ರ ಬಾಳೆ, ಚಿಗುರಿನಿಂದ ಕೂಡಿ ನೆಟ್ಟಿರುವ ಆಲದ ಮರ, ಗಾಢವಾಗಿ ಸೇರಿಕೊಂಡಿರುವ ಬಟ್ಟುಳಿಯ (?) ಕಕ್ಕುಂಬದ (?) ಗೊಂಚಲುಗಳಿಂದ ಮಾಡಿದ ಬತ್ತಳಿಕೆ ಬಾವುಟ ತೆರೆಗಳು ಹಲವು ರೀತಿಯ ಹಲವು ಹೊರೆಗಳಾಗಿ ಕಟ್ಟಿದ ಬಲೆಗಳು ಬಾಗಿಲುಗಳನ್ನು (ಭದ್ರಪಡಿಸಿ) ಸೇರಿಸಿ,ಬಿಲ್ಲ, ಕುದುರೆ ಕಾಲಾಳು ನಾಯಿ ಹೆಚ್ಚುಸಂಖ್ಯೆಯ ಕೋಲು ಹಗ್ಗ ಮೊದಲಾದುವನ್ನೆಲ್ಲ ಸರಿಯಾದ ಪ್ರಮಾಣದಲ್ಲಿ ಸೇರಿಸಿ ನಡೆಯಹೇಳಿ ಬೇಟೆಯ ಉಡುಪನ್ನು (ಅಲಂಕಾರವನ್ನು ತೊಟ್ಟು ಮೃಗವು ಹೊರಗೆ ಬರುವ ಸ್ಥಳದಲ್ಲಿ ಬಾಗಿಲಲ್ಲಿ ಅರ್ಜುನ ಕೃಷ್ಣರು ನಿಂತು ಬೇಟೆಗೆ ಪ್ರಾರಂಭಮಾಡಿದರು. ಪ್ರವೇಶಮಾಡುವ ಜಿಂಕೆಯ ಎದೆಯ ಮೊದಲ ಭಾಗವನ್ನು ಹೊರಗಣ ಹುಲ್ಲೆ ಮಧ್ಯಭಾಗವನ್ನೂ ಅಯ್ದರಲ್ಲಿ ಮೂರನ್ನೂ ಮೂರಲ್ಲಿ ಎರಡನ್ನೂ ಎರಡಲ್ಲಿ ಒಂದನ್ನೂ ಹೊಡೆದು ತಮ್ಮ ಬಿಲ್ವಿದ್ಯೆಯ ಪ್ರೌಢಿಮೆಯನ್ನು ಪ್ರಕಾಶಪಡಿಸಿದರು. ೪೮. ಮುಂದೆ ಬಂದ ಮೃಗವನ್ನೂ ಸಾಯಿಸದೆ ಅದನ್ನು ಅನುಸರಿಸಿ ಹಿಂದೆಬಂದ ಮೃಗವನ್ನೂ ಕೊಲ್ಲದೆ ತಾನು ಒಂದು ಅಳತೆಯನ್ನೂ ತಪ್ಪದೆ ಅರ್ಜುನನು ಬಾಣಪ್ರಯೋಗಮಾಡಿ ಕೃಷ್ಣನು ತನ್ನ ಬಿಲ್ವಿದ್ಯೆಯನ್ನು ಹೊಗಳುವ ಹಾಗೆ ಮಾಡಿದನು. ವು ಪುನಃ ಹದರಿ ಹೊಳೆದು ಹರಿಯುವ ಜಿಂಕೆಗಳನ್ನೂ ತಲೆತಗ್ಗಿಸಿಕೊಂಡು ದೂರವಾಗಿ ಹರಿಯುವ ಕರಡಿಗಳನ್ನೂ ಅಡಗಿಸಿ ಹರಿಯುವ ಹುಲಿಗಳನ್ನೂ ಮೆಟ್ಟಿ ಓಡಿಹೋಗುವ ಮುಳ್ಳು ಹಂದಿಗಳನ್ನೂ ಅಡ್ಡಗಟ್ಟಿ ಉದ್ದವಾಗಿ ಕಾಲಿಟ್ಟು ಹರಿಯುವ ಕಡವೆ ಮತ್ತು ಕಾಡೆಮ್ಮೆಯ ಮರಿಗಳ ಹಿಂಡುಗಳನ್ನೂ ಅಳತೆದಪ್ಪದೆ ಒಂದೊಂದನ್ನೂ