________________
ಪಂಚಮಾಶ್ವಾಸಂ | ೨೭೯ ವ|| ಅಂತು ಬೇಂಟೆಯನಾಡಿ ಬುಲ್ಲು ಬೇಸಗೆಯ ನಡುವಗಲೊಳ್ ವನಕ್ರೀಡೆಗಂ ಜಲಕ್ರೀಡೆಗಮಾಸಕ್ತರಾಗಿ ಯಮುನಾನದೀತಟ ನಿಕಟವರ್ತಿಗಳಾದರಲ್ಲಿ ಚಂll ಸರಳ ತಮಾಳ ತಾಳ ಹರಿಚಂದನ ನಂದನ ಭೋಜರಾಜಿಯಿಂ
ಸುರಿವಲರೋಳಿ ತನಲತಾಂಗಿಯ ಸೂಸುವ ಸೀಸೆಯಾಯ್ತು ಭ್ರಂ | ಗರವಮದೊಂದು ಮಂಗಳರವಣೆಯಾಯ್ತು ಮನೋನುರಾಗದಿಂ* ಕರೆವವೊಲಾಯ್ತು ಮತ್ತ ಕಳಹಂಸರವಂ ಪಡೆಮಚ್ಚೆಗಂಡನಂ || ೨ ಕಂ 11 ಯಮುನಾನದೀ ತರಂಗಮ
ನಮುಂಕಿ ವನಲತೆಯ ಮನೆಗಳಂ ಸೋಂಕಿ ವನ | ಭ್ರಮಣ ಪರಿಶ್ರಮಮಂ ಮು
(ಮೆ ಕಳೆದುದು ಬಂದದೊಂದು ಮಂದಶ್ವಸನಂ || ೫೩ ವ|| ಅಂತು ಕಾಳಿಂದೀಜಲ ಶಿಶಿರಶೀಕರವಾಗಿ ಚಾರಿಯುಂ ಮೃಗಯಾ ಪರಿಭ್ರಮ ಶ್ರಮೋಷ್ಠಿತ ಸ್ವದಜಲ ಲವಹಾರಿಯುಮಾಗಿ ಬಂದ ಮಂದಾನಿಲಕ್ಕೆ ಮಯ್ಯನಾಳಸುತ್ತುಮಾ ಪುಣ್ಯನದಿಯನೆಯ್ದವಂದು ತನ್ನ ಬಾಳ ನೀರಂತೆ ಕಜಂಗಿ ಕರ್ಗಿದ ನೀರು ನೋಡಿ ವಿಕ್ರಮಾರ್ಜುನಂ ಕಾಳಾಹಿಮಥನನ ಮೊಗಮಂ ನೋಡಿ
ತನ್ನೊಳಗಣ ಪನ್ನಗನಂ ಮುದ್ದೀನ್ ಪಿಡಿದೊಗೆಯೆ ಕಾಯಲಾಗಿದೆ ಪಿರಿದುಂ | ಬನ್ನದ ಕರ್ಪೆಸೆದುದು ತೋಳ ಗಿನ್ನುಂ ಹರಗಳ ತಮಾಳ ನೀಳಚ್ಚವಿಯಿಂ |
*
ಕಂii
ಬೇಟೆಯಾಡಿ ಬಳಲಿ ಆ ಬೇಸಗೆಯ ನಡುಹಗಲಿನಲ್ಲಿ ವನಕ್ರೀಡೆಗೂ ಜಲಕ್ರೀಡೆಗೂ ಆಸೆಪಟ್ಟವರಾಗಿ ಯಮುನಾನದೀದಡಕ್ಕೆ ಬಂದರು. ಅಲ್ಲಿ ೫೨. ತೇಗು, ಹೊಂಗೆ, ತಾಳೆ, ಶ್ರೀಗಂಧ ಮತ್ತು ನಂದನವೃಕ್ಷಗಳ ಸಮೂಹಗಳಿಂದ ಸುರಿಯುತ್ತಿರುವ ಪುಷ್ಪರಾಶಿಯು ಆ ವನಲಕ್ಷಿಯು ಚೆಲ್ಲುತ್ತಿರುವ ಅಕ್ಷತೆಯಾಯಿತು. ದುಂಬಿಗಳ ಧ್ವನಿಯು ಮಂಗಳವಾದ್ಯಕ್ಕೆ ಸಮಾನವಾಯಿತು. ಮದಿಸಿದ ಕಳಹಂಸಧ್ವನಿಯು ಪಡೆಮೆಚ್ಚಿ ಗಂಡನಾದ ಅರ್ಜುನನನ್ನು ಪ್ರೀತಿಯಿಂದ ಕರೆಯುವ ಹಾಗಾಯಿತು. ೫೩. ಯಮುನಾ ನದಿಯ ಅಲೆಗಳನ್ನು ಅದುಮಿ ಕಾಡಿನ ಬಳ್ಳಿ ಮನೆಗಳನ್ನು ಮುಟ್ಟಿ ಬಂದ ಒಂದು ಮಂದಮಾರುತವು (ಅವರು) ಕಾಡಿನಲ್ಲಿ ಅಲೆದ ಆಯಾಸವನ್ನು ಮೊದಲೇ ಪರಿಹರಿಸಿತು. ವ|| ಯಮುನಾನದಿಯ ನೀರಿನ ತಂಪಾದ ತುಂತುರುಗಳ ಮೇಲೆ ಸಂಚಾರಮಾಡಿದುದೂ ಬೇಟೆಯ ಅಲೆದಾಟದ ಆಯಾಸದಿಂದುಂಟಾದ ಬೆವರಿನ ಕಣಗಳನ್ನು ಹೋಗಲಾಡಿಸಿದುದೂ ಆಗಿ ಬಂದ ಮಂದಮಾರುತಕ್ಕೆ ಶರೀರವನ್ನು ಒಡ್ಡುತ್ತಾ ಆ ಪುಣ್ಯನದಿಯ ಸಮೀಪಕ್ಕೆ ಬಂದು ತನ್ನ ಕತ್ತಿಯ ಕಾಂತಿಯಂತೆ ಕಪ್ಪಾಗಿ ಕರಗಿದ್ದ ನೀರನ್ನು ನೋಡಿ ವಿಕ್ರಮಾರ್ಜುನನು ಕಾಳಿಂಗಮರ್ದನನಾದ ಕೃಷ್ಣನನ್ನು ಕುರಿತು-೫೪. ತನ್ನಲ್ಲಿದ್ದ ಕಾಳಿಂಗಸರ್ಪವನ್ನು ಮೊದಲು ನೀನು ಹಿಡಿದೆತ್ತಿ ಎಸೆಯಲು ಅದನ್ನು ರಕ್ಷಿಸಲಾರದೆ ಆ ನದಿಗೆ ವಿಶೇಷವಾಗಿ ಅಂದುಂಟಾದ ಸೋಲಿನ ಕರಿಯಬಣ್ಣವು ಇಂದೂ ಇನ್ನೂ ಶಿವನ ಕಂಠದಂತೆಯೂ ಹೊಂಗೆಯ ಮರದಂತೆಯೂ ಈ ನದಿಯಲ್ಲಿ