________________
ಪಂಚಮಾಶ್ವಾಸಂ | ೨೯೩ ದಿವ್ಯಾಸ್ತಂಗಳ ಕೊಳುಮನಗ್ನಿದೇವನ ಶಿಖಾಕಳಾಪದ ಕೋಳುಮನೆಂತಾನುಂ ಬಂಚಿಸಿ ಬಲೆ ಪಡೆದ ಕೋಕನಂತೂರ್ವ ವನಪಾಲಕಂ ಪೋಗಿ ದೇವೇಂದ್ರನಂ ಕಂಡುಮಲ್ಲಿಕಾಮಾಲೆ || ದೇವ ಬಿನ್ನಪಮಿಂದು ಖಾಂಡವಮಂ ಕೃಶಾನು ತಗುಳು ನಾ
ನಾ ವಿಧಂ ಸುಡೆ ನೋಡಲಾರದೆ ತಳ್ಳ ದೇವರ ಕಾಪಿನಾಳ್ | ದೇವ ಕಿನ್ನರ ಪನ್ನಗಾವಳಿ ಮೊಟ್ಟನಪ್ಪಿನಮೆಚ್ಚು ಕೊಂ ದೇವರೆಂದದಿರ್ದನೊರ್ವನಗುರ್ವು ಪರ್ವಿರೆ ದೇವರಂ ||
&
,
,
,
ಕಂ|
ಎರಡು ರಥಮೋಳವು ನೋಟ ಹೆರಡತೊಳವನೊಂದು ರಥಮ ತೋಟಗೆ ಪಲವಾ | ಗಿರೆ ಪರಿದು ಕಣ್ಣೂಳಿನ್ನುಂ ತಿರಿದಪುದುರಿದಪುದು ನಮ್ಮ ಬನಮೆನಿತನಿತುಂ ||
೯೫ ವ|| ಎಂಬುದುಂ ಪೌಲೋಮಾ ಪತಿ ತನ್ನ ದಿವ್ಯಜ್ಞಾನದೊಳ್ ನೋಡಿ ಚಕಿಯುಂ ವಿಕ್ರಮಾರ್ಜುನನುಮಪುದನಳಿದು ಗಜ ಗರ್ಜಿಸಿ ವಿಳಯ ಕಾಳಾಂಬುದದಂತೆ ಮೊಳಗುಮಂ ಸಿಡಿಲ ಬಳಗಮನೊಳಕೊಂಡ ದ್ರೋಣ ಮಹಾದ್ರೋಣ ಪುಷ್ಕಳಾವರ್ತ ಸುವರ್ತಕಂಗಳೆಂಬ ಮುಗಿಲ್ಗಳಂ ಬೆಸಸಿದಾಗಳವು ವಿಂಧ್ಯಾಚಳಕೂಟ ಕೋಟಿಗಳ ಕಿಟ್ಟುಬರ್ಪಂತ ಬಂದು ದೆಸೆಗಳೆಲ್ಲಮಂ ಮುಸುರಿ ಕಲ್ಕಲಿಸಿ ಕವಿದು
ಬಳಸಿ ಬಂದು ರಕ್ಷಣೆಮಾಡುತ್ತಿರುವ ಕೃಷ್ಣನ ಸುದರ್ಶನವೆಂಬ ಚಕ್ರದ ಆಕ್ರಮಣವನ್ನೂ ವಿಕ್ರಮಾರ್ಜುನನ ದಿವ್ಯಾಸ್ತಗಳ ಆಕ್ರಮಣವನ್ನೂ ಅಗ್ನಿದೇವನ ಜ್ವಾಲೆಗಳ ಸಮೂಹದ ಆಕ್ರಮಣವನ್ನೂ ಹೇಗೋ ವಂಚಿಸಿ ಬಲೆಯಿಂದ ತಪ್ಪಿಸಿಕೊಂಡ ಕೋಕಪಕ್ಷಿಯಂತೆ ಆ ತೋಟದ ಕಾವಲುಗಾರನೊಬ್ಬನು ಹೋಗಿ ದೇವೇಂದ್ರನನ್ನು ಕಂಡು - ೯೪. ಸ್ವಾಮಿ ವಿಜ್ಞಾಪನೆ, ಈ ದಿನ ಖಾಂಡವವನವನ್ನು ಅಗ್ನಿಯು ವ್ಯಾಪಿಸಿ ನಾನಾ ರೀತಿಯಾಗಿ ಸುಡಲು ನೋಡಲಾರದೆ ಎದುರಿಸಿದ ಸ್ವಾಮಿಯ ಕಾವಲುಗಾರರಾದ ದೇವ ಕಿನ್ನರ ಪನ್ನಗಾವಳಿಯನ್ನು ನಾಶವಾಗುವ ಹಾಗೆ ಹೊಡೆದು ಕೊಂದು ಪ್ರಭುವಾದ ನಿಮ್ಮನ್ನು ಏನು ಮಾಡಬಲ್ಲರವರು' ಎಂದು ಅಹಂಕಾರಮಗ್ನನಾಗಿ ನಿಂತಿದ್ದಾನೆ. ೯೫. ನೋಟಕ್ಕೆ ಎರಡು ರಥಗಳಿವೆ. ಅದರಲ್ಲಿ ಒಂದು ರಥವೇ ಯುದ್ದದಲ್ಲಿ ಅನೇಕರಥವಾಗಿರುವಂತೆ ಹರಿದು ಇನ್ನೂ ಕಣ್ಣಿನಲ್ಲಿ ತಿರುಗುತ್ತದೆ. ನಮ್ಮ ತೋಟವೆಷ್ಟಿತ್ತೋ ಅಷ್ಟೂ ಉರಿಯುತ್ತಿದೆ. ವಗ್ರ ಎಂದು ಹೇಳಲು ಶಚೀಪತಿಯಾದ ಇಂದ್ರನು ತನ್ನ ದಿವ್ಯಜ್ಞಾನದಿಂದ ನೋಡಿ ಅವರಿಬ್ಬರೂ ಶ್ರೀಕೃಷ್ಣಾರ್ಜುನರಾಗಿದ್ದುದನ್ನು ತಿಳಿದು ರೇಗಿ ಗರ್ಜಿಸಿ ಪ್ರಳಯಕಾಲದ ಮೋಡದಂತೆ ಗುಡುಗು ಸಿಡಿಲುಗಳ ಸಮೂಹ ವನ್ನೊಳಗೊಂಡ ದ್ರೋಣ, ಮಹಾದ್ರೋಣ, ಪುಷ್ಕಳಾವರ್ತ, ಸಂವರ್ತಕಗಳೆಂಬ ಮೋಡಗಳಿಗೆ ಅಗ್ನಿಯನ್ನು ನಾಶಪಡಿಸಲು ಆಜ್ಞೆಮಾಡಿದನು. ಅವು ವಿಂಧ್ಯಪರ್ವತದ ಕೋಟ್ಯಂತರ ಶಿಖರಗಳೇ ಕಿತ್ತೆದ್ದು ಬರುವ ಹಾಗೆ ಬಂದು ದಿಕ್ಕುಗಳೆಲ್ಲವನ್ನೂ ಮುಸುಕಿ