________________
ಸಪ್ತಾಶ್ವಾಸಂ / ೩೨೯ ಇದು ವಿವಿಧ ವಿಬುಧಜನವಿನುತ ಜಿನಪದಾಂಭೋಜ ವರ ಪ್ರಸಾದೋತ್ಪನ್ನ ಪ್ರಸನ್ನ ಗಂಭೀರ ವಚನ ರಚನ ಚತುರ ಕವಿತಾಗುಣಾರ್ಣವವಿರಚಿತಮಪ್ಪ ವಿಕ್ರಮಾರ್ಜುನ ವಿಜಯದೊಳ್
ಷಷ್ಠಾಶ್ವಾಸಂ
ಎದುರಿಗಿರುವಾಗ ಹಾಗೆಯೇ ಆರ್ಭಟಿಸಿ ಎದುರಿಸಿ ಭಯಪಡಿಸುವ ಶೂರನಾವ ನಿದ್ದಾನೆ ಎಂದರು. ಇದು ಅನೇಕ ದೇವತೆಗಳಿಂದ ಸ್ತುತಿಸಲ್ಪಟ್ಟ ಜಿನಪಾದಕಮಲಗಳ ವರಪ್ರಸಾದದಿಂದ ಹುಟ್ಟಿದುದೂ ತಿಳಿಯಾದುದೂ ಗಂಭೀರವಾದುದೂ ಆದ ಮಾತುಗಳ ರಚನೆಯಲ್ಲಿ ಚಾತುರ್ಯವನ್ನುಳ್ಳ ಕವಿತಾಗುಣಾರ್ಣವನಿಂದ ರಚಿತವಾದುದೂ ಆದ ವಿಕ್ರಮಾರ್ಜುನ ವಿಜಯದಲ್ಲಿ ಆರನೆಯ ಆಶ್ವಾಸ.