________________
ನವಮಾಶ್ವಾಸಂ | ೪೨೯ ಗೂಡಿದರಾತಿಕಾಳಾನಳನಳವುವಂ ಜವನನವಯವದೊಳ್ ಗಲ್ಲು ಪಾರ್ವರ ಒಳ್ಳೆಯ ಪೋದ ಪ್ರಾಣಮಂ ತಂದ ಸಾಹಸಾಭರಣನ ಸಾಹಸಮುಮನಿಂದ್ರಕೀಲ, ನರೇಂದ್ರಮೋಳಿಂದ್ರನ ಬೆಸದೊಳ್ ತಪೋವಿಘಾತಂ ಮಾಡಲೆಂದು ಬಂದ ಪುರಂದರನ ಗಣಿಕೆಯರ ಕಡೆಗಣ್ಣ ನೋಟಕ್ಕಂ ಕಾಟಕ್ಕೆ ಮಳದ ಶೌಚಾಂಜನೇಯನ ಶೌಚಮುಮಂ ದಾನವಾಧಿಪನಪ್ಪ ಮೂಕದಾನವ ಸೂಕರನನೊಂದೆ ಸೂಬಿಂಬಿನೊಳೆಚ್ಚು ಕೊಂದ ಪರಾಕ್ರಮಧವಳನ ಪರಾಕ್ರಮಮುಮಂ ತ್ರಿಣೇತ್ರನೊಳ್ ಕಾದಿ ಪಾಶುಪತಾಸ್ತಮಂ ಪಡೆದ ಕದನತ್ರಿಣೇತ್ರನ ಗಂಡಗರ್ವಮುಮನಿಂದ್ರಲೋಕಕ್ಕೆ ಪೋಗಿ ದೇವೇಂದ್ರನ ಪಗೆವರಪ್ಪ ನಿವಾತಕವಚ ಕಾಳಕೇಯ ಪೌಲೋಮ ತಳತಾಳುಕರೆಂಬ ದೈತ್ಯರಂ ಪಡಲ್ವಡಿಸಿದ ಪಡೆಮಚ್ಚೆ ಗಂಡನ ಗಂಡುಮಂ ದೇವೇಂದ್ರನೊಳರ್ಧಾಸನಮೇಜೆದ ಗುಣಾರ್ಣವನ ಮಹಿಮಯುಮಂ ಚಳುಕಕುಳತಿಳಕನಷ ವಿಜಯಾದಿತಂಗೆ ಗೋವಿಂದರಾಜಂ ಮುಳಿಯ ತಳರದೆ ಪಂಗಿಕ್ಕಿ ಕಾದ ಶರಣಾಗತ ಜಳನಿಧಿಯ ಪೆಂಪುಮಂ ಗೋಜಿಗನೆಂಬ ಸಕಲ ಚಕ್ರವರ್ತಿ ಬೆಸಸೆ ದಂಡುವಂದ ಮಹಾಸಾಮಂತರಂ ಮರಲಿಳೆದು ಗೆ ಸಾಮಂತ ಚೂಡಾಮಣಿಯ ಬೀರಮುಮನತಿವರ್ತಿಯಾಗಿ ಮಾರ್ಮಲೆವ ಚಕ್ರವರ್ತಿಯಂ ಕಿಡಿಸಿ ತನ್ನ ನಂಬಿ ಬಂದ ಬದ್ದಗ ದೇವಂಗೆ ಸಕಳ ಸಾಮ್ರಾಜ್ಯಮನೋರಂತು ಮಾಡಿ ತಿಳಿಸಿದರಿಕೇಸರಿಯ ತೋಳ್ಳಲಮುಮಂ ಸಮದಗಜಘಟಾಟೋಪಂಬೆರಸು ನೆಲನದಿರವಂದು ತಾಗಿದ ಕಕ್ಕಲನ ತಮ್ಮನಪ್ಪ ಬಪ್ಪುವನಂಕಕಾಲನನೊಂದ ಮದಾಂಧಗಂಧಸಿಂಧುರದೊಳೋಡಿಸಿದ ವೈರಿಗಜಘಟಾ
ಸಾಹಸಾಭರಣನ ಸಾಹಸವನ್ನೂ, ಇಂದ್ರಕೀಲಪರ್ವತದಲ್ಲಿ ಇಂದ್ರನ ಆಜ್ಞೆಯ ಪ್ರಕಾರ ತಪಸ್ಸಿಗೆ ವಿಚ್ಛಮಾಡಬೇಕೆಂದು ಬಂದ ಇಂದ್ರನ ವೇಶೈಯರ ಕಟಾಕ್ಷದೃಷ್ಟಿಗೂ ಅವರ ಹಿಂಸೆಗೂ ಹೆದರದ ಶೌಚಾಂಜನೇಯನ ಶುಚಿತ್ವವನ್ನೂ, ರಾಕ್ಷಸಾಧಿಪತಿಯಾದ ಮೂಕರಾಕ್ಷಸನೆಂಬ ಹಂದಿಯನ್ನು ಒಂದೇ ಸಲದ ಬಾಣದಲ್ಲಿ ಹೊಡೆದು ಕೊಂದ ಪರಾಕ್ರಮಧವಳನ ಪರಾಕ್ರಮವನ್ನೂ ಈಶ್ವರನಲ್ಲಿ ಕಾದಿ ಪಾಶುಪತಾಸ್ತ್ರವನ್ನು ಪಡೆದ ಕದನತ್ರಿಣೇತ್ರನ ಪೌರುಷಾಹಂಕಾರವನ್ನೂ ಇಂದ್ರಲೋಕಕ್ಕೆ ಹೋಗಿ ದೇವೇಂದ್ರನ ಶತ್ರುಗಳಾಗಿದ್ದ ನಿವಾಚಕವಚ, ಕಾಳಕೇಯ, ಪೌಳೋಮ, ತಳತಾಳುಕರೆಂಬ ರಾಕ್ಷಸರನ್ನು ಕೆಳಗೆ ಬೀಳುವ ಹಾಗೆ ಮಾಡಿದ ಪಡೆಮೆಚೆಗಂಡನ ಪೌರುಷವನ್ನೂ, ದೇವೇಂದ್ರನಲ್ಲಿ ಅರ್ಧಾಸನವನ್ನು ಪಡೆದ ಗುಣಾರ್ಣವನ ಮಹಿಮೆಯನ್ನೂ, ಚಾಳುಕ್ಯಕುಲತಿಲಕನಾದ ವಿಜಯಾದಿತ್ಯನಿಗೆ ಗೋವಿಂದರಾಜನು ಪ್ರತಿಭಟಿಸಲು ಅವನನ್ನು ಸಾವಕಾಶಮಾಡದೆ ಹಿಂದಕ್ಕೆ ನೂಕಿ ರಕ್ಷಿಸಿದ ಶರಣಾಗತ ಸಮುದ್ರನ ಮಹಿಮೆಯನ್ನೂ ಗೊಜ್ಜಿಗನೆಂಬ ಸಕಲಚಕ್ರವರ್ತಿಯು ಆಜ್ಞೆಮಾಡಲು ದಂಡೆತ್ತಿಬಂದ ಮಹಾಸಾಮಂತರನ್ನೆಲ್ಲ ಹಿಮ್ಮೆಟ್ಟುವಂತೆ ಹೊಡೆದು ಗೆದ್ದ ಸಾಮಂತ ಚೂಡಾಮಣಿಯ ವೀರ್ಯವನ್ನೂ, ಎಲ್ಲೆ ಮೀರಿ ಪ್ರತಿಭಟಿಸುವ ಚಕ್ರವರ್ತಿಯನ್ನು ಹಾಳುಮಾಡಿ ತನ್ನನ್ನೇ ನಂಬಿ ಬಂದ ಬದ್ದೆಗದೇವನಿಗೆ ಸಕಲಸಾಮ್ರಾಜ್ಯವನ್ನು ಏಕಪ್ರಕಾರವಾಗಿ ಮಾಡಿ ಸ್ಥಾಪಿಸಿದ ಅರಿಕೇಸರಿಯ ತೋಳ ಬಲವನ್ನು ಮದ್ದಾನೆಗಳ ಗುಂಪಿನ ಆರ್ಭಟದಿಂದ ಕೂಡಿ ಭೂಮಿಯು ನಡುಗುವಂತೆ ಬಂದು ತಾಗಿದ ಕಕ್ಕಲನ ತಮ್ಮನಾದ ಬಪ್ಪುವನೆಂಬ ಜಟ್ಟಿಯನ್ನು ಒಂದೇ ಮದ್ದಾನೆಯಿಂದ ಓಡಿಸಿದ ವೈರಿಗಜಘಟಾವಿಘಟನಪಟುವಾದ