________________
ದಶಮಾಶ್ವಾಸಂ / ೪೭೭ ವlು ಮಗುಟ್ಟು ತನ್ನೊಡ್ಡಣಕ್ಕೆ ಬರುತ್ತುಂ ದುರ್ಯೊಧನನ ತಮ್ಮನಪ್ಪ ಯುಯುತ್ಸುವಂ ಕಂಡುಚoll ಪವನಜನಿಂದ ಕೌರವಕುಲಂ ಪಡಲಿಟ್ಟವೋಲಕ್ಕುಮಾದೋಡಿ'
ನೃವರವರಾರುವಿಲ್ಲಣಮ ಸಂತತಿ ಕೆಟ್ಟಪುದಿಲ್ಲಿ ಕಾಣಿನೀ | ಬವರದೊಳೀಗಳಾನಿವನನೆಂದು ನೃಪಂ ದಯೆಯಿಂದಮಾ ಯುಯು ತುವನೊಡಗೊಂಡು ಬಂದನೆನಿತಾದೊಡಮೇಂ ಪ್ರಭು ಪೊಲ್ಲಕೆಯುಮೇ || ೬೩
ವlು ಅಂತಾ ಯುಯುತ್ತುವನೊಡಗೊಂಡು ಬಂದು ಧರ್ಮಪುತ್ರನುತ್ತಾಹದೊಳಿರ್ಪ ಪದದೊಳ್ ವಿಕ್ರಮಾರ್ಜುನನ ಮನದೊಳಾದ ವ್ಯಾಮೋಹಮಂ ಕಳೆಯಲೆಂದು ಮುಕುಂದಂ ದಿವ್ಯಸ್ವರೂಪಮಂ ತೋಟಿ* ಚಂt ಆದಿರದಿದಿರ್ಚಿ ತಳಿಟಿಯಲೀ ಮಲೆದೊಡ್ಡಿದ ಚಾತುರಂಗಮಂ .
ಬುದು ನಿನಗೊಡ್ಡಿ ನಿಂದುದಿದನೋವದ ಕೊಲ್ವಡೆ ನೀನುಮೆನ್ನ ಕ || ಜದೊಳೆಸಗೆಂದು ಪ್ರತಜಿತನಾದಿಯ ವೇದರಹಸದೊಳ್ ನಿರಂ
ತದ ಪರಿಚರ್ಯೆಯಿಂ ನೆಯ ಯೋಜಿಸಿದಂ ಕದನತ್ರಿಣೇತ್ರನಂ || ೬೪
ವ|| ಆಗಳ ಪರಸೈನ್ಯಬೈರಮ ಪುರಾಣಪುರುಷನಪ್ಪ ಪುರುಷೋತ್ತಮಂಗಜಿಗಿ ಪೊಡಮಟ್ಟು ರಿಪುಪಕ್ಷಕ್ಷಯಕರಮಪ್ಪ ವಿಶ್ವಕರ್ಮನಿರ್ಮಿತವಾದ ತನ್ನ ದಿವ್ಯರಥಮಂ ಮನೋರಥಂ ಬೆರಸು
ಧರ್ಮರಾಜನು ತಮ್ಮ ಹಿರಿಯರನ್ನು ಗೌರವಿಸಿ ವ| ತನ್ನ ಸೈನ್ಯಕ್ಕೆ ಹಿಂತಿರುಗಿ ಬರುತ್ತ ದಾರಿಯಲ್ಲಿ ದುರ್ಯೋಧನನ ತಮ್ಮನಾದ ಯುಯುತ್ಸುವನ್ನು ಕಂಡನು. ೬೩. ಹೇಗೂ ಭೀಮನಿಂದ ಕೌರವಕುಲವು ನಾಶವಾದಂತಾಗುತ್ತದೆ. ಅವರ ಕಡೆಯವರಾರೂ ಇಲ್ಲದಂತಾಗುತ್ತದೆ. ಸಂತತಿಯು ಸಂಪೂರ್ಣವಾಗಿ ನಾಶವಾಗುತ್ತದೆ. ಈ ಯುದ್ಧದಲ್ಲಿ ಇವನನ್ನಾದರೂ ರಕ್ಷಿಸುತ್ತೇನೆ ಎಂದು ರಾಜನು ದಯೆಯಿಂದ ಆ ಯುಯುತ್ಸುವನ್ನು ಒಡಗೊಂಡು ಬಂದನು. ಪ್ರಭುವಾದವನು ಕೆಟ್ಟದ್ದನ್ನು ಮಾಡುತ್ತಾನೆಯೇ ? ವ|| ಯುಯುತ್ಸುವನ್ನು ಒಡಗೊಂಡು ಬಂದು ಧರ್ಮರಾಜನು ಉತ್ಸಾಹದಿಂದಿರುವ ಸಮಯದಲ್ಲಿ ವಿಕ್ರಮಾರ್ಜುನನ ಮನಸ್ಸಿನಲ್ಲುಂಟಾದ ವ್ಯಾಮೋಹವನ್ನು ಕಳೆಯುವುದಕ್ಕಾಗಿ ಕೃಷ್ಣನು ವಿಶ್ವರೂಪವನ್ನು ತೋರಿದನು. ೬೪. “ಹೆದರದೆ ಎದುರಿಸಿ ಪ್ರತಿಭಟಿಸಿ ಯುದ್ದಮಾಡಲು ಮಲೆತು ಚಾಚಿದ ಈ ಚತುರಂಗ ಸೈನ್ಯವು ನಿನಗೆ ಪ್ರತಿಭಟಿಸಿ ನಿಂತಿದೆ. ಇದನ್ನು ಕೊಲ್ಲಬೇಕಾದರೆ ನೀನು ನಾನು ಹೇಳಿದ ರೀತಿಯಲ್ಲಿ ಕೆಲಸ ಮಾಡು” ಎಂದು ಶ್ರೀಕೃಷ್ಣನು ನೇರವಾಗಿ ಆದಿಕಾಲದಿಂದ ಬಂದ ವೇದ ರಹಸ್ಯವನ್ನು ಮನದಟ್ಟಾಗುವಂತೆ ಉಪದೇಶಿಸಿ ಅರ್ಜುನನನ್ನು ಯುದ್ಧಕಾರ್ಯದಲ್ಲಿ ನಿಯೋಜಿಸಿದನು. ವ|| ಆಗ ಅರ್ಜುನನು ಪುರಾಣಪುರುಷನಾದ ಶ್ರೀಕೃಷ್ಣನಿಗೆ ನಮಸ್ಕಾರಮಾಡಿ ಶತ್ರುಪಕ್ಷವನ್ನು ನಾಶಮಾಡುವ ಶಕ್ತಿಯನ್ನುಳ್ಳ ವಿಶ್ವಕರ್ಮನಿಂದ ನಿರ್ಮಿತವಾದ ತನ್ನ ದಿವ್ಯರಥವನ್ನು ಶ್ರೀಕೃಷ್ಣನನ್ನು ಮೊದಲು ಹತ್ತಲುಹೇಳಿ ಅದನ್ನು