________________
ದಶಮಾಶ್ವಾಸಂ / ೪೯೫ ವ|| ಅಂತು ಪ್ರಳಯಕಾಲದಂದು ಮೂಡುವ ಪರ್ವರಾದಿತ್ಯರ ತೇಜಮುಮಂ ಮಹೇಶ್ವರ ಭೈರವಾಡಂಬರಮುಮಂ ಯುಗಾಂತ ಕಾಲಾಂತಕನ ಮಸಕಮುಮಂ ತನ್ನೊಳಳವಡಿಸಿಕೊಂಡು ಚಂ|| ಖರ ಕಿರಣ ಪ್ರಚಂಡ ಕಿರಣಾವಳಿ ಲೋಕಮನೆಯ್ದೆ ಪರ್ವುವಂ
ತಿರೆ ಕಡುಕೆಯ್ದು ತನ್ನೆರಡು ಕೆಯ್ಯೋಳಮೆಚ್ಚ ಶರಾಳಿಗಳ ಭಯಂ || ಕರತರಮಾಗೆ ಭೂಭುವನಮಲ್ಲಮನೊರ್ಮೆಯ ಸುತ್ತಿ ಮುತ್ತಿ ಕೊಂ
ಡಿರೆ ದೆಸೆಗಾಣಲಾಗದು ದಲಾ ರಣಗಲೆ ಮಂದವಾದುದೋ || ೧೧೬
ವ|| ಎಂಬಿನಮಂಬಿನ ಬಂಬಲೊಳಂ ಜೋಡಾಗಿ ಕೋಡನೂ ಕೆಡದ ಗಜ ವಜಂಗಳ ಡೊಣೆವುಗಳಿಂದೋಜಿತು ಪರಿವ ನೆತ್ತರ ಕಡಲ್ಗಳುಂ ನೆತ್ತರ ಕಡಲ್ಗಳೊಳ್ ಮಿಳಿರ್ವ ಪದವಿಗಗಳ ತಲೆದೂತಿ ಮುಜುಂಗಿದ ರಥಂಗಳುಂ ರಥಂಗಳ ಗಾಲಿಗಳಡ್ಡಮಾಗಿ ಬಿಟ್ಟಿರ್ದ ಮದಹಸ್ತಿಗಳುಂ ಮದಹಸಿಮಸ್ತಕಂಗಳನೋಸರಿಸಿ ರಥಮಂ ಪರಿಯಿಸುವ ರಥಚೋದಕರುಂ ರಥಚೋದಕರ ಬಿಟ್ಟ ಬಾಯ್ ಬಿಟ್ಟಂತಿರೆ ಬಿಟ್ಟ ತಮ್ಮ ಕರುನ್ಗಳೊಳ್ ತವ ತೊಡರ್ದು ಕೀಲಿಂ ಕರ್ಚಿ ದಿಂಡುಮಗುಳು ಕಡೆವ ಜಾತ್ಯಶ್ವಂಗಳುಂ ಜಾತ್ಯಶ್ವಂಗಳ ಹೆಣದ ತಿಂತಿಣಿಯೊಳ್ ತೊಡರ್ದಡಪುತ್ತುಮಾಡುವ ಸುಭಟರಟ್ಟೆಗಳುಂ ಸುಭಟರಟ್ಟೆಗಳನೆಲ್ಡಟ್ಟಿ ಕುಟ್ಟುವ ತೊಂಡು ಮರುಳುಂ ಮರುಳಾಟಮಂ ಪಳಪಳನೆಮಯಿಕ್ಕದೆ ನೋಡಿ ಮುಗುಳಗೆ ನಗುವ ವೀರ
ವ! ಪ್ರಳಯಕಾಲದ ದ್ವಾದಶಾದಿತ್ಯರ ತೇಜಸ್ಸನ್ನು ಮಹೇಶ್ವರನ ಭಯಂಕರವಾದ ಅಟಾಟೋಪವನ್ನು ಯುಗಾಂತದ ಯಮನ ರೇಗುವಿಕೆಯನ್ನು ತನ್ನಲ್ಲಿ ಅಳವಡಿಸಿಕೊಂಡನು. ೧೧೬. ಸೂರ್ಯನ ತೀಕ್ಷ್ಮವಾದ ಕಿರಣಸಮೂಹಗಳು ಲೋಕವನ್ನೆಲ್ಲ ಪೂರ್ಣವಾಗಿ ಆವರಿಸುವ ಹಾಗೆ ವೇಗಶಾಲಿಯಾದ ತನ್ನ ಎರಡು ಕೈಗಳಿಂದಲೂ ಬಿಟ್ಟ ಬಾಣಸಮೂಹಗಳು ಅತ್ಯಂತ ಭಯಂಕರವಾಗಿ ಪ್ರಪಂಚ ವೆಲ್ಲವನ್ನೂ ಒಟ್ಟಿಗೆ ಸುತ್ತಮುತ್ತಿಕೊಂಡುವು. ಆ ಯುದ್ದದ ಕತ್ತಲೆಯಿಂದ ನಿಜವಾಗಿಯೂ ದಿಕ್ಕೇ ಕಾಣದಂತಾಯಿತು. ಆ ರಣಗತ್ತಲೆ ಅತ್ಯಂತ ಸಾಂದ್ರವಾಗಿತ್ತು. ವ|| ಬಾಣಗಳ ಸಮೂಹದಿಂದ ಜೊತೆ ಜೊತೆಯಾಗಿ ಕೊಂಬನ್ನೂರಿ ಕೆಡೆದಿದ್ದ ಆನೆಗಳ ಗಾಯದ ಡೊಗರುಗಳಿಂದ ಜಿನುಗಿ ಹರಿಯುವ ರಕ್ತದ ಸಮುದ್ರಗಳೂ, ರಕ್ತಸಮುದ್ರದಲ್ಲಿ ಚಲಿಸುತ್ತಿರುವ ಬಾವುಟಗಳ ತುದಿಗಳು ಮಾತ್ರ ತೋರುತ್ತ ಮುಳುಗಿದ್ದ ತೇರುಗಳೂ ತೇರುಗಳಿಗೆ ಅಡ್ಡವಾಗಿ ಬಿದ್ದಿದ್ದ ಮದ್ದಾನೆಗಳೂ ಮದ್ದಾನೆಗಳ ತಲೆಗಳನ್ನು ಒಂದು ಕಡೆಗೆ ಓಸರಿಸಿ ತೇರನ್ನು ಹರಿಯಿಸುವ ಸಾರಥಿಗಳೂ ಸಾರಥಿಗಳು ಬಿಟ್ಟ ಬಾಯಿ ಬಿಟ್ಟ ಹಾಗೆ ತಮ್ಮ ಕರುಳುಗಳೂ ಸೇರಿಕೊಂಡ ಹಾಗೆಯೇ ಕಡಿವಾಣವನ್ನು ಕಚ್ಚಿಕೊಂಡು ರಾಶಿರಾಶಿಯಾಗಿ ಬಿದ್ದಿದ್ದ ಉತ್ತಮವಾದ ಜಾತ್ಯತ್ವಗಳೂ ಜಾತಿಕುದುರೆಗಳ ಸಮೂಹದಲ್ಲಿ ಸೇರಿಕೊಂಡು ಎಡವುತ್ತ ಆಡುತ್ತಿರುವ ಶೂರರ ಮುಂಡಗಳೂ ಆ ಶೂರರ ಮುಂಡಗಳನ್ನು ಎಬ್ಬಿಸಿ ಓಡಿಸಿ ಬಡಿಯುತ್ತಿರುವ ತುಂಟ ಪಿಶಾಚಿಗಳ ಆಟವನ್ನು ಪಳಪಳನೆ ರೆಪ್ಪೆಬಡಿಯದೆ ನೋಡಿ ಹುಸಿನಗೆ ನಗುವ ಪರಾಕ್ರಮಶಾಲಿಗಳ ಹಸಿಯ ತಲೆಗಳೂ ಭಯ, ಆಶ್ಚರ್ಯ, ಅದ್ಭುತ, ಭಯಾನಕ, ವೀರ, ಬೀಭತ್ಸ, ರೌದ್ರರಸಗಳನ್ನು