________________
ದಶಮಾಶ್ವಾಸಂ | ೪೯೯
ಚoll ನೆರೆದನುರಾಗದಿಂ ಪಡೆಯ ಪಾಡಿಯ ಬೀರರ ಪೆಂಡಿರಂ ಪರಸಿಯೊಲ್ಲು ಸೇಸೆಗಳನಿಕ್ಕೆ ಮುರಾರಿಯ ಪಾಂಚಜನ್ಮ ವಿ | ಸುರಿತ ರವಂ ಜಯೋತ್ಸವದ ಘೋಷಣೆಯಂತಿರ ಪೊಕ್ಕನಾತ್ಮ ಮಂ ದಿರಮನುದಾತ್ತಚಿತ್ತನವನೀತಳ ಪೂಜ್ಯಗುಣಂ ಗುಣಾರ್ಣವಂ ||
ಇದು ವಿವಿಧ ವಿಬುಧಜನವಿನುತ ಜಿನಪದಾಂಭೋಜ ವರ ಪ್ರಸಾದೋತ್ಪನ್ನ ಪ್ರಸನ್ನ ಗಂಭೀರ ವಚನ ರಚನ ಚತುರ ಕವಿತಾಗುಣಾರ್ಣವ ವಿರಚಿತಮಪ್ಪ ವಿಕ್ರಮಾರ್ಜುನ ವಿಜಯದೊಳ್
ದಶಮಾಶ್ವಾಸಂ
೧೨೫
೧೨೫. ಸೈನ್ಯಸಮೂಹದಲ್ಲಿದ್ದ ವೀರಸ್ತ್ರೀಯರು ಸಂತೋಷದಿಂದ ಒಟ್ಟುಗೂಡಿ ಪ್ರೀತಿಯಿಂದ ಹರಸಿ ಸೇಸೆಯನ್ನಿಕ್ಕಿದರು. ಶ್ರೀಕೃಷ್ಣನ ಪಾಂಚಜನ್ಯವೆಂಬ ಶಂಖದ ವಿಜೃಂಭಿತ ಧ್ವನಿಯು ವಿಜಯೋತ್ಸವದ ಡಂಗುರದಂತಿತ್ತು. ಉದಾತ್ತಚಿತ್ತನೂ ಭೂಮಂಡಲದಲ್ಲಿ ಪೂಜಿಸಲ್ಪಡುವ ಗುಣಗಳಿಂದ ಕೂಡಿದವನೂ ಆದ ಗುಣಾರ್ಣವನು ತನ್ನ ಮಂದಿರವನ್ನು ಪ್ರವೇಶಿಸಿದನು. ಇದು ಅನೇಕ ದೇವತೆಗಳಿಂದ ಸ್ತುತಿಸಲ್ಪಟ್ಟ ಜಿನಪಾದಕಮಲಗಳ ವರಪ್ರಸಾದದಿಂದ ಹುಟ್ಟಿ ತಿಳಿಯೂ ಗಂಭೀರವೂ ಆದ ಮಾತುಗಳ ರಚನೆಯಲ್ಲಿ ಚಾತುರ್ಯವುಳ್ಳ ಕವಿತಾಗುಣಾರ್ಣವನಿಂದ ರಚಿತವಾದುದೂ ಆದ 'ವಿಕ್ರಮಾರ್ಜುನ ವಿಜಯ'ದಲ್ಲಿ ಹತ್ತನೆಯ ಆಶ್ವಾಸ.