________________
ಏಕಾದಶಾಶ್ವಾಸಂ | ೫೫೩ ವ|| ಅಂತು ದುರ್ಮುಖ ದುರ್ಮದ ದುರ್ಧಷ್ರಣ ಮೊದಲಾಗೆ ಮೂವತ್ತು ಮೂವರಂ ಕೊಂದು ದುಶಾಸನನಂ ವಿರಥನಂ ಮಾಡಿ ದುರ್ಯೋಧನನನೋಂದೆ ನಿಶಿತ ವಿಶಿಖ ಹತಿಯಿಂ ಸುರುಳುರುಳ್ಳಿನಮೆಚ್ಚು ಮೂರ್ಛಾಗತನಂ ಮಾಡಿ ಸಿಂಹನಾದದಿನಾರ್ದು ಮುಟ್ಟೆವರ್ಪಾಗಳಾಳನ ಸಾವು ನೋಡಲಾಜದಮll ಎಡೆಗೊಂಡಂಕದ ಕರ್ಣನೆಯ್ದವರೆ ದಿವ್ಯಾಸಂಗಳಿಂದಂ ಸಿಡಿಲ್
ಪೊಡೆವಂತಪ್ಪಿನಮೆಚ್ಚುದಗ್ರರಥಮಂ ಮುಯೇಟು ಸೂಯ್ ಕೋಪದಿಂ | ಕಡಿಯಲ್ ಸಾರ್ದೊಡಬಲ್ಕು ಸೂತಸುತನೊಂದುಗ್ರೀಷುವಿಂ ತಿಣ್ಣಮೆ ಚೂಡನಾರ್ದಂ ನಸುಮೂರ್ಛವೋಗಿ ರಥದೊಳ್ ಭೀಮಂ ನರಬ್ಬನ್ನೆಗಂ II೧೪೩
ವ|| ಅಂತು ಮೂರ್ಛಾಗತನಾದ ಭೀಮನ ಕೊರಲೊಳ್ ಬಿಲ್ಲಂ ಕೋದು ಮೇಗಿಲ್ಲದೆ ತೆಗೆದುಕಂ| ತಾಂ ಗಡಮನ್ನಾಳನ ತೊಡೆ
ಯಂ ಗಡಮಿನ್ನುಡಿವನೆನ್ನೊಳಂ ಕಾದುವನಂ | ದಂಗಪತಿ ನುಡಿದು ಕೊಲ್ಲದೆ
ತಾಂಗಿದನಂಬಿಕೆಗೆ ನುಡಿದ ನುಡಿ ನಿಲೆ ಮನದೊಳ್ || ဂပူပူ ವ|ಅನ್ನೆಗಮಿತ್ತ ಚಾಣೂರಾರಿ ಜರಾಸಂಧಾರಿಯ ಮುನ್ನೆಗೆದು ಬಟಕ್ಕಡಂಗಿದ ಸಿಂಹನಾದಕ್ಕೆ ಮನಃಕ್ಷತಂಬಟ್ಟು ಸಾತ್ಯಕಿಯನಾರಯಲಟ್ಟಿದೊಡಾತಂ ಬಂದಚೇತನನಾಗಿ ಬಿಟ್ಟಿರ್ದ
ಕುರುಡುದೊರೆಯಾದ ಧೃತರಾಷ್ಟ್ರನ ಮಕ್ಕಳು ಆ ವಾಯುಪುತ್ರನಾದ ಭೀಮನ ಕಾಲಿನ ಮುಂಭಾಗದಲ್ಲಿ ಉರುಳಿದರು. ವll ಹಾಗೆ ದುರ್ಮುಖ, ದುರ್ಮದ, ದುರ್ಧಷ್ರಣರೇ ಮೊದಲಾದ ಮೂವತ್ತು ಮೂರು ಮಂದಿಯನ್ನೂ ಕೊಂದು ದುಶ್ಯಾಸನನನ್ನು ರಥವಿಲ್ಲದವನನ್ನಾಗಿ ಮಾಡಿ (ತೇರಿನಿಂದ ಉರುಳಿಸಿ) ದುರ್ಯೊಧನ ನನ್ನು ಒಂದೇ ಹರಿತವಾದ ಬಾಣದ ಪೆಟ್ಟಿನಿಂದ ಮುರಿದುಕೊಂಡು ಉರುಳಿ ಬೀಳುವ ಹಾಗೆ ಹೊಡೆದು ಮೂರ್ಛಿತನನ್ನಾಗಿ ಮಾಡಿ ಸಿಂಹಧ್ವನಿಯಿಂದ ಗರ್ಜಿಸಿ ಹತ್ತಿರಕ್ಕೆ ಬಂದಾಗ ತನ್ನನ್ನಾಳಿದ ಯಜಮಾನನ ಸಾವನ್ನು ನೋಡಲಾರದೆ -೧೪೩. ಪ್ರಸಿದ್ಧನಾದ ಕರ್ಣನು ದುರ್ಯೋಧನ ಮತ್ತು ಭೀಮರ ಮಧ್ಯೆ ಪ್ರವೇಶಿಸಿ ಹತ್ತಿರ ಬರಲು (ಭೀಮನು ತನ್ನು ಶ್ರೇಷ್ಠವಾದ ಬಾಣಗಳಿಂದ ಸಿಡಿಲು ಹೊಡೆಯುವ ಹಾಗೆ ಹೊಡೆದು (ಕರ್ಣನ) ಎತ್ತರವಾದ (ಶ್ರೇಷ್ಠವಾದ) ತೇರನ್ನು ಇಪ್ಪತ್ತೊಂದುಸಲ ಕೋಪದಿಂದ ಕಡಿದು ಹಾಕಿದನು. ಕರ್ಣನು ವ್ಯಥೆಪಟ್ಟು ತನ್ನ ಶ್ರೇಷ್ಠವಾದ ಬಾಣದಿಂದ ತೀಕ್ಷ ವಾಗಿ ಹೊಡೆದು ಭೀಮನು ರಥದಲ್ಲಿಯೇ ಸ್ವಲ್ಪ ಮೂರ್ಛಹೋಗಿ ನರಳುವ ಹಾಗೆ ಹೊಡೆದು ಆರ್ಭಟಮಾಡಿದನು. ವ|| ಹಾಗೆ ಮೂರ್ಛ ಹೋದ ಭೀಮನ ಕತ್ತಿಗೆ ಬಿಲ್ಲಿನ ಹಗ್ಗವನ್ನು ಸುತ್ತಿ ಅಸಮಾನವಾದ ರೀತಿಯಲ್ಲಿ ಸೆಳೆದು ೧೪೪, ಇವನೇ ಅಲ್ಲವೇ ನನ್ನ ಯಜಮಾನನ ತೊಡೆಯನ್ನು ಒಡೆಯುವವನು; ಇನ್ನು ನನ್ನಲ್ಲಿಯೂ ಕಾದುವವನು ಎಂದು ಹೇಳಿ ಕರ್ಣನು ತಾಯಿಗೆ ಕೊಟ್ಟ ಮಾತು (ಭಾಷೆ) ಮನಸ್ಸಿನಲ್ಲಿ ನಿಂತಿರಲಾಗಿ ಭೀಮನನ್ನು ಕೊಲ್ಲದೆ ತಡೆದನು. ವ|| ಅಷ್ಟರಲ್ಲಿ ಈ ಕಡೆ ಕೃಷ್ಣನು ಭೀಮನ ಮುಂದಕ್ಕೆ ಹಾರಿ ಬಳಿಕ ಕುಗ್ಗಿದ ಸಿಂಹಧ್ವನಿಗೆ ಮನಸ್ಸಿನಲ್ಲಿಯೇ ವ್ಯಥೆಪಟ್ಟು ಸಾತ್ಯಕಿಯನ್ನು