________________
೫೫೪ | ಪಂಪಭಾರತಂ ವೃಕೋದರನಂ ತನ್ನ ರಥಮನೇಲಿಸಿಕೊಂಡು ಕೂಡ ವಂದನನ್ನೆಗಂ ದುರ್ಯೊಧನಂ ಕರ್ಣಂ ಬೆರಸು ಸೈಂಧವನ ಮೊನೆಯೊಳಾತನಂ ಪೆಜಿಗಿಕ್ಕಿ ಮುಂದೆ ನಿಂದಾಗಳ್
ಚಂ|| ದಿನಕರನಸ್ತಮಸ್ತಕಮನಾಸೆವಡಲ್ ಬಗೆದಪ್ಪನೇಕೆ ಕೆ
ಮನೆ ತಡೆವೆ ಜಯದ್ರಥನನಿಕುಣಿದಾರೊಳಮಿಂ ತೊಡಂಕವೇ || ಡೆನುತುಮಜಂ ಮರುಜವದೆ ಚೋದಿಸೆ ಪಾರ್ಥನ ದೇವದತ್ತ ನಿ ಸ್ವನದೊಳೆ ತೀವಿ ಪೊಟ್ಟನೊಡೆವಂತವೊಲಾದುದಜಾಂಡಮಂಡಳಂ || ೧೪೫
ಚಂ||
ಚಟುಳಿತ ಚಕ್ರನೇಮಿ ಪರಿವರ್ತನ ಘಟ್ಟನ ಘಾತ ನಿರ್ಭರ ಸುಟಿತ ಧರಾತಳಂ ವಿಜಯನುಗ್ರರಥಂ ಪರಿದತ್ತು ದಲ್ ಘಟಾ | ಘಟಿತ ಹಟದ್ವಿರೋಧಿ ರುಧಿರಪ್ತವಲಂಪಟ ಸಂಕಟೋತ್ಕಟಂ ಕಟಕಟ ಘಾತ ನಾಕತಟ ಸಂಕಟ ಸಂಗರ ರಂಗಭೂಮಿಯೊಳ್ || ೧೪೬
ವ|| ಆಗಳ್ ಕುರುಧ್ವಜಿನಿಗೆ ಭಯಜ್ವರಮುಂ ಮಹೇಶ್ವರಜ್ವರಮುಂ ಬರೆ ಬರ್ಪುದಾರ ಮಹೇಶ್ವರನ ರಥದ ಬರವಂ ಕಂಡು ಕರ್ಣ ಶಲ್ಯ ಶಕುನಿ ಶಾರದ್ವತ ಕೃತವರ್ಮ ದುರ್ಯೋಧನ ದುಶ್ಯಾಸನರ್ ಮೊದಲಾದತಿರಥ ಸಮರಥ ಮಹಾರಥಾರ್ಧರಥರೊಂದೆವಿಂದೆಯಲ್ಲ ದೋಂದೊರ್ವರೊಳ್ ಸಂಧಿಸಿ ಗೋಂದಣಿಸಿ ನಿಂದಾಗಳ್
ನೋಡಿಕೊಂಡು ಬರಲು ಕಳುಹಿಸಿದನು. ಆತನು ಬಂದು ಶಕ್ತಿಗುಂದಿ ಬಿದ್ದಿದ್ದ ಭೀಮನನ್ನು ತನ್ನ ರಥದಲ್ಲಿ ಏರಿಸಿಕೊಂಡು ಜೊತೆಯಲ್ಲಿಯೇ ಬಂದನು. ಅಷ್ಟರಲ್ಲಿ ಕರ್ಣನೊಡಗೂಡಿ ದುರ್ಯೋಧನನು ಸೈಂಧವನ ಯುದ್ಧಭೂಮಿಗೆ ಬಂದು ಆತನನ್ನು ಹಿಂದೆ ಹಾಕಿ ತಾನು ನಿಂತನು. ೧೪೫. ಸೂರ್ಯನು ಅಸ್ತಪರ್ವತದ ನೆತ್ತಿಯನ್ನು ಸೇರಲು (ಮುಳುಗಲು) ಯೋಚಿಸುತ್ತಿದ್ದಾನೆ, ಏಕೆ ಸುಮ್ಮನೆ ಸಾವಕಾಶ ಮಾಡುತ್ತಿದ್ದೀಯೇ? ಜಯದ್ರಥನನ್ನು ಹೊಡೆ; ಮಿಕ್ಕವರಾರಲ್ಲಿಯೂ ತೊಡಕಿಕೊಳ್ಳ ಬೇಡ ಎನ್ನುತ್ತ ಕೃಷ್ಣನು ವಾಯುವೇಗದಿಂದ ರಥವನ್ನು ಚೋದಿಸಿದನು. ಅರ್ಜುನನ ದೇವದತ್ತವೆಂಬ ಶಂಖದ ಧ್ವನಿಯಿಂದ ತುಂಬಿ ಬ್ರಹ್ಮಾಂಡಮಂಡಲವು ಒಡೆಯು ವಂತಾಯಿತು. ೧೪೬. ವೇಗವಾಗಿ ಚಲಿಸುತ್ತಿರುವ ತೇರಿನ ಚಕ್ರದ ಬಳೆಯ ಸುತ್ತುವುದರ ಪೆಟ್ಟಿನ ಹೊಡೆತದಿಂದ ಭರಿಸಲಸಾಧ್ಯವಾಗಿ ಭೂಪ್ರದೇಶವು ಸೀಳಿತು. ಅರ್ಜುನನ ಭಯಂಕರವಾದ ರಥವು ಆನೆಗಳ ಗುಂಪಿನಿಂದ ಕೂಡಿದ ಶತ್ರುಗಳ ಪ್ರಕಾಶಮಾನವಾದ ರಕ್ತಪ್ರವಾಹದಲ್ಲಿ ಆಸಕ್ತಿಯುಳ್ಳ ತಮ್ಮ ಕಟಕಟವೆಂಬ ಹೊಡೆತದಿಂದ ಸ್ವರ್ಗಕ್ಕೂ ಹಿಂಸೆಯನ್ನುಂಟುಮಾಡುತ್ತ ಯುದ್ಧಭೂಮಿಯಲ್ಲಿ ಹರಿಯಿತು. ವ|| ಆಗ ಕೌರವಸೈನ್ಯಕ್ಕೆ ಭಯವೆಂಬ ಜ್ವರವೂ ಈಶ್ವರನ ಹಣೆಗಣ್ಣಿನ ಜ್ವರವೂ ಬರುವ ಹಾಗೆ ಬರುತ್ತಿರುವ ಉದಾರಮಹೇಶ್ವರನಾದ ಅರ್ಜುನನ ರಥದ ಬರುವಿಕೆಯನ್ನು ಕಂಡು ಕರ್ಣ, ಶಲ್ಯ, ಶಕುನಿ, ಶಾರದ್ವತ, ಕೃತವರ್ಮ, ದುರ್ಯೊಧನ, ದುಶ್ಯಾಸನನೇ ಮೊದಲಾದ ಅತಿರಥ, ಸಮರಥ, ಮಹಾರಥ, ಅರ್ಧರಥರು ಗುಂಪಾಗಿರದೆ ಬೇರೆ