________________
೫೫೮ / ಪಂಪಭಾರತಂ
ಇದು ವಿವಿಧ ವಿಬುಧಜನವಿನುತ ಜಿನಪದಾಂಭೋಜ ವರ ಪ್ರಸಾದೋತ್ಪನ್ನ ಪ್ರಸನ್ನ ಗಂಭೀರ ವಚನ ರಚನ ಚತುರ ಕವಿತಾಗುಣಾರ್ಣವ ವಿರಚಿತಮಪ್ಪ ವಿಕ್ರಮಾರ್ಜುನ ವಿಜಯದೊಳ್ ಏಕಾದಶಾಶ್ವಾಸಂ
ಅಲೆಯುತ್ತಿರಲು ವಿಜಯಲಕ್ಷ್ಮಿಯ ಸ್ಪರ್ಶವು ಶರೀರದಲ್ಲಿ ರೋಮಾಂಚನವಾಗುತ್ತಿರಲು ಅರ್ಜುನನು ಯುದ್ಧದ ಆಯಾಸವನ್ನು ಶ್ರಮವಿಲ್ಲದೆಯೇ ಕಳೆದನು. ಇದು ಅನೇಕ ದೇವತೆಗಳಿಂದ ಸ್ತುತಿಸಲ್ಪಟ್ಟ ಜಿನಪಾದಕಮಲಗಳ ವರಪ್ರಸಾದದಿಂದ ಹುಟ್ಟಿದುದೂ ತಿಳಿಯೂ ಗಂಭೀರವೂ ಆದ ಮಾತುಗಳ ರಚನೆಯಲ್ಲಿ ಚಾತುರ್ಯವುಳ್ಳ ಕವಿತಾಗುಣಾರ್ಣವನಿಂದ ರಚಿತವಾದುದೂ ಆದ ವಿಕ್ರಮಾರ್ಜುನ ವಿಜಯದಲ್ಲಿ ಹನ್ನೊಂದನೆಯ ಆಶ್ವಾಸ.