________________
ಚತುರ್ದಶಾಶ್ವಾಸಂ | ೬೮೫ ವ|| ಆಗಳಯ್ಯರುಮಾ ಮಾತಂ ಕೇಳು ಭೋಂಕನೆರ್ದೆದೆಯ ಸಹೋದರ ಶೋಕದೊಳ್ ಮನ್ಯುಮಿಕ್ಕು ಸೈರಿಸಲಾಗಿದೆಚಂt. ಅಜೆಪಿದರಾರುಮಿಮಗೆ ನೀನೆಮಗಣ್ಣನೆಯೆಂದು ಮುನ್ನಮಾ
ಮಜಿದೊಡೆ ಪಟಮಂ ನೆಲನುಮಂ ನಿನಗಿತ್ತು ಕುರುಪ್ರಧಾನನೋಳ | ಕುಪನೆ ನಿಚ್ಚಟಂ ಬಿಸುಟು ನಿನ್ನಯ ಪೇದುಗೆಯ್ಯು ಪಾಳೆಯಂ | ಮೆಜಿಯೆವೆ ಬಾಯ ತಂಬುಲದೊಳಂ ಮಡುಗೂಳೊಳಮಂಗವಲ್ಲಭಾ || ೧೦
ವ|| ಎಂದು ಶೋಕಾಕ್ರಾಂತರಾದರಂ ನಾರಾಯಣಂ ಸಂತೈಸಿ ಕೊಂದರ್ ಕೊಲೆ ಸಾವರೆಂಬುದು ಜಗದ್ಧಾ ಪಾರಮಾಶ್ಚರನಿಚ್ಛೆಯಿಂದ ನೆಗಟ್ಟುಮೆಂದು ದುಃಖೋಪಶಮನಂ ಮಾಡಿದೊಡೆ ಸಮಾಹಿತಚಿತ್ತರಾಗಿ ಕೊಳುಗುಳನಂ ವಿಧಿವಿಧಾನದಿಂ ಬಳಸಿ ದುರ್ಯೋಧನಂ ಮೊದಲಾಗೆ ಕುರುಕ್ಷೇತ್ರದೊಳ್ ಸತ್ತರಸುಮಕ್ಕಳೆಲ್ಲರುಮನೊಂದಾಗಿ ತಂದು ಬೆಟ್ಟಾಗೊಟ್ಟಿ ಕರ್ಣನ ಕಳೇವರಮನನಿಬರಿಂ ಮಿಗೆ ಮಹಾಬ್ರಾಹ್ಮಣರಿಂದ ಮಂತ್ರವಿಧಿಯಿಂದಿರಿಸಿ ಹರಿಚಂದನ ಕರ್ಪೂರ ಕಾಳಾಗರುಕಾಷಗಳಿಂದಂ ಯಥೋಕ ವಿಧಿಯಿಂ ಸಂಸಾರಿಸಿ ಕರ್ಣಂಗೆ ಕರ್ಣಗಳಿಯೆಂಬ ತೀರ್ಥಮಂ ಮಾಡಿ ಜಳದಾನಾದಿ ಕ್ರಿಯೆಗಳು ನಿರ್ವತಿ್ರಸೆ ತದನಂತರದೋಳ್ ಧೃತರಾಷನುಂ ಗಾಂಧಾರಿಯುಂ ಪುತ್ರವಿಯೋಗದುಃಖದಿಂ ಮುನಿವನಮನಾಶ್ರಯಿಸಿದರ್ ಕೊಂತಿಯುಂ ಕರ್ಣನ ಶೋಕದೊಳ್ ಧರ್ಮಪುತ್ರನಂ ಬೀಳೊಂಡವರೊಡನೆ ತಪಶ್ಚರಣಪರಾಯಣೆಯಾದಳಿತ್ತ ಧರ್ಮನಂದನಂ ದೇವಕೀನಂದನನನಿಂತೆಂದಂ
ವ|| ಆಗ ಅಯ್ಯರು ಸಹೋದರರು ಆ ಮಾತನ್ನು ಕೇಳಿ ವಿಶೇಷವಾಗಿ ದುಃಖಿಸಿ ಸಹಿಸಲಾರದೆ - ೧೦. “ನೀನು ನಮಗಣ್ಣನೆಂದು ನಮಗೆ ಯಾರೂ ತಿಳಿಸಲಿಲ್ಲ. ಮೊದಲು ತಿಳಿದಿದ್ದರೆ ಪಟ್ಟವನ್ನೂ ರಾಜ್ಯವನ್ನೂ ನಿನಗೆ ಕೊಟ್ಟು ಕೌರವಮುಖ್ಯಸ್ಥನಾದ ದುರ್ಯೋಧನನಲ್ಲಿ ದ್ವೇಷವನ್ನು ಶಾಶ್ವತವಾಗಿ ಬಿಸಾಡಿ ನೀನು ಹೇಳಿದುದನ್ನು ಮಾಡಿಕೊಂಡು ನಿನ್ನ ಬಾಯಿದಂಬುಲದಲ್ಲಿಯೂ ಇಟ್ಟ ತಂಗಳು ಅನ್ನದಲ್ಲಿಯೂ ಸಂಪ್ರದಾಯವನ್ನು ಪಾಲಿಸುತ್ತಿರುತ್ತಿದ್ದೆವಲ್ಲವೆ ? ವ ಎಂದು ದುಃಖದಿಂದ ಕೂಡಿದ್ದವರನ್ನು ಕೃಷ್ಣನು ಸಮಾಧಾನಪಡಿಸಿ ಕೊಂದವರು ಕೊಲೆಗೆ ಈಡಾಗಿ ಸಾಯುತ್ತಾರೆ ಎಂಬುದು ಲೋಕೋಕ್ತಿ, ಈಶ್ವರನ ಇಚ್ಛೆಯಿಂದಲೇ ನಡೆಯುತ್ತದೆ ಎಂದು ದುಃಖವನ್ನು ಹೋಗಲಾಡಿಸಿದನು. ಯುದ್ಧರಂಗವನ್ನು ಶಾಸ್ತರೀತಿಯಲ್ಲಿ ಸುತ್ತಿನೋಡಿ ದುರ್ಯೋಧನನೇ ಮೊದಲಾಗಿ ಕುರುಕ್ಷೇತ್ರದಲ್ಲಿ ಸತ್ತ ಎಲ್ಲ ರಾಜಕುಮಾರರನ್ನೂ ತಂದು ಒಟ್ಟಿಗೆ ಬೆಟ್ಟದಂತೆ ರಾಶಿಮಾಡಿದರು. ಕರ್ಣನ ಶರೀರವನ್ನು ಅಷ್ಟು ಜನವನ್ನೂ ಮೀರುವ ರೀತಿಯಲ್ಲಿ ಬ್ರಾಹ್ಮಣರಿಂದ ವಿಧಿಪೂರ್ವಕವಾಗಿ ಇರಿಸಿ ಶ್ರೀಗಂಧ, ಕರ್ಪೂರ, ಕರಿಯ ಅಗರು ಸೌದೆಯಿಂದ ಶಾಸ್ತ್ರದಲ್ಲಿ ಹೇಳಿರುವಂತೆ ಸಂಸ್ಕಾರಮಾಡಿದರು. ಕರ್ಣನ ಜ್ಞಾಪಕಾರ್ಥವಾಗಿ ಕರ್ಣಸ್ಥಳಿ ಯೆಂಬ ಕ್ಷೇತ್ರವನ್ನು ನಿರ್ಮಿಸಿದರು. ತರ್ಪಣವೇ ಮೊದಲಾದ ಕ್ರಿಯೆಗಳನ್ನು ಮಾಡಿ ಮುಗಿಸಿದರು: ಧೃತರಾಷ್ಟನೂ ಗಾಂಧಾರಿಯೂ ಮಕ್ಕಳನ್ನು ಅಗಲಿದ ದುಃಖದಿಂದ ಋಷಿಗಳ ತಪೋವನವನ್ನು ಆಶ್ರಯಿಸಿದರು. ಕುಂತೀದೇವಿಯೂ ಕರ್ಣನ ದುಃಖದಿಂದ ಧರ್ಮರಾಯನ ಅಪ್ಪಣೆಯನ್ನು ಪಡೆದು ಹೊರಟು ತಪಸ್ಸಿನಲ್ಲಿ ನಿರತಳಾದಳು. ಈ