________________
೬೮೮) ಪಂಪಭಾರತಂ
. ವ|| ಅಂತು ಪುರಜನಜನಿತಾಶೀರ್ವಾದಸಹಸಂಗಳೊಡನೆ ಸೂಸುವ ಶೇಷಾಕ್ಷತಂಗಳ ನಾನುತ್ತುಂ ಬಂದು ತತ್ತುರಾಂಗನೆಯ ಮುಖಸರಸಿಜಮಲರ್ದಂತೆಸೆದೂಪುವ ರಾಜಮಂದಿರಮಂ ಪೊಕ್ಕು ಧರ್ಮನಂದನಂ ದೇವಕೀನಂದನನೋಳ್ ಪರಮಾನಂದಂ ಬೆರಸು ಸಾಮಂತ ಚೂಡಾಮಣಿಯ ಪಟ್ಟಬಂಧನ ಮಹೋತ್ಸವಮಂ ಸಮಗೊಳಿಸಿ ವಿಕ್ರಮಾರ್ಜುನನನಿಂತೆಂದಂಉll ಪ್ರಾಯದ ಪಂಪ ಪಂಪಮಗೆ ಮಾದರಂ ತವ ಕೊಂದ ಪಂಪು ಕ..
ಟ್ರಾಯದ ಪಂಪು ಶಕ್ರನೊಡನೇಳಿದ ಪೆಂಪಿವು ಪೆಂಪುವತ್ತು ನಿ | ಟಾಯುಗಳಾಗಿ ನಿನೋಳಮರ್ದಿದರ್ುವು ನೀಂ ತಲೆವೀಸದುರ್ವರಾ ಶ್ರೀಯನಿದಾಗದೆನ್ನದೊಳಕೊಳ್ ಪರಮೋತ್ಸವದಿಂ ಗುಣಾರ್ಣವಾ || ೧೭
ವಗಿ ಎಂದು ಧರ್ಮಪುತ್ರನುಂ ದೇವಕೀಪುತ್ರನುಂ ಮರುತ್ತುತ್ರನುಮಮರೇಂದ್ರ ಪುತ್ರನನೆಂತಾನುಮೊಡಂಬಡಿಸಿ ನಾಳೆ ಪಟ್ಟಬದ್ಯೋತ್ಸವವೆಂದು ಮುನ್ನಿನ ದಿವಸಂ ಮಯನಿಂ ಪಂಚರತ್ನಮಯವಾದ ಸಭಾಮಂಟಪಮಂ ತರಿಸಿ ವಸಿಷ್ಠ ಕಶ್ಯಪ ವ್ಯಾಸ ವಿಶ್ವಾಮಿತ್ರ ಭರದ್ವಾಜಾದಿ ಮುನಿಪತಿಗಳಂ ಬರಿಸಿ ಮಾತಳಿಯ ಕೆಯೊಳ್ ದೇವೇಂದ್ರನಟ್ಟಿದ ಕಲ್ಪವೃಕ್ಷದ ತಳಿರ್ಗಳನ್ನರಾವತದ ಹರವೃಷಭದ ಕೊಡ ಮಣ್ಣುಮನಾಕಾಶಗಂಗೆಯ ನೀರುಮಂ ಮಂದಾರಪಾರಿಜಾತದ
ಕಡೆಯಲ್ಲಿಯೂ ಕೇಳಿಸುತ್ತಿರಲು ಕಣ್ಣುಗಳಿಗೆ ವೈಭವವು ತೋರಿ ಬರಲು, ಆಶೀರ್ವಾದದ ಅಕ್ಷತೆಗಳ ಸಮೂಹವು ತಮಗೂ ಸಂತೋಷವನ್ನು ಕೊಟ್ಟಿತು ಎನ್ನುತ್ತಿರಲು ಪಾಂಡವರು ಪುರಪ್ರವೇಶಮಾಡುವ ಸಂತೋಷವು ಅತ್ಯತಿಶಯವಾಯಿತು. ವಹಾಗೆ ಪಟ್ಟಣದ ಜನಗಳಿಂದ ಉದ್ಭವವಾದ ಆಶೀರ್ವಾದ ಸಹಸ್ರಗಳನ್ನೂ ಅವರು ಚೆಲ್ಲುವ ಮಂತ್ರಾಕ್ಷತೆಗಳನ್ನೂ ತಲೆಯಲ್ಲಿ ಧರಿಸುತ್ತ ಬಂದು ಆ ಪುರಸ್ತೀಯ ಮುಖಕಮಲವು ಅರಳಿದಂತೆ ಪ್ರಕಾಶಿಸುತ್ತಿರುವ ಅರಮನೆಯನ್ನು ಪ್ರವೇಶಿಸಿದರು. ಧರ್ಮರಾಜನು ಕೃಷ್ಣನೊಡನೆ ವಿಶೇಷ ಸಂತೋಷದಿಂದ ಕೂಡಿ ಸಾಮಂತಚೂಡಾಮಣಿಯಾದ ಅರ್ಜುನನ ಪಟ್ಟಾಭಿಷೇಕಮಹೋತ್ಸವವನ್ನೇರ್ಪಡಿಸಿ ಅರ್ಜುನನನ್ನು ಕುರಿತು ಹೀಗೆಂದನು-೧೭. ಗುಣಾರ್ಣವಾ ಪ್ರಾಯದ ವೈಭವ; ನಮ್ಮನ್ನು ಅತಿಕ್ರಮಿಸಿದವರನ್ನು ನಾಶವಾಗುವಂತೆ ಕೊಂದ ವೈಭವ; ಅತ್ಯಧಿಕವಾದ ಪರಾಕ್ರಮದ ವೈಭವ; ಇಂದ್ರನೊಡನೆ ಅವನ ಅರ್ಧಾಸನವನ್ನು ಹತ್ತಿದ ವೈಭವ ಇವು ಆಧಿಕ್ಯವನ್ನು ಹೊಂದಿ ದೀರ್ಘಾಯುವಾಗಿ ನಿನ್ನಲ್ಲಿ ಸೇರಿಕೊಂಡು ಪ್ರಕಾಶವಾಗಿವೆ. ಅರ್ಜುನ, ನೀನು ತಲೆಬೀಸದೆ (ಅಸಮ್ಮತಿಯನ್ನು ಪ್ರದರ್ಶಿಸದೆ) ಇದು ನನ್ನಿಂದಾಗುವುದಿಲ್ಲ ಎನ್ನದೆ ಈ ರಾಜ್ಯಸಂಪತ್ತನ್ನು ಅತ್ಯಂತ ಸಂತೋಷದಿಂದ ನೀನು ಅಂಗೀಕರಾಮಾಡು. ವ|ಎಂದು ಧರ್ಮರಾಯನೂ ಕೃಷ್ಣನೂ ಭೀಮನೂ ಅರ್ಜುನನನ್ನು ಹೇಗೂ ಒಪ್ಪಿಸಿದರು. ನಾಳೆಯೇ ಪಟ್ಟವನ್ನು ಕಟ್ಟುವ ದಿವಸವೆಂದು ದೇವಲೋಕದ ಶಿಲ್ಪಿಯಾದ ಮಯನೆಂಬುವನಿಂದ ಪಂಚರತ್ನಮಯವಾದ ಸಭಾಮಂಟಪವನ್ನು ತರಿಸಿದರು. ವಸಿಷ್ಠ, ಕಶ್ಯಪ, ವ್ಯಾಸ, ವಿಶ್ವಾಮಿತ್ರ, ಭಾರದ್ವಾಜರೇ ಮೊದಲಾದ ಋಷಿಶ್ರೇಷ್ಠರನ್ನು ಬರಮಾಡಿದರು. ಮಾತಲಿಯ ಕಯ್ಯಲ್ಲಿ ದೇವೇಂದ್ರನು ಕಲ್ಪವೃಕ್ಷದ ಚಿಗುರುಗಳನ್ನೂ ಐರಾವತವೆಂಬಾನೆಯೂ ಈಶ್ವರನ ನಂದಿಯೂ ಕೊಂಬಿನಿಂದ ಎಬ್ಬಿಸಿದ ಮಣ್ಣನ್ನೂ