________________
ಚತುರ್ದಶಾಶ್ವಾಸಂ | ೬೮೯ ಪೂಮಾಲೆಗಳುಮಂ ವರುಣದೇವನಟ್ಟಿದ ಕ್ಯಾರಕ್ಟೋರೇಕ್ಕುದಧಿಮಧುಪ್ರತಸ್ವಾದಕಂಗಳೆಂಬೇಬುಂ ಸಮುದ್ರಂಗಳ ಚತುರ್ದಶ ಮಹಾನದಿಗಳ ನೀರುಮಂ ತಂತು ತೋಳಗುವ ಕಳಭೌತ ಕಳಶಂಗಳೊಳ್ ತಕ್ಕನೆ ತೀವಿ ತಂದ ವಾರವನಿತಾಜನಕ್ಕಂ ಸಾಮಂತಚಕ್ರಕ್ಕಮುಡಲಿಕ್ಕಿ ಧವಳಚ್ಚತ್ರ ಚಾಮರಸಿಂಹಾಸನ ಪಟ್ಟವರ್ಧನಕುಲಧನಾದಿ ರಾಜ್ಯಚಿಹ್ನಂಗಳಂ ವಿವಿಧ ವಿಧಾನದಿಂದಮಧಿವಾಸಿಸಿ ಗಂಗಾಜಳಪವಿತ್ರೀಕೃತಗಾತ್ರನುಂ ಕೌಶೇಯ ಪರಿಧಾನನುಮಾಗಿರ್ದ ಮಾನನಿಧಾನನಂ ತಂದು ಪೊಡವಡಿಸಿ ಮಂಗಳಪಟಹಂಗಳುಂ ಮಂಗಳಗೀತಿಗಳುಮಸೆಯ ಕಳಕಳಾವರ್ತಮಾಗೆ ಜಾಗರಮಿರ್ದು ಮುದಿವಸಂ ಪ್ರಶಸ್ತ ಹೂರ್ತಿಕ ನಿರೂಪಿತ ಶುಭ ಲಗೋದಯ ದಿಂದಷ್ಟೋತ್ತರಶತ ಪೂರ್ಣಕುಂಭಂಗಳಂ ಚತುರ್ವೆದ ಪಾರಗರಷ್ಟ ಧರಾಮ ರರೆತ್ತಿಕೊಂಡು ಮಂತ್ರಪೂತ ಜಲಂಗಳಿಂ ಮಾಯಿಸಿಮll ಸ ವನಧಿಪ್ರಧಾನದಿಂ ಮಂಗಳಪಟಹರವಂ ಪರ್ಚೆ ಮಾಂಗಲಗೇಯ
ಧ್ವನಿಯಿಂದಾಶಾಂತರಂ ಪೂರ್ಣಿಸಿ ಸೊಗಯಿಸಿ ಕೆಯ್ದೆಯು ಸಾಮಂತ ಸೀಮಂ | ತಿನಿಯರ್ ಮುಂದಾಡೆ ಭೋರೆಂದೆಸೆಯೆ ಜಯಜಯಧ್ಯಾನಮೋರಂತೆ ವಾರಾಂ ಗನೆಯರ್ ವಂದಾಡೆ ಸಂದೀ ವಿಭವದೊಳರಿಗಂಗಾಯ್ತು ರಾಜ್ಯಾಭಿಷೇಕಂ || ೧೮
ಆಕಾಶಗಂಗೆಯ ನೀರನ್ನೂ ನಮೇರು ಮಂದಾರ ಪಾರಿಜಾತಗಳೆಂಬ ದೇವಲೋಕದ ಮರಗಳ ಹೂವುಗಳಿಂದ ಕೂಡಿದ ನೀರುಗಳನ್ನೂ ಕಳುಹಿಸಿಕೊಟ್ಟನು. ವರುಣದೇವನು ಉಪ್ಪು, ಹಾಲು,ಕಬ್ಬಿನ ರಸ, ಮೊಸರು, ಜೇನು, ತುಪ್ಪ, ಸಿಹಿನೀರುಗಳ ಏಳು ಸಮುದ್ರಗಳ ಮತ್ತು ಹದಿನಾಲ್ಕು ಮಹಾನದಿಗಳ ಪುಣ್ಯತೀರ್ಥವನ್ನು ಕಳುಹಿಸಿಕೊಟ್ಟನು. ಅವನ್ನು ಥಳಥಳನೆ ಹೊಳೆಯುವ ಸ್ವಚ್ಛವಾದ ಬಿಳಿಯ ಕೊಡಗಳಲ್ಲಿ ತುಂಬಿ ತಂದಿರುವ ವೇಶ್ಯಾಸ್ತ್ರೀಯರಿಗೂ ಸಾಮಂತರಾಜಸಮೂಹಕ್ಕೂ ಉಡುಗೊರೆಯನ್ನು ಕೊಟ್ಟನು. ಶ್ವೇತಚ್ಛತ್ರ (ಬಿಳಿಯ ಕೊಡೆ) ಚಾಮರ, ಸಿಂಹಾಸನ, ಪಟ್ಟದಾನೆ, ಕುಲಧನವೇ ಮೊದಲಾದ ರಾಜ್ಯಚಿಹ್ನೆಗಳನ್ನು ಬೇರೆ ಬೇರೆ ರೀತಿಯಿಂದ ಪ್ರತಿಷ್ಠೆ ಮಾಡಿಸಿದನು. ಗಂಗಾಜಲದಿಂದ ಪವಿತ್ರವನ್ನಾಗಿ ಮಾಡಲ್ಪಟ್ಟ ಶರೀರವುಳ್ಳವನೂ ರೇಷ್ಮೆಯ ವಸ್ತದ ಹೊದಿಕೆಯುಳ್ಳವನೂ ಆದ ಅರ್ಜುನನನ್ನು ನಮಸ್ಕಾರಮಾಡಿಸಿ ಮಂಗಳವಾದ್ಯಗಳೂ ಮಂಗಳಗೀತೆಗಳೂ ಪ್ರಕಾಶಿಸುತ್ತಿರಲು ಕಳಕಳಧ್ವನಿಯಿಂದ ಆವರಿಸಲ್ಪಟ್ಟು ಜಾಗರಣೆಯಿರಿಸಿದನು. ಮಾರನೆಯ ದಿವಸ ಪ್ರಶಸ್ತವಾದ ಜೋಯಿಸರಿಂದ ನಿಷ್ಕರ್ಷಿಸಲ್ಪಟ್ಟ ಶುಭಮುಹೂರ್ತದಲ್ಲಿ ನೂರೆಂಟು ಪೂರ್ಣಕುಂಭಗಳನ್ನು ನಾಲ್ಕು ವೇದಗಳಲ್ಲಿಯೂ ಪಂಡಿತರಾದ ಬ್ರಾಹ್ಮಣರು ಎತ್ತಿಕೊಂಡು ಮಂತ್ರಪೂತವಾದ ನೀರಿನಿಂದ ಸ್ನಾನಮಾಡಿಸಿದರು. ೧೮. ಸಮುದ್ರಘೋಷದಂತೆ ಮಂಗಳವಾದ್ಯಧ್ವನಿಯು ಹೆಚ್ಚಿದುವು. ಮಂಗಳಗೀತೆಗಳ ಧ್ವನಿಯಿಂದ ದಿಕ್ಕುಗಳ ಒಳಭಾಗವೆಲ್ಲ ಶಬ್ದಮಾಡಿ ಸೊಗಯಿಸಿದುವು, ಅಲಂಕಾರಮಾಡಿಕೊಂಡಿರುವ ಸಾಮಂತರಾಜರ ಸ್ತ್ರೀಯರು ಮುಂಭಾಗದಲ್ಲಿ ನೃತ್ಯವಾಡಿದರು. ಜಯಜಯಧ್ವನಿಯು ಒಂದೇ ಸಮನಾಗಿ ಭೋರೆಂದು ಧ್ವನಿಮಾಡುತ್ತಿರಲು ವೇಶ್ಯಾಸ್ತ್ರೀಯರು ಬಂದು ನೃತ್ಯವಾಡಿದರು. ಇಂದು ಈ ವೈಭವದಲ್ಲಿ ಅರಿಗನಿಗೆ (ಅರ್ಜುನನಿಗೆ) ರಾಜ್ಯಾಭಿಷೇಕವಾಯಿತು.