________________
ಚತುರ್ದಶಾಶ್ವಾಸಂ | ೬೯೧ ಶುದ್ಧನುಂ ಗುಣಶುದ್ಧನುಂ ಗುಣಸಮುದ್ರನುಮಪ್ಪ ಮಹಾಮಂತ್ರಿಯಭವನುಮುಚ್ಚಿತ್ಯವಾನ್ವಯ ಸಂಭವನುಂ ಪ್ರಶಸ್ತ ಲಕ್ಷಣ ಲಕ್ಷಿತನುಮಪ್ಪ ತ್ರಿಭುವನತಿಲಕಮೆಂಬ ಕುದುರೆಗಂ ಪಟ್ಟಂಗಟ್ಟಿ ಪುರುಷೋತ್ತಮನ ತಂಗೆಯುಂ ತಾನುಂ ತುಳಾಪುರುಷಮನಿರ್ದು ಲೋಕಕ್ಕೆಲ್ಲಂ ಬಿಯಮಂ ಮದುಚಂಗ ತೊರೆದುದು ಕಾಮಧೇನು ತುಜುಗಲ್ಗೊನೆವುದು ಕಲ್ಪವೃಕ್ಷಮಾ
ಶರನ ವರಪ್ರಸಾದಮಿದಿರ್ಗೊಂಡುದು ಸುತ್ತಿ ದೂಂದು ಮುತ್ತಿನಾ | ಗರಮ ತೆರಳುಗೆಯ ರಸ ಸಿದ್ದಿಯುಮಾಯ್ತನೆ ತನ್ನನಾಸವ
ಟೆರೆದವರ್ಗಿತ್ತು ಪೊಮ್ಮಯದ ಮಾಡಿದ ನೆಲನಂ ಗುಣಾರ್ಣವಂ || ೨೧
ವ|| ಅಂತು ಚಾಗಂಗೆಯ್ದು ಸಿಂಹಾಸನಮಸ್ತಕಸ್ಥಿತನುಂ ವಿರಾಜಮಾನ ಧವಳಚ್ಛತ್ರಚಾಮರ ಸಹಸ್ರಪಂಛಾದಿತನುಮಾಗಿ ವಿಕ್ರಾಂತತುಂಗನೊಡೋಲಗಂಗೊಟ್ಟರೆಕಂ|| ಎಡೆಗೊಂಡಿರಿಮುಂಚಂ
ನುಡಿಯದಿರಿಂ ನೃಪತಿ ನುಡಿಯಿಂ ನೀಮಿ | ರ್ಪಡೆಯೊಳಿರಿಂ ನೀವಟಿವಿ ಮಿಡುಕಿದೊಡನೆ ಚಿತ್ರವೇತದಂಡಧರರ್ಕಲ್ ನ
ಆಗಿರುವ ತ್ರಿಭುವನಾಭರಣವೆಂಬ ಆನೆಗೂ ಉಭಯಕುಲಶುದ್ದನೂ ಗುಣಸಮುದ್ರನೂ ಆಗಿರುವ ಮಹಾಮಂತ್ರಿಯ ಮನೆಯಲ್ಲಿಯೇ ಬೆಳೆದ (?) ಉಚ್ಚೆಶ್ರವದ ವಂಶದಲ್ಲಿಯೇ ಜನಿಸಿರುವ ಪ್ರಶಸ್ತವಾದ ಲಕ್ಷಣಗಳಿಂದ ಗುರುತುಮಾಡಲ್ಪಟ್ಟ ತ್ರಿಭುವನತಿಲಕವೆಂಬ ಕುದುರೆಗೂ ಪಟ್ಟವನ್ನು ಕಟ್ಟಿದರು. ಕೃಷ್ಣನ ತಂಗಿಯಾದ ಸುಭದ್ರೆಯೂ ಅರ್ಜುನನೂ ತುಲಾಪುರುಷಭಾರವಿದ್ದು (ತನ್ನ ತೂಕದಷ್ಟು ಚಿನ್ನವನ್ನು ತೂಕಮಾಡಿ ದಾನಮಾಡುವುದು) ಲೋಕಕ್ಕೆಲ್ಲ ತಮ್ಮ ದಾನದ ವೈಭವವನ್ನು ಮೆರೆದರು. ೨೧. ಕಾಮಧೇನುವೆಂಬ ದೇವಲೋಕದ ಹಸುವು ಹಾಲನ್ನು ಸುರಿಸಿತು. ಕಲ್ಪವೃಕ್ಷವು ಕಿಕ್ಕಿರಿದು ತುಂಬಿದ ಹಣ್ಣುಗಳಿಂದ ಕೂಡಿದ ಗೊನೆಯನ್ನುಳ್ಳುದಾಯಿತು. ಈಶ್ವರನ ವರಪ್ರಸಾದವು ಎದಿರುಗೊಂಡಿತು. ಸುತ್ತಲೂ ಒಂದು ಮುತ್ತಿನ ಭಂಡಾರವೇ ಆವರಿಸಿಕೊಂಡು ಚಲಿಸಿತು. ಸಂಪೂರ್ಣವಾಗಿ ರಸಸಿದ್ದಿ ಆಯಿತು ಎನ್ನುವ ಹಾಗೆ ತನ್ನಲ್ಲಿ ಆಸೆಯಿಂದ ಬಂದು ಬೇಡಿದವರಿಗೆ ಅವರ ತೃಪ್ತನುಸಾರವಾಗಿ ದಾನಮಾಡಿ ಲೋಕವನ್ನೆಲ್ಲ ಸುವರ್ಣಮಯವನ್ನಾಗಿ ಮಾಡಿದನು. ವ|| ಹಾಗೆ ದಾನಮಾಡಿ ಸಿಂಹಾಸನದ ಮೇಲುಭಾಗದಲ್ಲಿ ಕುಳಿತವನೂ ಹೊಳೆಯುತ್ತಿರುವ ಸಾವಿರಾರು ಬೆಳುಗೊಡೆ ಮತ್ತು ಚಾಮರಗಳಿಂದ ಮುಸುಕಲ್ಪಟ್ಟವನೂ ವಿಶೇಷ ಪರಾಕ್ರಮಿಯೂ ಆದ ಅರ್ಜುನನು ಸಭಾಮಧ್ಯದಲ್ಲಿ ಓಲಗಗೊಟ್ಟನು. ೨೨. ನಿಮ್ಮನಿಮ್ಮ ಸ್ಥಳದಲ್ಲಿರಿ; ಗಟ್ಟಿಯಾಗಿ ಮಾತನಾಡಬೇಡಿ; ರಾಜನು ಮಾತನಾಡಿದ ಮೇಲೆ ನೀವು ಮಾತನಾಡಿ; ನೀವು ಇರುವ ಸ್ಥಳದಲ್ಲಿಯೇ ಇರಿ; ಅಲುಗಾಡಿದರೆ ತಕ್ಷಣವೇ ಬಗೆಬಗೆಯಾದ ಬೆತ್ತವನ್ನು ಹಿಡಿದಿರುವ ಕಟ್ಟಿಗೆಕಾರರ ಅನುಭವವು ನಿಮಗಾಗುತ್ತದೆ. (ಅವರ ದಂಡದ