________________
ಚತುರ್ದಶಾಶ್ವಾಸಂ / ೬೯೫ ಶಾll ಕೈಲಾಸಂ ನಿಷಧಾಧಿಪಾಂಗ ನಿಕಟಕ್ಕೊಣೀಧರಂ ನೀಳ ಕು
ಳಂ ಕಂದಮಹೀಧರಂ ಶಿಖರನಾಮೋದ್ಯನ್ಮಗಂ ಪ್ರಸ್ತುರ || ತಾಳೇಯಾಚಲಮಿಾತನೆಮ್ಮವೊಲಿಳಾಧ್ರನ್ನಾಥನೆಂದಿ೦ತಿಳಾ
ಪಾಳಂಗೀಗರಿಗಂಗೆ ಮಂಗಳಮಹಾಶ್ರೀಯಂ ಜಯಶ್ರೀಯುಮಂ || ೩೩ ಮಃ | ಜಳಧಿ ದ್ವೀಪ ರಸಾತಳಾಂಬರ ಕುಲಾಧೀಂದ್ರಂಗಳೊರಂತೆ ತ
ಳಮುದ್ರತಟಕಂಗಳಾವಹ ಮಹಾದ್ರವಂಗಳೂರಂತ ಮಂ | ಗಳಕಾರ್ಯಂಗಳನಿತ್ತು ಮತ್ತೆ ಮಣಿಭೂಷಾತುಂಗರತ್ನಾಂಶು ಪಾ ಟಳಿತಂಗೀಗರಿಗಂಗೆ ಮಂಗಳ ಮಹಾಶ್ರೀಯಂ ಜಯಶ್ರೀಯುಮಂ || ೩೪ ನಯನಾನಂದ ಮೃಗಾಂಕಬಿಂಬಮುದಯಂಗೆಯ್ಯರ್ಕಬಿಂಬಂ ಮನಃ ಪ್ರಯಲಕ್ಷ್ಮಿ ವದನೇಂದು ಬಿಂಬಮಖಿಲ ಕ್ಷಾ ದವೀಪವಾರ್ಧಿಪ್ರಮೋ | ದ ಯಶೋಬಿಂಬಮುದಗ್ರದಿಕ್ಕರಿಕರಾಕಾರೋಲ್ಲಸಾಹುಗೀ ಪ್ರಿಯಗಳ್ಳಂಗೊಸದೀಗ ಮಂಗಳಮಹಾಶ್ರೀಯಂ ಜಯಶ್ರೀಯುಮಂ || ೩೫
ವ| ಎಂದು ಪೊಗಟ್ಟು ಮಾಣ್ಣ ನಂತರದೊಳ್ ವ್ಯಾಸ ಕಶ್ಯಪ ವಿಶ್ವಾಮಿತ್ರ ಭರದ್ವಾಜಾದಿ ಮಹಾಮುನಿಪತತಿಗಳ್ ಬಂದು ನಿಜಕಮಂಡಲುಜಲಂಗಳೊಳ್ ಬೆರಸಿದ ಧವಳಾಕ್ಷತಂಗಳಂ ತಳಿದು
ಸರ್ವದಾ ಕೊಡಲಿ-೩೩. ಕೈಲಾಸ ಪರ್ವತ, ನಿಷಧಪರ್ವತ ಮತ್ತು ಅಂಗದೇಶಕ್ಕೆ ಸಮೀಪವಾದ ಪರ್ವತ, ನೀಲಗಿರಿಯೆಂಬ ಪರ್ವತ, ಕಂದವೆಂಬ ಪರ್ವತ, ಶಿಖರವೆಂಬ ಪರ್ವತ ಎತರವೂ ಪ್ರಕಾಶವೂ ಆದ ಹಿಮವತ್ಸರ್ವತ ಇವೆಲ್ಲ ಅರಿಕೇಸರಿಯೂ ನಮ್ಮ ಹಾಗೆಯೇ ರಾಜಾಧಿರಾಜ, ಚಕ್ರವರ್ತಿ (ಇಳೆಯನ್ನು ಧರಿಸಿರುವವನು) ಎಂದು ಭೂಪಾಲನಾದ ಅರಿಕೇಸರಿಗೆ (ಅರ್ಜುನನಿಗೆ) ಮಂಗಳ ಮಹಾಶ್ರೀಯನ್ನೂ ಜಯಶ್ರೀಯನ್ನೂ ಅನುಗ್ರಹಿಸಲಿ. ೩೪. ಸಮುದ್ರ, ದ್ವೀಪ, ಪಾತಾಳ, ಆಕಾಶ ಮತ್ತು ಕುಲಪರ್ವತಗಳು ತಮ್ಮಲ್ಲಿರುವ ಅಮೂಲ್ಯವಾದ ವಸ್ತುಗಳನ್ನು ಒಂದೇ ಸಮನಾದ ಮಂಗಳಕಾರ್ಯಗಳನ್ನು ಪಾಟಳಕಾಂತಿಯಿಂದ ಪ್ರಕಾಶಮಾನವಾದ ಅರಿಗಂಗೆ ಕೊಟ್ಟು ಮಂಗಳಕಾರ್ಯಗಳನ್ನೂ ಜಯಶ್ರೀಯನ್ನೂ ದಯಪಾಲಿಸಲಿ. ೩೫. ಕಣ್ಣುಗಳಿಗಾನಂದವನ್ನುಂಟುಮಾಡುವ ಚಂದ್ರಬಿಂಬವೂ ಬಾಲಸೂರ್ಯನ ಬಿಂಬವೂ ಮನಸ್ಸಿಗೆ ಪ್ರಿಯಳಾದ ಲಕ್ಷ್ಮೀದೇವಿಯ ಮುಖಚಂದ್ರಬಿಂಬವೂ ಸಮಸ್ತವಾದ ಭೂಮಿ, ದ್ವೀಪ, ಮತ್ತು ಸಮುದ್ರಗಳಿಗೆ ಸಂತೋಷವನ್ನುಂಟುಮಾಡುವ ಯಶೋಬಿಂಬವೂ (ಕೀರ್ತಿಸಮೂಹವೂ) ದೀರ್ಘವಾದ ದಿಗ್ಗಜಗಳ ಸೊಂಡಿಲುಗಳ ಆಕಾರವನ್ನು ಪ್ರಕಾಶಮಾನವಾದ ಬಾಹುಗಳನ್ನು ಪ್ರಿಯಗಳ್ಳನೆಂಬ ಬಿರುದಾಂಕಿತನಾದ ಅರಿಕೇಸರಿಗೆ (ಅರ್ಜುನನಿಗೆ) ಸಂತೋಷಿಸಿ ಮಂಗಳಮಹಾಶ್ರೀ ಯನ್ನೂ ಜಯಶ್ರೀಯನ್ನೂ ಕೊಡಲಿ ವ|| ಎಂದು ಹೊಗಳಿ ನಿಲ್ಲಿಸಿಯಾದಮೇಲೆ ವ್ಯಾಸ ಕಶ್ಯಪ ವಿಶ್ವಾಮಿತ್ರ ಭಾರದ್ವಾಜರೇ ಮೊದಲಾದ ಮಹಾಮುನಿಗಳ ಸಮೂಹಗಳು ಬಂದು ತಮ್ಮ ಕಮಂಡಲುಗಳ ನೀರಿನಿಂದ ಬೆರಸಿದ ಬಿಳಿಯ