________________
೬೯೬ | ಪಂಪಭಾರತಂ ಮll ಅರಿ ಭೂಪಾಳ ದವಾನಳಂ ಹರಿ ನಿನ್ನುಗ್ಯಾಸಿ ಧಾರಾಂಬು ಶೀ
ಕರದಿಂ ಮುಗೆ ದಾನವರ್ಷ ಸಲಿಲಂ ಕೊಳರ್ಥಿ ಸಸ್ಯಕ್ಕೆ ಕಿ | qರಿಯರ್ ಪಾಡುಗೆ ನಿನ್ನದೊಂದು ಪಲವುಂ ಬಣ್ಣಂಗಳಂ ಮೇರು ಮಂ
ದರ ಕೈಳಾಸ ಮಹೇಂದ್ರ ನೀಳ ನಿಷಧಾದೀಂದ್ರೂಪಕಂಠಂಗಳೊಳ್ || ೩೬
ವ|| ಎಂದು ಪರಸಿ ತಮ್ಮ ನಿವಾಸಂಗಕ್ಕೆ ಪೋದರಾಗಳ್ ಧರ್ಮನಂದನನೆನಗೆ ನಿನ್ನ ರಾಜ್ಯಾಭಿವೃದ್ಧಿಯಂ ನೋಡುತಿರ್ಪುದುಂ ಮುಮುಕ್ಷು ವೃತ್ತಿಯೊಳಿರ್ಪುದುಮಲ್ಲದೆ ಪೆಜತೇನುಂ ಬಾವಿಯಲ್ಲೊಂದು ಭೀಮ ನಕುಳ, ಸಹದೇವರ್ಕಳೆ ದುರ್ಯೋಧನನ ತಮ್ಮನ ಯುಯುತ್ಸುಗಮವ ಬೇಡಿದ ನಾಡುಗಳನೆ ಕುಡಿಸಿ ಸಂತಸಂಬಡಿಕೆ ಪುರುಷೋತ್ತಮನಂ ವಿಬುಧವನಜವನಕಳಹಂಸನುಮಿಂತೆಂದಂಕಂ|| ನಿನ್ನ ದಯೆಯಿಂದಮರಿ ನೃಪ
ರನ್ನೇ ಕೊಂದೆಮಗೆ ಸಕಳ ರಾಜ್ಯಶ್ರೀಯುಂ | ನಿನ್ನ ಬಲದಿಂದ ಸಾರ್ದುದು
ನಿನ್ನುಪಕಾರಮನದೇತಳ್ ನೀಗುವೆನೋ || ವ| ಎಂದು ಮುಕುಂದನನನುನಯ ವಚನ ರಚನಾ ಪರಂಪರೆಗಳಿಂ ಸಂತಸಂ ಬಡೆ ನುಡಿದು ಸಾತ್ಯಕಿವೆರಸನರ್ವ್ಯವಸ್ತುವಾಹನ ಸಹಿತಂ ದ್ವಾರಾವತಿಗೆ ಕಳಿಸಿ ಸಕಳಭುವನತಳ ಭಾರಮನವಯವದಿಂ ತಾಳಿರ್ದುದಾತ್ತವೃತ್ತಿಯೊಳುದಾತ್ತನಾರಾಯಣನುಂ ಭುವನ
೩೭
ಅಕ್ಷತೆಗಳನ್ನು ಚೆಲ್ಲಿ (ಆಶೀರ್ವಾದಪೂರ್ವಕ ತಲೆಯ ಮೇಲೆ ಎರಚಿ) ಹರಸಿದರು. ೩೬. ಎಲೈ ಅರ್ಜುನನೇ ಶತ್ರುರಾಜರೆಂಬ ಕಾಡುಕಿಚ್ಚು ನಿನ್ನ ಭಯಂಕರವಾದ ಕತ್ತಿಯ ಅಲಗೆಂಬ ನೀರಿನ ಹನಿಗಳಿಂದ (ಅಸಿಧಾರೆಯ ಹನಿಗಳಿಂದ) ಅಳಿದುಹೋಗಲಿ. ಯಾಚಕರೆಂಬ ವೃಕ್ಷಕ್ಕೆ ನಿನ್ನ ದಾನವೆಂಬ ಮಳೆಯು ಸುರಿಯಲಿ. ನಿನ್ನ ಸ್ತುತಿರೂಪವಾದ ಅನೇಕ ಹಾಡುಗಳನ್ನು ಕಿನ್ನರಿಯರು ಮೇರು, ಮಂದರ, ಕೈಲಾಸ, ಮಹೇಂದ್ರ, ನಿಷಧ ಪರ್ವತಗಳ ಸಮೀಪ ಪ್ರದೇಶಗಳಲ್ಲಿ (ತಪ್ಪಲಿನಲ್ಲಿ ಹಾಡಲಿ. ವ|| ಎಂಬುದಾಗಿ ಆಶೀರ್ವಾದಮಾಡಿ ತಮ್ಮ ಮನೆಗಳಿಗೆ ಹೋದರು. ಆಗ ಧರ್ಮರಾಯನು ಅರ್ಜುನ! ನಿನ್ನ ರಾಜ್ಯಾಭಿವೃದ್ಧಿಯನ್ನು ನೋಡುತ್ತಿರುವುದೂ ಮೋಕ್ಷೇಚ್ಚುಗಳಾದ ತಪಸ್ವಿಗಳ ವೃತ್ತಿಯಲ್ಲಿರುವುದೂ ಅಲ್ಲದೆ ನನಗೆ ಬೇರೆ ಯಾವ ಪ್ರಯೋಜನವೂ ಇಲ್ಲ ಎಂದು ಹೇಳಿ ಹಾಗೆಯೇ ಭೀಮ ನಕುಲ ಸಹದೇವರುಗಳಿಗೂ ದುರ್ಯೊಧನನ ತಮ್ಮನಾದ ಯುಯುತ್ಸುವಿಗೂ ಅವರು ಕೇಳಿದ ನಾಡುಗಳನ್ನು ಕೊಡಿಸಿ ಸಂತೋಷಪಡಿಸಿದನು. ಅರ್ಜುನನು ಕೃಷ್ಣನನ್ನು ಕುರಿತು ಹೀಗೆಂದನು, ೩೭. ನನ್ನ ಕೃಪೆಯಿಂದ ಶತ್ರುರಾಜರನ್ನು ಸಂಪೂರ್ಣವಾಗಿ ಕೊಂದ ನಮಗೆ ಸಕಳ ರಾಜ್ಯಸಂಪತ್ತೂ ನಿನ್ನ ಶಕ್ತಿಯಿಂದಲೇ ಕೈಸೇರಿತು. ನಿನ್ನ ಸಹಾಯವನ್ನು ಯಾವುದರಲ್ಲಿ ತೀರಿಸಲಿ ವ|| ಎಂದು ಕೃಷ್ಣನನ್ನು ಪ್ರೀತಿಯುಕ್ತವಾದ ಮಾತುಗಳ ಸಮೂಹದಿಂದ ಸಂತೋಷಪಡುವ ಹಾಗೆ ಮಾತನಾಡಿ ಸಾತ್ಯಕಿಯೊಡನೆ ಬೆಲೆಯೇ ಇಲ್ಲದ ಅನೇಕ ವಸ್ತುವಾಹನಗಳ ಸಹಿತವಾಗಿ ದ್ವಾರಾವತಿಗೆ ಕಳುಹಿಸಿದನು. ಸಮಸ್ತವಾದ ಭೂಮಂಡಲದ ಭಾರವನ್ನೂ ಸುಲಭವಾಗಿ ಧರಿಸಿ