________________
ಚತುರ್ದಶಾಶ್ವಾಸಂ | ೬೯೭ ಭವನೋದರದೊಳ್ ಪಸರಿಸಿದ ತೇಜದೋಳ್ ಪ್ರಚಂಡ ಮಾರ್ತಂಡನುಂ ಆವೆಡೆಯೋಳಮಸ ಮಾನಮನಿಸಿದ ಮಹಾಮಹಿಮೆಯೋಳುದಾರಮಹೇಶ್ವರನುಂ ನಳ ನಹುಷ ಮಾಂಧಾತರಂ ಮಸುಳೆವಂದ ನೆಗಟಿಯೊಳ್ ಮನುಜಮಾಂಧಾತನುಂ ತ್ರಿಣೇತ್ರನುಮನಸುಂಗೊಳಿಸಿದ ಸಾಹಸದೊಳ್ ಕದನತ್ರಿಣೇತ್ರನುಂ ಅಚಳಿತ ಪ್ರತಿಜ್ಞೆಯೋಳ್ ಪ್ರತಿಜ್ಞಾ ಗಾಂಗೇಯನುಂ ರಾಮನುಮುನೇಟಿಸಿದ ಸಾಹಸದೊಳಕಳಂಕರಾಮನುಂ ಬೇಡಿದರ ಬೇಡಿದುದಂ ಮಾರ್ಕೊಳ್ಳವುದುಂ ಪ್ರತ್ಯಕ್ಷಜೀಮೂತವಾಹನನುಂ ಚತುರ್ದಶ ಭುವನಂಗಳೊಳ್ ತನಗೆ ಮಾರ್ಮಲೆವರಿಲ್ಲಪುದಂ ಜಗದೇಕಮಲ್ಲನುಂ ಉರ್ಕಿ ಬಂದು ಮೇಲ್ತಾಯ ಮಾರ್ವಲಂಗಳಂ ತನ್ನ ಬಾಳ ಬಾಯೊಳಾಡಿದುದಂ ಪರಸೈನ್ಯಭೈರವನುಂ ಅರಾತಿ ಗಜಘಟೆಗಳೆನಿತು ಬಂದೊಡ್ಡಯುಂ ತನ್ನೊಂದಮಂದಧ್ವನಿಗೂಡೂಡ ದೋಡುವುದಣಿಂ ವೈರಿಗಜಘಟಾವಿಘಟನನುಂ ತನಗಿದಿರನದಿರದೊಡ್ಡಿದ ವಿದ್ವಿಷ್ಟ ಬಲಂ ನೋಡೆ ನೋಡೆ ಕರಗುವುದಣಿಂ ವಿದ್ವಿಷ್ಟ ವಿದ್ರಾವಣನುಂ ಅರಾತಿ ವನ ಗಹನಮನಳುರ್ದು ಕೊಳ್ಳುದಳೆಂದಮರಾತ ಕಾಳಾನಳನುಂ ಪಗೆವರೆಂಬ ಕುರಂಗಂಗಳನೊಂದೊಂದeಳೊಂದಲೀ ಯದಬ್ಬಟ್ಟುವುದಳೆಂ ರಿಪುಕುರಂಗಕಂಠೀರವನುಂ ವಿಕ್ರಾಂತದೊಳ್ ತರ್ದಲ್ಲಿ ತಾನೆ ಪಿರಿಯನಪ್ಪುದಂ ವಿಕ್ರಾಂತ ತುಂಗನುಂ ಆವೆಡೆಯೊಳಂ ವಿಕ್ರಮಂ ಕಮ್ಮೆನಿಸಿದುದಳೆಂ ಪರಾಕ್ರಮಧವಳನುಂ ಎಂತಪ್ಪ ಸಂಗ್ರಾಮದೊಳಂ ಪೋಗದೆ
ಉದಾತ್ತ ವೃತ್ತಿಯಲ್ಲಿದ್ದು ಉದಾತ್ತನಾರಾಯಣನೂ ಭುವನೋದರದಲ್ಲಿ (ಪ್ರಪಂಚವೆಂಬ ಮನೆಯ ಒಳಭಾಗದಲ್ಲಿ ಪ್ರಸರಿಸಿದ ತೇಜಸ್ಸಿನಿಂದ ಪ್ರಚಂಡಮಾರ್ತಂಡನೂ (ಅತ್ಯಂತ ಕಾಂತಿಯುಕ್ತವಾದ ಸೂರ್ಯ) ಯಾವ ಕಡೆಯಲ್ಲಿಯೂ ಸಮಾನವೇ ಇಲ್ಲದವನು ಎಂಬ ಮಹಿಮೆಯಿಂದ ಉದಾರಮಹೇಶ್ವರನೂ ನಳನಹುಷಮಾಂಧಾತರನ್ನು ಕಾಂತಿಹೀನಮಾಡಿದ ಪ್ರಸಿದ್ದಿಯಿಂದ ಮನುಜಮಾಂಧಾತನೂ ಮುಕ್ಕಣ್ಣನನ್ನೂ ಆಶ್ಚರ್ಯಪಡಿಸಿದ ಸಾಹಸದಿಂದ ಕದನತ್ರಿಣೇತ್ರನೂ ಚಲಿಸದೇ ಇದ್ದ ಪ್ರತಿಜ್ಞೆಯಿಂದ ಪ್ರತಿಜ್ಞಾಗಾಂಗೇಯನೂ ರಾಮನನ್ನೂ ಹಿಯ್ಯಾಳಿಸಿದ ಸಾಹಸದಿಂದ ಅಕಳಂಕ .ರಾಮನೂ ಬೇಡಿದವರಿಗೆ ಅವರು ಬೇಡಿದುದನ್ನು ಪ್ರತಿಮಾತನಾಡದೆ ಕೊಡುವುದರಿಂದ ಪ್ರತ್ಯಕ್ಷ ಜೀಮೂತವಾಹನನೂ ಹದಿನಾಲ್ಕು ಲೋಕಗಳಲ್ಲಿಯೂ ತನಗೆ ಪ್ರತಿಭಟಿಸುವವರಿಲ್ಲದುದರಿಂದ ಜಗದೇಕಮಲ್ಲನೂ ಕೊಬ್ಬಿ ಬಂದು ಮೇಲೆ ಬೀಳುವ ಪ್ರತಿಸೈನ್ಯವನ್ನು ತನ್ನ ಕತ್ತಿಯ ಮೊನೆಯಿಂದ ನಾಶಪಡಿಸಿದುದರಿಂದ ಪರಸೈನ್ಯ ಭೈರವನೂ ಶತ್ರುಪಕ್ಷಗಳ ಆನೆಯ ಸಮೂಹವು ಎಷ್ಟು ಬಂದು ಚಾಚಿದರೂ ತನ್ನ ಒಂದು ಗರ್ಜನೆಗೆ ಗುಂಪು ಚೆದುರಿ ಓಡುವುದರಿಂದ ವೈರಿಗಜಘಟಾವಿಘಟನನೂ ತನಗೆ ಇದಿರಾಗಿ ಹೆದರದೆ ಬಂದು ಒಡ್ಡಿದ ಶತ್ರುಸೈನ್ಯವು ನೋಡುನೋಡುತ್ತಿರುವಾಗಲೇ ಕರಗುವುದರಿಂದ ವಿದ್ವಿಷ್ಟ ವಿದ್ರಾವಣನೂ ಶತ್ರುಗಳೆಂಬ ಕಾಡಿನ ಒಳಭಾಗವನ್ನು ವ್ಯಾಪಿಸಿ ಸುಡುವುದರಿಂದ ಅರಾತಿ ಕಾಳಾನಳನೂ ಹಗೆಗಳೆಂಬ ಜಿಂಕೆಗಳನ್ನು ಒಂದೂ ಬಿಡದಂತೆ ಬೆನ್ನಟ್ಟಿ ಕೊಲ್ಲುವುದರಿಂದ ಅವಕಾಶವಿಲ್ಲದೆ ಓಡಿಸುವುದರಿಂದ ರಿಪು ಕುರಂಗಕಂಠೀರವನೂ ಪರಾಕ್ರಮದಲ್ಲಿ ತಾನಿದ್ದ ಜಾಗದಲ್ಲಿಯೇ ಹಿರಿಯನಾದುದರಿಂದ ವಿಕ್ರಾಂತತುಂಗನೂ, ಎಲ್ಲ ಕಡೆಯಲ್ಲಿಯೂ ಪರಾಕ್ರಮವೇ ತನಗೆ ಯೋಗ್ಯವಾದುದೆಂದು