________________
Coll
ಆ ಕೋಮರಯ್ಯಂಗವನಿತ ಳಾಕಾಶ ವ್ಯಾಪ್ತ ನಿಜ ಗುಣ ಮಣಿ ರ | ತ್ನಾಕರನಜ್ಞಾನತಮೋ
ನೀಕರನಭಿರಾಮ ದೇವರಾಯಂ ತನಯಂ ||
ಚoll
ಕಂ | ಪಂಪಂ ಧಾತ್ರೀವಳಯ ನಿ
ಚತುರ್ದಶಾಶ್ವಾಸಂ | ೭೦೧
ಜಾತಿಯೊಳೆಲ್ಲಮುತ್ತಮದ ಜಾತಿಯ ವಿಪ್ರಕುಲಂಗೆ ನಂಬಲೇ
ಮಾತೂ ಜಿನೇಂದ್ರ ಧರ್ಮಮ ವಲಂ ದೊರೆ ಧರ್ಮದೊಳೆಂದು ನಂಬಿ ತ | ಜ್ಞಾತಿಯನುತ್ತರೋತ್ತರಮೆ ಮಾಡಿ ನೆಗಟ್ಟಿದನಿಂತಿರಾತ್ಮ ವಿ ಖ್ಯಾತಿಯನಾತನಾತನ ಮಗಂ ನೆಗಟ್ಟಂ ಕವಿತಾಗುಣಾರ್ಣವಂ || ೪೮
42
೪ಂಪಂ ಚತುರಂಗ ಬಳ ಭಯಂಕರಣಂ ನಿ | ಪಂಪಂ ಲಲಿತಾಲಂಕರ
ಣಂ ಪಂಚಶರೈಕರೂಪನಪಗತಪಾಪಂ
೪೯
ಕವಿತೆ ನೆಗಟಿಯಂ ನಿಳಸ ಜೋಳದ ಪಾಚಿ ನಿಜಾಧಿನಾಥನಾ ಹವದೊಳರಾತಿನಾಯಕರ ಪಟ್ಟನೆ ಪಾಕಿಗೆ ಸಂದ ಪೆಂಪು ಭೂ | ಭುವನದೊಳಾಗಳುಂ ಬೆಳಗೆ ಮಿಕ್ಕಭಿಮಾನದ ಮಾತು ಕೀರ್ತಿಯಂ ವಿವರಿಸೆ ಸಂದನೇಂ ಕಲಿಯೊ ಸತ್ಕವಿಯೋ ಕವಿತಾಗುಣಾರ್ಣವಂ || 980
ಆದ ಮಗನು ಕೊಮರಯ್ಯನೆಂಬುವನು. ಆ ಕೊಮರಯ್ಯನಿಗೆ ಭೂಮ್ಯಾಕಾಶಗಳಲ್ಲಿ ಹರಡಿರುವ ತನ್ನ ಗುಣವೆಂಬ ಮಣಿಗಳಿಗೆ ಸಮುದ್ರದಂತಿರುವವನೂ ಅಜ್ಞಾನವೆಂಬ ಕತ್ತಲನ್ನು ಪರಿಹರಿಸುವವನೂ ಆದ ಅಭಿರಾಮದೇವರಾಯನೆಂಬುವನು ಮಗನು. ೪೮. ಜಾತಿಯಲ್ಲೆಲ್ಲ ಉತ್ತಮ ಜಾತಿಯ ಬ್ರಾಹ್ಮಣಕುಲದವನಿಗೆ ಧರ್ಮದಲ್ಲೆಲ್ಲ ಜೈನಧರ್ಮವೇ ಉತ್ತಮವಾದುದೆಂದು (ಯೋಗ್ಯವಾದುದು) ಆ ಜಾತಿಯನ್ನು ಅಭಿವೃದ್ಧಿಮಾಡಿ ತನ್ನ ಖ್ಯಾತಿಯನ್ನು ಈ ರೀತಿಯಲ್ಲಿ ಹೆಚ್ಚಿಸಿಕೊಂಡನು. ಅವನ ಮಗನೇ ಪ್ರಸಿದ್ಧನಾದ ಕವಿತಾಗುಣಾರ್ಣವ ಎಂಬ ಬಿರುದಿನ ಪಂಪ. ೩೯. ಪಂಪನು ಭೂಮಂಡಲದ ಶ್ರೇಷ್ಠದೇವತೆ. ಚತುರಂಗಸೈನ್ಯಗಳಿಗೆ ಭಯವನ್ನುಂಟುಮಾಡುವವನು. ಧೈರ್ಯಶಾಲಿ (ನಡುಗದವನು) ಸುಂದರವಾದ ಅಲಂಕಾರವುಳ್ಳವನು. ಮನ್ಮಥನ ಹಾಗೆಯೇ ಇರುವ ರೂಪವುಳ್ಳವನು, ಪಾಪರಹಿತನಾದವನು ೫೦. ತನ್ನ ಕವಿತ್ವವು ಖ್ಯಾತಿಯನ್ನು ಸ್ಥಾಪಿಸಿತು. ಅನ್ನದಾತನಲ್ಲಿದ್ದ ಉಪ್ಪಿನ ಋಣವು ತನ್ನ ರಾಜನ ಯುದ್ಧದಲ್ಲಿ ಶತ್ರುನಾಯಕರ ವೀರಪಟ್ಟಗಳನ್ನು ಹಾರಿಸುವಂತಹ ಹಿರಿಮೆಯನ್ನೂ ತನ್ನ ಯಶಸನ್ನೂ ವಿವರಿಸಿತು. ಕವಿತಾಗುಣಾರ್ಣವನು ಬಹು ಪ್ರಸಿದ್ಧನಾದನು. ಪಂಪಕವಿ ಎಂತಹ ಶೂರನೋ