________________
ಮ|
ಚತುರ್ದಶಾಶ್ವಾಸಂ |೭೦೭
ಕರಮರ್ತು ಸಮಸ್ತ ಭಾರತ ಕಥಾ ಸಂಬಂಧಮಂ ಬಾಜಿಸಲ್ ಬರೆಯಲ್ ಕೇಳಲೊಡರ್ಚುವಂಗಮಿದಳ್ ತನ್ನಿಷ್ಟವಪ್ಪನ್ನವು 1 ತರಮಕ್ಕುಂ ಧೃತಿ ತುಷ್ಟಿ ಪುಷ್ಟಿ ವಿಭವಂ ಸೌಭಾಗ್ಯಮಿಷ್ಟಾಂಗನಾ ಸುರತಂ ಕಾಂತಿಯಗುಂತಿ ಶಾಂತಿ ವಿಭವಂ ಭದ್ರಂ ಶುಭಂ ಮಂಗಳಂ || ೫
ಇದು ವಿವಿಧ ವಿಬುಧಜನವಿನುತ ಜಿನಪದಾಂಭೋಜ
ವರ ಪ್ರಸಾದೋತ್ಪನ್ನ ಪ್ರಸನ್ನ ಗಂಭೀರ ವಚನ ರಚನ ಚತುರ ಕವಿತಾಗುಣಾರ್ಣವ ವಿರಚಿತಮಪ್ಪ ವಿಕ್ರಮಾರ್ಜುನ ವಿಜಯದೊಳ್
ಚತುರ್ದಶಾಶ್ವಾಸಂ
೬೫. ಸಮಸ್ತಭಾರತಕಥಾಪ್ರಬಂಧವನ್ನು ಪ್ರೀತಿಸಿ ವಾಚಿಸಲು (ಓದಲು) ಕೇಳಲು ಬರೆಯಲು ಪ್ರಾರಂಭಮಾಡುವವನಿಗೆ ಬೇಕಾದಷ್ಟು ಅಭಿವೃದ್ಧಿಯಾಗುತ್ತದೆ. ಧೈರ್ಯ, ತೃಪ್ತಿ, ಬಲ, ವೈಭವ, ಸೌಭಾಗ್ಯ, ತನ್ನ ಇಷ್ಟಳಾದ ಸ್ತ್ರೀಯ ಸಂಭೋಗ, ಶಾಂತಿ, ವೃದ್ಧಿ, ವೈಭವ, ಭದ್ರ, ಶುಭ, ಮಂಗಳ ಇವೆಲ್ಲವೂ ಆಗುತ್ತವೆ. ವ! ಇದು ಅನೇಕ ದೇವತೆಗಳಿಂದ ಸ್ತುತಿಸಲ್ಪಟ್ಟ ಜಿನಪಾದಕಮಲಗಳ ವರಪ್ರಸಾದದಿಂದ ಹುಟ್ಟಿದುದೂ ತಿಳಿಯೂ ಗಂಭೀರವೂ ಆದ ಮಾತುಗಳ ರಚನೆಯಲ್ಲಿ ಚಾತುರ್ಯವುಳ್ಳವನೂ ಆದ ಕವಿತಾಗುಣಾರ್ಣವನಿಂದ ರಚಿತವಾದುದೂ ಆದ ವಿಕ್ರಮಾರ್ಜುನ ವಿಜಯದಲ್ಲಿ ಹದಿನಾಲ್ಕನೆಯ ಆಶ್ವಾಸವು.