________________
Coll
ಚoll
ಪ್ರಥಮಾಶ್ವಾಸಂ
ಶ್ರೀಯನರಾತಿ ಸಾಧನ ಪಯೋನಿಧಿಯೊಳ್ ಪಡೆದುಂ ಧರಿತ್ರಿಯಂ ಜೀಯನ ಬೇಡಿಕೊಳ್ಳದೆ ವಿರೋಧಿ ನರೇಂದ್ರರನೊತ್ತಿಕೊಂಡುಮಾ | ತೀಯ ಸುಪುಷ್ಪಪಟ್ಟಮನೊಡಂಬಡೆ ತಾಳಿಯುಮಿಂತುದಾತ್ತ ನಾ ರಾಯಣನಾದ ದೇವನೆಮಗೀಗರಿಕೇಸರಿ ಸೌಖ್ಯಕೋಟಿಯಂ *
ಮುಳಿಸು ಲಲಾಟನೇತ್ರಶಿಖಿ ಮೆಚ್ಚಿ ವಿನೂತ ರಸಪ್ರಸಾದಮು ಜಳ ಜಸಮಂಗಸಂಗತ ಲಸದ್ಧಸಿತಂ ಪ್ರಭುಶಕ್ತಿ ಶಕ್ತಿ ನಿ| ರ್ಮಳಮಣಿಭೂಷಣಂ ಫಣಿವಿಭೂಷಣಮಾಗೆ ನೆಗಯಂ ಪುದುಂ ಗೊಳಿಸಿದನೀಶ್ವರಂ ನೆಗಟ್ಟುದಾರ ಮಹೇಶ್ವರನೀಗ ಭೋಗಮಂ ||
*
C
G
೧. ಅಮೃತಮಥನ ಕಾಲದಲ್ಲಿ ಉದ್ಭವಿಸಿದ ಲಕ್ಷ್ಮಿಯನ್ನು ಶ್ರಮವಿಲ್ಲದೆ ಪಡೆದ, ಬಲಿಚಕ್ರವರ್ತಿಯಿಂದ ಬೇಡಿ ಭೂಮಿಯನ್ನು ಪಡೆದ, ಪುಷ್ಪಪಟ್ಟವೆಂಬ ಸಾಮಾನ್ಯ ಶಿರೋಭೂಷಣವನ್ನು ಪಡೆದ ನಾರಾಯಣನಂತಲ್ಲದೆ ಶತ್ರುಸೈನ್ಯವೆಂಬ ಸಮುದ್ರದ `ಮಂಥನದಿಂದ ಜಯಲಕ್ಷ್ಮಿಯನ್ನು ಬೇಡದೆ ಶತ್ರುರಾಜರುಗಳನ್ನು ಮೆಟ್ಟಿ ಭೂಮಿಯನ್ನೂ ತನ್ನ ಯೋಗ್ಯತೆಗೆ ಅನುಗುಣವಾದ ಸುಪುಷ್ಪಪಟ್ಟವೆಂಬ ಶಿರೋಭೂಷಣವನ್ನು ಪಡೆದು ಉದಾತ್ತನಾರಾಯಣನೆನಿಸಿಕೊಂಡಿರುವ ದೇವನಾದ ಅರಿಕೇಸರಿಯು ನಮಗೆ ಸೌಖ್ಯರಾಶಿಯನ್ನು ಕೊಡಲಿ, ೨. ಅರಿಕೇಸರಿಯ ಕೋಪವೇ ಈಶ್ವರನ ಹಣೆಗಣ್ಣಿನ ಬೆಂಕಿಯಾಗಿರಲು ಅವನ ಮೆಚ್ಚಿಗೆಯೇ ಶ್ಲಾಘವೂ ರಸಯುಕ್ತವೂ ಆದ ಅವನ ಪ್ರಸಾದ. ಅರಿಕೇಸರಿಯ ಯಶಸ್ಸೇ ಈಶ್ವರನು ಶರೀರಕ್ಕೆ ಲೇಪಿಸಿಕೊಂಡಿರುವ ಕಾಂತಿಯುಕ್ತವಾದ ವಿಭೂತಿಯಾಗಿರಲು ಅರಿಕೇಸರಿಯ ಶಕ್ತಿತ್ರಯಗಳಲ್ಲಿ ಒಂದಾದ ಪ್ರಭುಶಕ್ತಿ ಈಶ್ವರನ ಶಕ್ತಿದೇವತೆಯಾಗಿರಲು ಇವನ ನಿರ್ಮಲವಾದ ರತ್ನಭೂಷಣಗಳೇ ಅವನ ನಾಗಭೂಷಣವಾಗಿರಲು ವಿಶೇಷ ಪ್ರಸಿದ್ಧಿಯನ್ನು ತನ್ನಲ್ಲಿ ಅಳವಡಿಸಿಕೊಂಡಿರುವ ಈಶ್ವರನೂ ಉದಾರಮಹೇಶ್ವರನೆಂದು ಪ್ರಸಿದ್ಧಿಯನ್ನು ಪಡೆದಿರುವ ಅರಿಕೇಸರಿಯೂ ಸೌಖ್ಯರಾಶಿಯನ್ನು ಕೊಡಲಿ.
ವಕ್ತವ್ಯವಿಶೇಷ : ಈ ಪದ್ಯದಲ್ಲಿ ಬರುವ 'ಪುಷ್ಪಪಟ್ಟ'ವೆಂಬುದು ಶಿಲ್ಪಶಾಸ್ತ್ರಕ್ಕೆ ಸಂಬಂಧಿಸಿದ ಶಬ್ದ. ರಾಜರೂ ದೇವತೆಗಳೂ ಧರಿಸುವ ಶಿರೋವೇಷ್ಟನಗಳಲ್ಲಿ ಜಟಾ, ಮೌಳಿ, ಕಿರೀಟ, ಕರಂಡ, ಶಿರಸ್ತ್ರಕ, ಕುಂಡಲ, ಕೇಶಬಂಧ, ಧಮ್ಮಿಲ, ಅಲಕ, ಚೂಡ, ಮಕುಟ, ಪಟ್ಟ ಎಂಬ ಹನ್ನೆರಡು ವಿಧಾನಗಳಿವೆ. ಅರಿಕೇಸರಿಯು ಸಾಮಾನ್ಯ ಸಾಮಂತ ರಾಜನಲ್ಲದುದರಿಂದ ಸುಪುಷ್ಪಪಟ್ಟವನ್ನು ಧರಿಸಿದ್ದಾನೆ, ಇವುಗಳಲ್ಲಿ ಪಟ್ಟವೆಂಬುದು ಪತ್ರಪಟ್ಟ, ರತ್ನಪಟ್ಟ, ಪುಷ್ಪವೃಷ್ಟಿ ಎಂದು ಮೂರು ವಿಧ. ಇಲ್ಲಿಯ ಪುಷ್ಪವೃಷ್ಟಿಯೆಂಬ ಪಾಠವನ್ನು ಪುಷ್ಪಪಟ್ಟ ಎಂದು ತಿದ್ದಿಕೊಳ್ಳಬೇಕು.