________________
ಪ್ರಥಮಾಶ್ವಾಸಂ | ೬೯ ತಿಸುಳದೊಳುಚ್ಚಳಿಪ್ಪ ಪೂಸ ನೆತ್ತರೆ ಕೆಂದಳಿರಾಗೆ ಕಣ್ಣಗು ರ್ವಿಸುವಿನಮೊಕ್ಕು ನೇಲ್ಯ ಕರುಳ್ಳಿ ಯೆ ಬಾಳಮ್ಮಾಳಮಾಗೆ ಮಿ || ಕಸುರರ ಮೆಯ್ಯಳಾದ ವಿರಹಾಗ್ನಿಯನಾಜಿಸುತಿಂತ ತನ್ನ ಕೂ ರಸಿಯೊಳಡುರ್ತು ಕೊಂದಸಿಯಳಿ[ರ್ಕ]ಸಿಯೊಳ್ ಪಡಮಚ್ಚೆ ಗಂಡನಾ || ೬
ಮಲ್ಲಿಕಾಮಾಲೆ || ಎನ್ನ ದಾನಮಿದಾಗಳುಂ ಮಧುಪಾಶ್ರಯಂ ಧರೆಗವ್ಯವ
ಚಿನ್ನ ದಾನಮಿದಾಗಳುಂ ವಿಬುಧಾಶ್ರಯಂ ಗೆಲೆವಂದನೆ | ೩೩ಜೋನ್ನತಿಯಿಂದಮಾ ಪತಿಯೆಂದು ಮೆಚ್ಚಿ ವಿನಾಯಕಂ | ತಾನ್ನಿಮಿರ್ಚುಗೆ ಕಬ್ಬಮಂ ನಯದಿಂ ಗುಣಾರ್ಣವ ಭೂಪನಾ ||
೭
ಚಂ || ಬಗೆ ಪೊಸತಪ್ಪುದಾಗಿ ಮೃದುಬಂಧದೊಳೊಂದುವುದೊಂದಿ ದೇಸಿಯೊಳ್||
ಪುಗುವುದು ಪೊಕ್ಕ ಮಾರ್ಗದೊಳೆ ತಳ್ಳುದು ತಡೆ ಕಾವ್ಯಬಂಧಮೊ | ಪುಗುಮೆಳಮಾವು ಕೆಂದಳಿರ ಪೂವಿನ ಬಿಜಿಯಿಂ ಬಬಿಲ್ಲು ತುಂ ಬಿಗಳಿನೆ ತುಂಬಿ ಕೋಗಿಲೆಯ ಬಗ್ಗಿಸೆ ಸುಗ್ಗಿಯೊಳೊಪ್ಪುವಂತವೋಲ್ | ೮
ದಯಪಾಲಿಸಲಿ. ೬. ತನ್ನ ತ್ರಿಶೂಲದಿಂದ ಮೇಲಕ್ಕೆ ಚಿಮ್ಮುತ್ತಿರುವ ಹೊಸರಕ್ತವೇ ಕೆಂಪಾದ ಚಿಗುರಾಗಿರಲು ಕಣ್ಣಿಗೆ ಭಯವನ್ನುಂಟುಮಾಡುತ್ತ ಹೊರಕ್ಕೆ ಸೂಸಿ ನೇತಾಡುತ್ತಿರುವ ಕರುಳುಗಳ ಸಮೂಹವೇ ಎಳೆಯ ತಾವರೆಯ ದಂಟಾಗಿರಲು ಹದ್ದುಮೀರಿದ ರಾಕ್ಷಸರ ದೇಹದಲ್ಲುಂಟಾದ ಅಗಲಿಕೆಯೆಂಬ ಬೆಂಕಿಯನ್ನು ಅವು ಆರಿಸುತ್ತ ತನ್ನ ಹರಿತವಾದ ಕತ್ತಿಯನ್ನು ಆಶ್ರಯಿಸಿಕೊಂಡಿರುವ ಕೃಶಾಂಗಿಯಾದ ದುರ್ಗಿಯು ಪಡೆಮಚ್ಚಗಂಡನೆಂಬ ಬಿರುದುಳ್ಳ ಅರಿಕೇಸರಿಯ ಕತ್ತಿಯನ್ನು ಸೇರಿಕೊಂಡಿರಲಿ. ೭. ಮಧುಪಾಶ್ರಯಂ (ಅಂದರೆ ದುಂಬಿಗಳಿಗೆ ಅವಲಂಬನ ವಾದುದು- ಬಾಹ್ಯಾರ್ಥದಲ್ಲಿ ಧ್ವನಿಯಲ್ಲಿ ಮದ್ಯಪಾನ ಮಾಡುವವರಿಗೆ ಅವಲಂಬನವಾದುದು) ಅರಿಕೇಸರಿಯ ದಾನವು (ವಸ್ತುಗಳನ್ನು ಪ್ರದಾನಮಾಡುವುದುಕೊಡುಗೆಯು) ವಿಬುಧಾಶ್ರಯಂ ಅಂದರೆ ವಿದ್ವಾಂಸರಿಗೆ ಅವಲಂಬನವಾದುದು. ಆದುದರಿಂದ ಈ ರಾಜನಾದ ಅರಿಕೇಸರಿಯು ತನ್ನ ಮೇಲೆಯಿಂದ ನನ್ನನ್ನು ಗೆದ್ದಿದ್ದಾನೆ ಎಂಬ ಮೆಚ್ಚಿಗೆಯಿಂದ ವಿನಾಯಕನು ಗುಣಾರ್ಣವನೆಂಬ ಬಿರುದಾಂಕಿತನಾದ ಈ ಅರಿಕೇಸರಿಯ ವಿಷಯಕವಾದ ಈ ಕಾವ್ಯವನ್ನು ನಯವಾಗಿ ವಿಸ್ತರಿಸಲಿ. ೮. ಕಾವ್ಯವು ನವನವೋಜ್ವಲವಾಗಿರಬೇಕು. ಮೃದು ಶಬ್ದಗಳ ಜೋಡಣೆಯಿಂದ ಕೂಡಿರಬೇಕು. ಅಚ್ಚಗನ್ನಡ ಶೈಲಿಯಲ್ಲಿ ರಚಿತವಾಗಿರಬೇಕು. ಸಂಸ್ಕೃತ ಶೈಲಿಯೊಂದಿಗೆ ಹೊಂದಿಕೊಂಡಿರಬೇಕು. ಹೀಗೆ ಸೇರಿಕೊಂಡಿದ್ದರೆ ಕಾವ್ಯರಚನೆಯು ವಸಂತಕಾಲದಲ್ಲಿ ಮಾವಿನ ಮರವು ಕೆಂಪಾದ ಚಿಗುರು ಮತ್ತು ಹೂವುಗಳ ಭಾರದಿಂದ ಜೋತುಬಿದ್ದು - ತುಂಬಿಗಳಿಂದ ಆವೃತವಾಗಿ ಕೋಗಿಲೆಯ ಕೂಜನದಿಂದ ಪ್ರಕಾಶಿಸುವ ಹಾಗೆ