________________ * 82 ಅಖಿಲ ಭಾರತ 4444, 4-## ಪ್ರಿಯ ಕನ್ನಡ ಬಂಧುಗಳೆ, ೧೯೧೫ರಲ್ಲಿ ಸ್ಥಾಪನೆಗೊಂಡ ಕನ್ನಡ ಸಾಹಿತ್ಯ ಪರಿಷತ್ತು ಶತಮಾನೋತ್ಸವವನ್ನು ಪೂರೈಸಿದೆ. ಸ್ಥಾಪನೆಗೊಂಡಂದಿನಿಂದ ಇಂದಿನವರೆಗೂ ಕನ್ನಡ - ಕನ್ನಡಿಗ - ಕರ್ನಾಟಕದ ಒಳಿತಿಗೆ ಶ್ರಮಿಸುತ್ತಾ, ಕನ್ನಡಿಗರಲ್ಲಿ ಸಾಹಿತ್ಯ ಮತ್ತು ಸಾಂಸ್ಕೃತಿಕ ಎಚ್ಚರ ಮೂಡಿಸುವಲ್ಲಿ ಪರಿಷತ್ತಿನ ಪ್ರಕಟಣೆಗಳು ಮಹತ್ವದ ಪಾತ್ರ ವಹಿಸುತ್ತಾ ಬಂದಿವೆ. ನಮ್ಮ ಪ್ರಕಟಣೆಗಳು ಓದುಗರ ಜೇಬಿಗೆ ಭಾರವೆನಿಸುವಂಥವಲ್ಲ, ಆದಷ್ಟೂ ಕಡಿಮೆ ಬೆಲೆಯಲ್ಲಿ ಮೌಲಿಕ ಕೃತಿಗಳನ್ನು ಸಹೃದಯರಿಗೆ ಕೊಡಬೇಕೆನ್ನುವ ನೀತಿಗೆ ಪರಿಷತ್ತು ಈಗಲೂ ಬದ್ದವಾಗಿದೆ. ಕನ್ನಡಿಗರನ್ನು ಪ್ರಜ್ಞಾವಂತರಾಗಿ, ಅಭಿಮಾನ ಧನರಾಗಿ, ವಿಶ್ವಮಾನವರಾಗಿ ರೂಪಿಸಲು ಪರಿಷತ್ತು ಪ್ರಕಟಿಸುವ ಸಾಹಿತ್ಯವು ಪೂರಕವಾಗಿರಬೇಕೆನ್ನುವ ಆಶಯ ನನ್ನದು. ಪರಿಷತ್ತು ಈಗಾಗಲೇ ಪ್ರಕಟಿಸಿ ಅತ್ಯಂತ ಜನಪ್ರಿಯವಾಗಿರುವ ಮರುಮುದ್ರಣ ಮಸ್ತಕಗಳು ಹಾಗೂ ಹೊಸ ಪುಸ್ತಕಗಳನ್ನು ರಾಯಚೂರಿನಲ್ಲಿ ನಡೆಯುತ್ತಿರುವ ಅಖಿಲ ಭಾರತ ೮೨ನೆಯ ಕನ್ನಡ ಸಾಹಿತ್ಯ ಸಮ್ಮೇಳನದ ಸಂದರ್ಭದಲ್ಲಿ ಮುದ್ರಣಗೊಳಿಸಿ ಕನ್ನಡಿಗರ ಕೈಗೊಪ್ಪಿಸುವುದಕ್ಕೆ ನಮಗೆ ಹೆಮ್ಮೆಯೆನಿಸುತ್ತದೆ. ಸಹೃದಯರು ಈ ಪುಸ್ತಕಗಳನ್ನು ಎಂದಿನ ಪ್ರೀತ್ಯಾದರಗಳಿಂದ ಬರಮಾಡಿ ಕೊಳ್ಳುವರೆಂಬ ಭರವಸೆ ನನಗಿದೆ. ಡಾ. ಮನು ಬಳಿಗಾರ್ ಅಧ್ಯಕ್ಷರು ಕನ್ನಡ ) ಕನ್ನಡ ಸಾಹಿತ್ಯ ಪರಿಷತ್ತು ಪಂಪ ಮಹಾಕವಿ ರಸ್ತೆ, ಚಾಮರಾಜಪೇಟೆ ಬೆಂಗಳೂರು-೫೬೦೦೧೮